ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯಾರ್ಥಿಗಳ ನೆರವಿಗೆ ಹೈಕೋರ್ಟ್, ಹೊಸ ಸಿಇಟಿ Ranking ಪ್ರಕಟಿಸಲು ಆದೇಶ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಸೆ.4: 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶದಿಂದ ಅವಕಾಶ ವಂಚಿತರಾಗುವ ಆತಂಕದಲ್ಲಿದ್ದ 2020-21ನೇ ಸಾಲಿನ ದ್ವಿತೀಯ ಪಿಯು ಪುನರಾವರ್ತಿತ ಸಾವಿರಾರು ವಿದ್ಯಾರ್ಥಿಗಳ ಪರವಾಗಿ ಹೈಕೋರ್ಟ್ ತೀರ್ಪು ನೀಡಿದೆ.

ಪಿಯುಸಿಯಲ್ಲಿ ಶೇ.50 ಮತ್ತು ಸಿಇಟಿಯ ಶೇ.50 ಅಂಕ ಪರಿಗಣಿಸಿ ಹೊಸದಾಗಿ Ranking ಪ್ರಕಟಿಸುವಂತೆ ನ್ಯಾಯಾಲಯ ಆದೇಶ ನೀಡಿದೆ.

2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ವೃತ್ತಿಪರ ಕೋರ್ಸ್‌ಗಳ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಲಾಗದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2022 ಜು.30ರಂದು ಹೊರಡಿಸಿದ್ದ ಟಿಪ್ಪಣಿಯನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಸಿಇಟಿ ಬಿಕ್ಕಟ್ಟು: 75:25 ಅನುಪಾತ ಸೂತ್ರ ತಿರಸ್ಕರಿಸಿದ ಕೆಇಎಸಿಇಟಿ ಬಿಕ್ಕಟ್ಟು: 75:25 ಅನುಪಾತ ಸೂತ್ರ ತಿರಸ್ಕರಿಸಿದ ಕೆಇಎ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್‌. ಈಶ್ವರ್‌, ಚಿಕ್ಕಬಳ್ಳಾಪುರದ ವೈ.ಎಚ್‌. ಕೀರ್ತನಾ, ಬೆಂಗಳೂರಿನ ಮನಸ್ವಿನಿ ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯಪೀಠ ಶನಿವಾರ ಪ್ರಕಟಿಸಿತು.

ಹೈಕೋರ್ಟ್ ಆದೇಶವೇನು?: ಅಲ್ಲದೇ 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022-23ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಲಾಗದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2022 ಜು.30ರಂದು ಹೊರಡಿಸಿದ್ದ ಟಿಪ್ಪಣಿಯನ್ನು ರದ್ದುಗೊಳಿಸಿದೆ.

2022-23ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ರಾರ‍ಯಂಕಿಂಗ್‌ ಅನ್ನು 'ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ನಿಯಮಗಳು-2006' (ಸಿಇಟಿ ನಿಯಮಗಳು-2006)ರ ನಿಯಮ 3 ಮತ್ತು 4ರ ಅನ್ವಯ 'ಮರು' (ರೀಡು) ಮಾಡಬೇಕು. 2020-21ನೇ ಸಾಲಿನಲ್ಲಿ ಪಿಯುಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಗಣಿಸಿದ ಶೇ.50 ಅಂಕಗಳು ಮತ್ತು ಸಿಇಟಿಯಲ್ಲಿಪಡೆದ ಶೇ.50 ಅಂಕಗಳನ್ನು ಪರಿಗಣಿಸಿ ಹೊಸ ಶ್ರೇಯಾಂಕ ಪಟ್ಟಿ ಪ್ರಕಟಿಸಬೇಕು ಎಂದು ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

KCET PU Repeaters Row: KEA to re-do the entire ranking process

ಅಸಮಂಜಸ, ತಾರತಮ್ಯ: 2021ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿಪಡೆದ ಅಂಕಗಳನ್ನು 2022-23ನೇ ಸಾಲಿನ ಇತರ ಪದವಿ ಕೋರ್ಸ್‌ಗಳಿಗೆ ಪರಿಗಣಿಸಲಾಗಿದೆ. ಆದರೆ, ಅದೇ ಅಂಕಗಳನ್ನು ಇಂಜಿನಿಯರಿಂಗ್ ಹಾಗೂ ತಾಂತ್ರಿಕ ಕೋರ್ಸ್‌ಗಳಿಗೆ ಪರಿಗಣಿಸದಿರುವುದು ತಾರತಮ್ಯ ಎನಿಸಿಕೊಳ್ಳಲಿದೆ. ಆದ್ದರಿಂದ, ಕೆಇಎ ಟಿಪ್ಪಣಿ ಅಸಮಂಜಸವಾಗಿದ್ದು ಅದನ್ನು ರದ್ದುಪಡಿಸಬಹುದಾಗಿದೆ ಎಂದು ಕೋರ್ಟ್‌ ತಿಳಿಸಿದೆ.

