ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

KCET 2022 Exam Dates: ಸಿಇಟಿ ಪ್ರವೇಶ ಪರೀಕ್ಷೆ ದಿನಾಂಕ ಘೋಷಣೆ; ಇಲ್ಲಿದೆ ವೇಳಾಪಟ್ಟಿ

|
Google Oneindia Kannada News

ಬೆಂಗಳೂರು, ಮಾರ್ಚ್ 28: ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (K-CET) ದಿನಾಂಕ ನಿಗದಿಯಾಗಿದ್ದು, ಜೂನ್ 16, 17, 18ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ.

ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಪರೀಕ್ಷೆ ನಡೆಯಲಿದ್ದರೆ, ಜೂ.17ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಇನ್ನು ಜೂ.18ರಂದು ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆಗಳು ನಡೆಯಲಿವೆ.

ಏಪ್ರಿಲ್ 5ರಿಂದ 20ರವರೆಗೆ ಸಿಇಟಿಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಏಪ್ರಿಲ್ 22ರವರೆಗೆ ಶುಲ್ಕ ಪಾವತಿಗೆ ಅವಕಾಶ ಇರುತ್ತದೆ. ಮಾಹಿತಿ ಪರಿಷ್ಕರಣೆಗೆ ಮೇ 2ರಿಂದ 6ರವರೆಗೆ ಅನುಮತಿ ನೀಡಲಾಗಿದೆ. ಮೇ 30ರಿಂದ ಪ್ರವೇಶ ಪತ್ರಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್​. ಅಶ್ವತ್ಥ್​​ ನಾರಾಯಣ ಮಾಹಿತಿ ನೀಡಿದ್ದಾರೆ.

KCET Exam Dates 2022: Karnataka CET 2022 exam to be conducted on June 16, 17 and 18

CET2022 ಪ್ರಸ್ತಾವಿತ ವೇಳಾಪಟ್ಟಿ ಇಂತಿದೆ
* 16/06/2022 - ಜೀವಶಾಸ್ತ್ರ, ಗಣಿತ
* 17/06/2022 - ಭೌತಶಾಸ್ತ್ರ, ರಸಾಯನಶಾಸ್ತ್ರ
* 18/06/2022 - ಕನ್ನಡ (ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ)

ಇತರ ರಾಜ್ಯಗಳಲ್ಲಿ ಈಗಾಗಲೇ ಪರೀಕ್ಷೆಯ ಸಂಭನೀಯ ದಿನಾಂಕಗಳು ಪ್ರಕಟವಾಗಿವೆ. ಅದರಂತೆ ರಾಜ್ಯದಲ್ಲಿಯೂ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದರು.

KCET Exam Dates 2022: Karnataka CET 2022 exam to be conducted on June 16, 17 and 18

ವಿವಿಧ ಕಾರಣಗಳಿಂದಾಗಿ ನೀಟ್ ಪರೀಕ್ಷೆ (NEET) ವಿಳಂಬವಾಗಿರುವ ಕಾರಣ ಸಿಇಟಿಗೆ ಅರ್ಜಿ ಅಹ್ವಾನವು ತಡವಾಗಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ ಇತ್ತೀಚೆಗೆ ಹೇಳಿದ್ದರು. ಸಾಮಾನ್ಯವಾಗಿ ಜನವರಿಯಲ್ಲಿ ಸಿಇಟಿಗೆ ಅರ್ಜಿ ಆಹ್ವಾನಿಸಲಾಗುತ್ತಿತ್ತು ಎಂದರು.

ಉಕ್ರೇನ್​ನಲ್ಲಿ ಹಾವೇರಿಯ ನವೀನ್ ಗ್ಯಾನಗೌಡರ್ ನಿಧನರಾದ ನಂತರ ನೀಟ್ ಪರೀಕ್ಷೆಯ ಬದಲು ಸಿಇಟಿಗೆ ಹೆಚ್ಚಿನ ಮಹತ್ವ ಕೊಡಬೇಕು. ಅದನ್ನೇ ಆಧರಿಸಿ ವೈದ್ಯಕೀಯ ಶಿಕ್ಷಣಕ್ಕೆ ಅವಕಾಶ ಕೊಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಕಾಂಗ್ರೆಸ್​ನ ಯು.ಟಿ. ಖಾದರ್ ಸಹ ಇದೇ ಒತ್ತಾಯ ಮಾಡಿದ್ದರು. ಆದರೆ ಸಚಿವ ಅಶ್ವತ್ಥ್ ನಾರಾಯಣ ನೀಟ್ ವ್ಯವಸ್ಥೆಯನ್ನು ಸಮರ್ಥಿಸಿಕೊಂಡಿದ್ದರು.

KCET Exam Dates 2022: Karnataka CET 2022 exam to be conducted on June 16, 17 and 18

Recommended Video

ಒಂದೂ ಪಂದ್ಯವನ್ನ ಗೆದ್ದಿಲ್ಲಾ ಇವ್ರು !! | Oneindia Kannada

ನೀಟ್​ನ ಶುಲ್ಕ ವ್ಯವಸ್ಥೆಯ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ಶೇ.45 ಉಚಿತ ಸೀಟುಗಳನ್ನು ಕೊಡಲಾಗುತ್ತಿದೆ. ಯಾವುದೇ ಮ್ಯಾನೇಜ್​ಮೆಂಟ್ ಕಡಿಮೆ ದರದಲ್ಲಿ ಡಾಕ್ಟರ್ ಮಾಡಲು ಸಾಧ್ಯವಿಲ್ಲ. ಎಲ್ಲರೂ ಡಾಕ್ಟರ್ ಆಗಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಮುಂದಾಗುತ್ತಿದ್ದಾರೆ ಎಂದಿದ್ದರು.

ಮೀಸಲಾತಿ ಬಗ್ಗೆ ಮಾತು ಇದ್ದೇ ಇರುತ್ತದೆ. ಕಡು ಬಡವರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುತ್ತಾರೆ. ಪ್ರಧಾನಿಗಳಿಗೆ 60:40 ಅನುಪಾತದಲ್ಲಿ ಎಲ್ಲೆಡೆ ಮೆಡಿಕಲ್ ಕಾಲೇಜು ಇರಬೇಕು ಎಂಬ ಹಂಬಲ‌ ಇದೆ. ಹಾಗಾಗಿ ಬಡವರಿಗೂ ಮೆಡಿಕಲ್ ಸೀಟು ಸಿಗುವ ಕೆಲಸ ಆಗುತ್ತಿದೆ. ನೀಟ್ ಮೂಲಕ ವ್ಯವಸ್ಥೆ ಸರಿಪಡಿಸುವ ಕೆಲಸ ಆಗುತ್ತಿದೆ. ನೀಟ್ ಸಾಮಾನ್ಯ ವ್ಯಕ್ತಿಗೂ ನ್ಯಾಯ ಸಿಗುವ ಕೆಲಸ ಮಾಡುತ್ತಿದೆ. ನೀಟ್ ದೇಶದ ಉತ್ತಮ ವ್ಯವಸ್ಥೆ ಆಗಿದೆ. ನೀಟ್ ವಿರೋಧಿಸುವವರು ಹಣ ಮಾಡುವವರು, ದ್ರೋಹಿಗಳು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದರು.

English summary
KCET 2022 Schedule: Karnataka Common Entrance Test-2022 for professional courses will be held on June 16, 17, and 18 announced Minister for Higher education minister Dr CN Aswath Narayan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X