ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿ ಫಲಿತಾಂಶ ಆಗಸ್ಟ್ 21ರಂದು ಪ್ರಕಟ

|
Google Oneindia Kannada News

ಬೆಂಗಳೂರು, ಆ. 19: ನಾಳೆ ಪ್ರಕಟವಾಗಬೇಕಿದ್ದ ಸಿಇಟಿ ಫಲಿತಾಂಶವನ್ನು ಒಂದು ದಿನ ಮುಂದೂಡಲಾಗಿದೆ. ತಾಂತ್ರಿಕ ಕಾರಣಗಳಿಂದಾಗಿ‌ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ (ಆಗಸ್ಟ್ 21) ಪ್ರಕಟಿಸಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು.

Recommended Video

ಪ್ಲಾಸ್ಮಾ ದಾನ ನೀಡಿ ಮಾದರಿಯಾದ ಶಾಸಕ ಡಾ.ರಂಗನಾಥ್ | Oneindia Kannada

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಶುಕ್ರವಾರ ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟ ಮಾಡಲಿದೆ ಎಂದು ಅವರು ತಿಳಿಸಿದರು. ನಾಡಿದ್ದು ಬೆಳಿಗ್ಗೆ 11 ಗಂಟೆಗೆ ಫಲಿತಾಂಶ ಸೇರಿದಂತೆ ಇನ್ನಿತರ ವಿವರಗಳನ್ನು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ. ಅಶ್ವಥ್ ನಾರಾಯಣ ಕೊಡಲಿದ್ದಾರೆ. ಕೊರೊನಾ ವೈರಸ್ ಸವಾಲಿನ ಮಧ್ಯೆ ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಕೊರೊನಾ ವೈರಸ್ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಈ ವೆಬ್‌ಸೈಟ್‌ನಲ್ಲಿಯೂ ಫಲಿತಾಂಶ ನೋಡಬಹುದಾಗಿದೆ

ಶೇ. 90 ಕ್ಕಿಂತ ಹೆಚ್ಚು ಹಾಜರಾತಿ

ಶೇ. 90 ಕ್ಕಿಂತ ಹೆಚ್ಚು ಹಾಜರಾತಿ

ರಾಜ್ಯದ 497 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕೋವಿಡ್ ಪಾಸಿಟೀವ್ ಇದ್ದ 63 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1,94,419 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅವರ ಪೈಕಿ ಭೌತವಿಜ್ಞಾನ ವಿಷಯವನ್ನು ಶೇ. 90.23ರಷ್ಟು ಅಂದರೆ 1,75,4428 ವಿದ್ಯಾರ್ಥಿಗಳು ಹಾಜರಾಗಿದ್ದರು. ರಸಾಯನಶಾಸ್ತ್ರ ವಿಷಯದಲ್ಲಿ 1,75,337 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕೋವಿಡ್ ಆತಂಕದ ನಡುವೆಯೂ ಈ ವರ್ಷ ಹೆಚ್ಚಿನ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು.

ಇಂಜಿನಿಯರಿಂಗ್ ಶುಲ್ಕ, ಕೌನ್ಸಲಿಂಗ್ ಬಗ್ಗೆ ಡಿಸಿಎಂ ಮಹತ್ವದ ಆದೇಶಇಂಜಿನಿಯರಿಂಗ್ ಶುಲ್ಕ, ಕೌನ್ಸಲಿಂಗ್ ಬಗ್ಗೆ ಡಿಸಿಎಂ ಮಹತ್ವದ ಆದೇಶ

ಸೀಟು ಹಂಚಿಕೆ

ಸೀಟು ಹಂಚಿಕೆ

ಕಳೆದ ವರ್ಷದಂತೆಯೆ ಈ ಸಲವೂ ಶುಲ್ಕ ಪ್ರಮಾಣ ಮತ್ತು ಸೀಟು ಹಂಚಿಕೆ ಅನುಪಾತವನ್ನು ಮುಂದುವರಿಯುತ್ತದೆ. ಎಂಜಿನಿಯರಿಂಗ್ ಸೀಟುಗಳ ಹಂಚಿಕೆ ಮತ್ತು ಶುಲ್ಕ ನಿಗದಿ ಸಂಬಂಧ ಕಾಮೆಡ್-ಕೆ, ಕರ್ನಾಟಕ ಅನುದಾನ ರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ ಹಾಗೂ ರಾಜ್ಯ ಮತೀಯ ಅಲ್ಪಸಂಖ್ಯಾತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸಂಘಗಳು ಒಪ್ಪಿಕೊಂಡಿವೆ.

