ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು ಸಿಇಟಿ ಫಲಿತಾಂಶ ಪ್ರಕಟ, ರಿಸಲ್ಟ್ ನೋಡುವುದು ಹೇಗೆ?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 20: ಇಂದು 2021-2022ನೇ ಸಾಲಿನ ಸಿಇಟಿ ಫಲಿತಾಂಶ ಹೊರಬೀಳಲಿದೆ.

ಆಗಸ್ಟ್ 28, 29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇಂಜಿನಿಯರಿಂಗ್, ಯೋಗಾ, ನ್ಯಾಚುರೋಪತಿ, ಬಿಫಾರ್ಮ್, ಫಾರ್ಮಾ ಡಿ, ವೆಟರ್ನರಿ ಮತ್ತು ಫಾರ್ಮ್ ಸೈನ್ ಕೋರ್ಸ್ ಗಳಿಗೆ ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಇಂದು ಮಧ್ಯಾಹ್ನ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ.

ಮಲ್ಲೇಶ್ವರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಯಲಿದೆ. ಸುದ್ದಿಗೋಷ್ಠಿ ಬಳಿಕ 2020-21ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ.

 KCET Result 2021 Releasing Today: Here Is When, Where And How To Check

ಕೌನ್ಸೆಲಿಂಗ್ ಪ್ರಕ್ರಿಯೆಯು ಅಕ್ಟೋಬರ್​​ನಿಂದ ಪ್ರಾರಂಭವಾಗಲಿದೆ. ಈ ವರ್ಷ ಒಟ್ಟು 2,01,834 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. 1.89 ಲಕ್ಷ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದು, ಶೇ.92.90% ಹಾಜರಾತಿ ದಾಖಲಾಗಿದೆ. ಅದೇ ರೀತಿ 1.62 ಲಕ್ಷ ವಿದ್ಯಾರ್ಥಿಗಳು ಜೀವಶಾಸ್ತ್ರ ಪರೀಕ್ಷೆ ಬರೆದಿದ್ದು ಶೇ.80.48% ಹಾಜರಾತಿ ದಾಖಲಾಗಿದೆ.

1.93 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದು ಶೇ.95.88% ಹಾಜರಾತಿ ದಾಖಲಾಗಿದೆ. 1.93 ಲಕ್ಷ ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆ ಬರೆದಿದ್ದು ಶೇ.95.91% ಹಾಜರಾತಿ ದಾಖಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್ ಸೈಟ್​​ನಲ್ಲಿ ಫಲಿತಾಂಶ ಲಭ್ಯವಾಗಲಿದೆ. kea.kar.nic.in ವೆಬ್ ಸೈಟ್ ನಲ್ಲಿ‌ ಫಲಿತಾಂಶ ವೀಕ್ಷಿಸಬಹುದು. ಇಂದು ಸಂಜೆ 4 ಗಂಟೆಗೆ ವೆಬ್​​ಸೈಟ್​​​ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಗೆ, ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳ ಅರ್ಹತೆಯು ಒಂದೇ ಆಗಿರುವಾಗ, ಇಂಟರ್-ಸೆ ಮೆರಿಟ್ ಅನ್ನು ಕೆಸಿಇಟಿ 2021 ರಲ್ಲಿ ಪಡೆದಿರುವ ಅಂಕಗಳನ್ನು ಉಲ್ಲೇಖಿಸಿ ನಿರ್ಧರಿಸಲಾಗುತ್ತದೆ. ಅಂದರೆ ಪ್ರತಿಯೊಂದು ವಿಷಯದಲ್ಲೂ ಇಬ್ಬರೂ ಸಮಾನ ಅಂಕ ಪಡೆದಿದ್ದರೆ ಆಯ್ಕೆಯ ವೇಳೆ ಟೈ ಬ್ರೇಕಿಂಗ್ ನಿಯಮ ಅನ್ವಯವಾಗಲಿದೆ. ಅದರಂತೆ ಟೈ ಬ್ರೇಕಿಂಗ್ ನಿಯಮ ಹೇಗೆ ಅನ್ವಯವಾಗಲಿದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