ಸಿಇಟಿ: ಅತಿವೃಷ್ಟಿಯಿಂದ ವಿದ್ಯುತ್ ಅಡಚಣೆ; ದಾಖಲಾತಿಗಳ ಪರಿಶೀಲನೆಗೆ ಮತ್ತಷ್ಟು ಅವಕಾಶಸಿಇಟಿ: ಅತಿವೃಷ್ಟಿಯಿಂದ ವಿದ್ಯುತ್ ಅಡಚಣೆ; ದಾಖಲಾತಿಗಳ ಪರಿಶೀಲನೆಗೆ ಮತ್ತಷ್ಟು ಅವಕಾಶ

ಸಿಇಟಿ Ranking ಪ್ರಕಟವಾದ ದಿನವೇ 2021ನೇ ಸಾಲಿನ ಪಿಯು ಅಂಕಗಳನ್ನು ಪರಿಗಣಿಸದ ಬಗ್ಗೆ ಕೆಇಎ ಟಿಪ್ಪಣಿ ಹೊರಡಿಸಿದೆ. ಆಯ್ಕೆ ಪ್ರಕ್ರಿಯೆ ಆರಂಭಗೊಂಡು ಅದು ಮುಗಿಯುವ ಹಂತದಲ್ಲಿರುವಾಗ ಈ ರೀತಿ ಅರ್ಹತಾ ಮಾನದಂಡಗಳನ್ನು ಬದಲಿಸಲು ಸಾಧ್ಯವಿಲ್ಲ. 2022ರ ಏ.18ರಿಂದ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಜು.30ರಂದು ಮುಕ್ತಾಯ ಹಂತದಲ್ಲಿರುವಾಗ ಕೆಇಎ ಆದೇಶ ಹೊರಡಿಸಿದೆ. ಇದು ಕಾನೂನುಬಾಹಿರ ಕ್ರಮವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

KCET PU Repeaters Row: KEA to re-do the entire ranking process

2022ನೇ ಸಾಲಿನ ಸಿಇಟಿಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಹಾಗೂ ಕೆಇಎ ಹೊರಡಿಸಿರುವ ಬುಲೆಟಿನ್‌ನಲ್ಲಿ ಅರ್ಹತೆ, ವಿದ್ಯಾರ್ಹತೆ, ಮೆರಿಟ್‌ ಮತ್ತಿತರ ಅಂಶಗಳನ್ನು ಉಲ್ಲೇಖಿಸಲಾಗಿದ್ದು, ದ್ವಿತೀಯ ಪಿಯುಸಿ ಹಾಗೂ ಸಿಇಟಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಸಮಾನ ಪ್ರಮಾಣದಲ್ಲಿ ಪರಿಗಣಿಸುವ ಬಗ್ಗೆ ಹೇಳಲಾಗಿದೆಯೇ ಹೊರತು, 2021ನೇ ಸಾಲಿನ ಅಂಕಗಳನ್ನು ಪರಿಗಣಿಸದಿರುವ ಬಗ್ಗೆ ಎಲ್ಲಿಯೂ ಸ್ಪಷ್ಟವಾಗಿ ಹಾಗೂ ಸೂಚ್ಯವಾಗಿ ತಿಳಿಸಿಲ್ಲಎಂದು ನ್ಯಾಯಾಲಯ ಹೇಳಿದೆ.

ಅವಕಾಶ ವಂಚನೆ: 2021ರಲ್ಲಿ ಪಿಯು ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಅವರ ಪಿಯು ಅಂಕಗಳನ್ನು 2022ನೇ ಸಾಲಿನ ಸಿಇಟಿ ರಾರ‍ಯಂಕ್‌ಗೆ ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಮೊದಲೇ ಮಾಹಿತಿ ನೀಡಿಲ್ಲ. 2022ರ ಜು.30ರಂದು ಟಿಪ್ಪಣಿ ಹೊರಡಿಸುವವರೆಗೂ ವಿದ್ಯಾರ್ಥಿಗಳಿಗೆ ಆ ಬಗ್ಗೆ ಯಾವುದೇ ಮಾಹಿತಿಯೇ ಇರಲಿಲ್ಲ. ಪರೀಕ್ಷಾ ಪ್ರಾಧಿಕಾರದ ಈ ಕ್ರಮ ಅರ್ಜಿದಾರರು ಹಾಗೂ ಇತರ ಪುನರಾವರ್ತಿತ ವಿದ್ಯಾರ್ಥಿಗಳನ್ನು ಅವಕಾಶವಂಚಿತರನ್ನಾಗಿಸುತ್ತದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, 2022ನೇ ಸಾಲಿನಲ್ಲಿವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ 2021-22ನೇ ಶೈಕ್ಷಣಿಕ ವರ್ಷದ ಪಿಯು ಅಂಕ ಅನ್ವಯಿಸುವುದಿಲ್ಲಎಂದು ಕೆಇಎ ಹೇಳಿದೆ. ಈ ಕುರಿತು ಸಂಬಂಧಪಟ್ಟ ಕಾಯ್ದೆಗೆ ತಿದ್ದುಪಡಿ ತರದೇ ಆದೇಶ ಮಾಡಿ, ಜಾರಿಗೊಳಿಸಲು ಮುಂದಾಗಿದೆ. ಪರೀಕ್ಷೆ ಮುಗಿದ್ದು, ಫಲಿತಾಂಶ ಪ್ರಕಟಿಸಿರುವಾಗ ಕೆಇಎ ನಿಯಮ ಬದಲಿಸಲಾಗದು. ಕೆಇಎ ನೀತಿ ತಾರತಮ್ಯ ಮತ್ತು ಕಾನೂನನುಬಾಹಿರವಾಗಿದೆ ಎಂದಿದ್ದರು.

English summary
KCET PU Repeaters Row: Karnataka High Court comes in aide of PU Repeaters: Asks Karnataka Examination Authority(KEA) to re do ranking considering 50% CET and 50% PU Marks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X