ʼಕೋವಿಡ್‌ ಮತ್ತು ನೆರೆ ಕಾರಣಕ್ಕೆ ಶುಲ್ಕ ಹೆಚ್ಚಳ ಮಾಡುತ್ತಿಲ್ಲ. ಜತೆಗೆ ಕಳೆದ ವರ್ಷದ ಸೀಟು ಹಂಚಿಕೆ ಪ್ರಮಾಣದಲ್ಲಿಯೇ ಈ ವರ್ಷ ಕೂಡ ಸೀಟು ಹಂಚಿಕೆ ಮಾಡುತ್ತಿದ್ದು, ಇದಕ್ಕೆ ಎಲ್ಲ ಸಂಘಗಳ ಪ್ರತಿನಿಧಿಗಳೂ ಒಪ್ಪಿಗೆ ಸೂಚಿಸಿದರು ಎಂದು ಅವರು ತಿಳಿಸಿದರು.

ಕನ್ನಡಿಗರಿಗೆ ಪರೀಕ್ಷೆ

ಕನ್ನಡಿಗರಿಗೆ ಪರೀಕ್ಷೆ

ಹೊರನಾಡು ಮತ್ತು ಗಡಿ ಕನ್ನಡಿಗ ವಿದ್ಯಾರ್ಥಿಗಳಿಗೆ ರಾಜ್ಯದ ಆರು ಕಡೆಗಳಲ್ಲಿ ಪ್ರತ್ಯೇಕವಾಗಿ ಕನ್ನಡ ಪರೀಕ್ಷೆ ನಡೆಸಲಾಗಿತ್ತು. ಮಂಗಳೂರು, ಬೆಂಗಳೂರು, ವಿಜಯಪುರ, ಬಳ್ಳಾರಿ, ಬೆಳಗಾವಿ, ಬೀದರ್ ಜಿಲ್ಲಾ ಕೇಂದ್ರಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

ಏನಿದು ರಾಷ್ಟ್ರೀಯ ನೇಮಕಾತಿ ಸಂಸ್ಥೆ? ಉದ್ಯೋಗಾಕಾಂಕ್ಷಿಗಳಿಗೆ ಇದರಿಂದ ಲಾಭವೇನು? ಇಲ್ಲಿದೆ ವಿವರಏನಿದು ರಾಷ್ಟ್ರೀಯ ನೇಮಕಾತಿ ಸಂಸ್ಥೆ? ಉದ್ಯೋಗಾಕಾಂಕ್ಷಿಗಳಿಗೆ ಇದರಿಂದ ಲಾಭವೇನು? ಇಲ್ಲಿದೆ ವಿವರ

ಸಹಾಯವಾಣಿ ಸಹಾಯ

ಸಹಾಯವಾಣಿ ಸಹಾಯ

ಸಿಇಟಿ ಸಹಾಯವಾಣಿಗೆ ಸುಮಾರು 200ಕ್ಕೂ ಹೆಚ್ಚು ಕರೆಗಳು ಬಂದಿದ್ದವು. ಅದರಲ್ಲಿ 10ರಿಂದ 15 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಾವಣೆಗೆ ಮನವಿ ಮಾಡಿದ್ದರು. ಪರೀಕ್ಷಾ ಪ್ರಾಧಿಕಾರ ಅವರಿಗೆ ನೆರವಾಗಿತ್ತು. ಇನ್ನು ಕೆಲ ವಿದ್ಯಾರ್ಥಿಗಳು ಅಪ್ಲಿಕೇಷನ್ ಸಂಖ್ಯೆ ಮತ್ತು ಯೂಸರ್ ಐಡಿ ಮತ್ತಿತರ ಸಮಸ್ಯೆ ಗಳಿಗೆ ಕರೆ ಮಾಡಿದ್ದು ಅವರಿಗೂ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಸಹಾಯ ಮಾಡಲಾಗಿತ್ತು.

English summary
The CET result, to be announced tomorrow, has been postponed for one day. The results of the CET exam, which was due to be announced on Thursday due to technical reasons, will be announced on Friday (August 21), DCM Dr. Ashwath Narayana said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X