* ಒಂದು ವೇಳೆ ಟೈ ಆದರೆ ಗಣಿತದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಇಂಟರ್-ಸೆ ಮೆರಿಟ್ ಅನ್ನು ನಿರ್ಧರಿಸಲಾಗುತ್ತದೆ.
* ಇದಾಗ್ಯೂ ಟೈ ಮುಂದುವರಿದರೆ, ಭೌತಶಾಸ್ತ್ರದಲ್ಲಿ ಸುರಕ್ಷಿತ ಅಂಕಗಳ ಆಧಾರದ ಮೇಲೆ ಇಂಟರ್-ಸೆ ಮೆರಿಟ್ ಅನ್ನು ನಿರ್ಧರಿಸಲಾಗುತ್ತದೆ
* ಮತ್ತೊಮ್ಮೆ ಟೈ ಮುಂದುವರಿದರೆ, ಇಂಟರ್ ಸೆ ಮೆರಿಟ್ ಅನ್ನು ರಸಾಯನಶಾಸ್ತ್ರದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.
* ಇದಾಗ್ಯೂ ಟೈ ಮುಂದುವರಿದರೆ, ಅಭ್ಯರ್ಥಿಯ ವಯಸ್ಸಿನ ಆಧಾರದ ಮೇಲೆ ಇಂಟರ್ -ಸೆ ಮೆರಿಟ್ ಅನ್ನು ನಿರ್ಧರಿಸಲಾಗುತ್ತದೆ. ಇದರಲ್ಲಿ ಹಿರಿಯ ಅಭ್ಯರ್ಥಿಯನ್ನು ಕಿರಿಯರಿಗಿಂತ ಮೊದಲು ಪರಿಗಣಿಸಲಾಗುತ್ತದೆ.
ರಾಜ್ಯದಲ್ಲಿ ಒಟ್ಟು 2,01,816 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿದ್ದರು, ಅವರಲ್ಲಿ ಭೌತಶಾಸ್ತ್ರಕ್ಕೆ 1,93,588 ಮತ್ತು ರಸಾಯನಶಾಸ್ತ್ರಕ್ಕೆ 1,93,522 ಹಾಜರಾಗಿದ್ದರು. ಆ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 12 ಸೋಂಕಿತ ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳಲ್ಲಿ ಬೆಂಗಳೂರಿನಲ್ಲಿ ಹಾಗೂ ಕೋಲಾರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬ ವಿದ್ಯಾರ್ಥಿ ಸಿಇಟಿ ಬರೆದಿದ್ದರು. ಆ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.

ಪ್ರಸ್ತುತ ಫಲಿತಾಂಶ ನೀಡುವುದೂ ಸೇರಿ ನಿಗದಿತ ವೇಳಾಪಟ್ಟಿಯಂತೆ ಕೌನ್ಸೆಲಿಂಗ್ ಮುಗಿಸಲಾಗುವುದು. ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ಹಳಿತಪ್ಪಲು ಬಿಡುವುದಿಲ್ಲ. ಜೊತೆಗೆ ಪದವಿ ಪದವಿ ಪ್ರವೇಶಕ್ಕೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ ಎಂದು ಈ ಹಿಂದೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದ್ದರು.

530 ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲಿದ್ದವು. ಉಳಿದ ಜಿಲ್ಲೆಗಳಲ್ಲಿ ಒಟ್ಟು 444 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಯನ್ನು ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ನಡೆಸಲಾಗಿತ್ತು.

ರಾಜ್ಯದಲ್ಲಿ ಈ ವರ್ಷ ಕೋವಿಡ್ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಅಲ್ಲದೇ ಎಲ್ಲಾ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೇ ಪಾಸು ಮಾಡಿದೆ. ಆದರೆ ಆಗಸ್ಟ್ 28, 29 ಹಾಗೂ 30ರಂದು ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು.

English summary
The Karnataka Common Entrance Test (KCET) result will be declared today, September 20, at 4 pm. As soon as the KCET results are announced, students who appeared for the undergraduate entrance test will be able to access the results on its official website -- kea.kar.nic.in and cetonline.karnataka.gov.in.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X