ಸಿಇಟಿ ಪರೀಕ್ಷೆ-2025: ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ, ವಿವರ

ಬೆಂಗಳೂರು, ಏಪ್ರಿಲ್ 13: ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ವಾರ್ಷಿಕವಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ ಅಥವಾ ಕೆ-ಸಿಇಟಿ). 2025ರ ಸಿಇಟಿ ಪರೀಕ್ಷೆಗಳು ಏಪ್ರಿಲ್ 16, 17 ರಂದು ನಡೆಯಲಿದೆ. ಸಿಇಟಿ ಪರೀಕ್ಷೆಗಾಗಿ ಪರೀಕ್ಷಾ ಕೇಂದ್ರಗಳಲ್ಲಿ ತಯಾರಿಗಳು ನಡೆಯುತ್ತಿವೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ಸಹ ನಿಗದಿಗೊಳಿಸಲಾಗಿದೆ.

ಸಿಇಟಿ-2025ರ ಪರೀಕ್ಷೆಯು ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ನಡೆಯಲಿದೆ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಜಿಲ್ಲಾಡಳಿತ ಈಗಾಗಲೇ ಸೂಚನೆ ನೀಡಿದೆ.

KCET Exam 2025 On April 16 And 17 Dress Code Details

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಣೆ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಬಂದ್ ಮಾಡಲಾಗುತ್ತದೆ. ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ.

ಪರೀಕ್ಷೆ ಡ್ರೆಸ್ ಕೋಡ್: ಏಪ್ರಿಲ್ 16ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಏ.17 ರಂದು ಬೆಳಗ್ಗೆ 10.30 ರಿಂದ 11.50 ರ ವರೆಗೆ ಗಣಿತಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ. ಎಲ್ಲಾ ವಿಷಯಗಳು 60 ಅಂಕಗಳಿಗೆ ಸೀಮಿತವಾಗಿರುತ್ತದೆ.

ಪರೀಕ್ಷೆ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯವನ್ನು ಒದಗಿಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಬೇಕು, ಜೊತೆಗೆ ಗಾಳಿ, ಬೆಳಕು ಸರಿಯಾಗಿರಬೇಕು. ಕೆಲವು ಕಾಲೇಜುಗಳಲ್ಲಿ ಶೌಚಾಲಯದ ಬಳಿ ಇರುವ ಕೊಠಡಿಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಸೂಚಿಸಲಾಗಿದೆ.

ಸಿಇಟಿ-2025 ಪರೀಕ್ಷೆ ಬರೆಯುವ ಪುರುಷ, ಮಹಿಳಾ ಅಭ್ಯರ್ಥಿಗಳು ವಸ್ತ್ರಸಂಹಿತೆ ಪಾಲನೆ ಮಾಡಬೇಕು. ಪುರುಷ ಅಭ್ಯರ್ಥಿಗಳಿಗೆ ಪರೀಕ್ಷಾ ದಿನ ಪೂರ್ಣ ತೋಳಿನ ಶರ್ಟ್‍ಗಳನ್ನು ಅನುಮತಿಸಲಾಗುವುದಿಲ್ಲ, ಅರ್ಧತೋಳಿನ ಶರ್ಟ್‍ಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಸಾಧಾರಣ ಶರ್ಟ್, ಟೀ ಶರ್ಟ್ ಧರಿಸಬೇಕು. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಜೇಬುಗಳು ಇಲ್ಲದಿರುವ, ಕಮ್ಮಿ ಜೇಬಿಗಳಿರುವ ಪ್ಯಾಂಟ್ ಮತ್ತು ಸರಳ ಪ್ಯಾಂಟ್ ಧರಿಸಬೇಕು.

ಬಟ್ಟೆಗಳು ಹಗುರವಾಗಿರಬೇಕು. ಜಿಪ್ ಪಾಕೆಟ್‍ಗಳು, ಪಾಕೆಟ್‍ಗಳು, ದೊಡ್ಡ ಬಟನ್‍ಗಳು ಮತ್ತು ವಿಸ್ತಾರವಾದ ಕಸೂತಿ ಬಟ್ಟೆಗಳಿರಬಾರದು. ಪರೀಕ್ಷಾ ಕೊಠಡಿಯಲ್ಲಿ ಶೂಗಳು ನಿಷೇಧ. ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗದ ಚಪ್ಪಲಿಗಳನ್ನು ಧರಿಸಬೇಕು. ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರುಗಳು, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆ ಧರಿಸುವುದು ನಿಷೇಧ. ಪೂರ್ಣ ತೋಳಿನ ಬಟ್ಟೆ, ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಮತ್ತು ವಸ್ತ್ರ ಸಂಹಿತೆಯಂತೆ ಬಟ್ಟೆ ಧರಿಸಬೇಕು.

ಹೀಲ್ಡ್ ಚಪ್ಪಲಿ, ಶೂಗಳನ್ನು ಧರಿಸಬಾರದು, ತೆಳುವಾದ ಅಡಿಪಾಯವಿರುವ ಚಪ್ಪಲಿ ಧರಿಸಬೇಕು. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಲೋಹದ ಆಭರಣ ಧರಿಸುವಂತಿಲ್ಲ.

ಡ್ರೆಸ್ ಕೋಡ್ ಜೊತೆಗೆ ಎಲೆಕ್ಟ್ರಾನಿಕ್ಸ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂಥ್, ಕೈ ಗಡಿಯಾರಗಳನ್ನು ಕೊಠಡಿಗೆ ತರುವಂತಿಲ್ಲ. ತಿನ್ನಬಹುದಾದ ವಸ್ತುಗಳನ್ನು ತರುವಂತಿಲ್ಲ, ಬಣ್ಣದ ಹಾಗೂ ಲೋಹದ ಕುಡಿಯುವ ನೀರಿನ ಬಾಟಲಿಗೂ ಅನುಮತಿ ಇಲ್ಲ, ಕೇಂದ್ರದಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.

ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸುವಂತಿಲ್ಲ ಹಾಗೂ ಮುಖಮುಚ್ಚುವಂತ ಮಾಸ್ಕ್ ಧರಿಸುವಂತಿಲ್ಲ.

ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಬೇಕು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕು. ಪರೀಕ್ಷಾ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

ಅಭ್ಯರ್ಥಿಗಳು ಕೇಂದ್ರದೊಳಗೆ ಕನಿಷ್ಠ ಮೊದಲ ಬೆಲ್ ಆಗುವ 2 ಗಂಟೆ ಮುಂಚಿತವಾಗಿ ಹಾಜರಿರಬೇಕು. ಕೇಂದ್ರದಲ್ಲಿ ಕೊಠಡಿ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳ ಮುಖವನ್ನಾಧರಿಸಿ ಆಫ್ ಮೂಲಕ ಗುರುತು ಪತ್ತೆ ಮಾಡುವ ಕಾರ್ಯ ನಡೆಯಲಿದೆ. ಮತ್ತು ಎಲ್ಲಾ ಅಭ್ಯರ್ಥಿಗಳ ಸಂಪೂರ್ಣ ತಪಾಸಣೆ ನಡೆಯುವುದರಿಂದ ಮೊದಲ ಬೆಲೆ ಆಗುವ ಮುನ್ನ 2 ಗಂಟೆಗಳ ಕಾಲ ಮುಂಚಿತವಾಗಿ ಕೇಂದ್ರದಲ್ಲಿರಬೇಕು. ಬೆಳಗ್ಗೆ 10.20ಕ್ಕೆ ಮತ್ತು ಮಧ್ಯಾಹ್ನ 2.20ಕ್ಕೆ ಮೊದಲ ಬೆಲೆ ಆಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+