KCET Results 2025: ಸಿಇಟಿ ಫಲಿತಾಂಶ ಪ್ರಕಟ: ವೀಕ್ಷಣೆ ಮಾಡುವ ವಿಧಾನಗಳು ಇಲ್ಲಿವೆ
KCET Results 2025: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಪ್ರಕಟ ಮಾಡಿದ್ದಾರೆ. ಹಾಗಾದ್ರೆ ಫಲಿತಾಂಶ ವೀಕ್ಷಣೆ ವೆಬ್‌ಸೈಟ್‌ಗಳು ಹಾಗೂ ಟಾಪರ್ಸ್‌ಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಏಪ್ರಿಲ್ 16, 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು. ಇಂದು (ಮೇ 24) ಬೆಳಗ್ಗೆ 11:30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಮಧ್ಯಾಹ್ನ 2 ಗಂಟೆಯಿಂದ ವೀಕ್ಷಣೆ ಮಾಡಬಹುದು.

ಗಂಟೆಯಿಂದ ವೀಕ್ಷಣೆ ವೆಬ್‌ಸೈಟ್‌ಗಳು
* https://cetonline.Karnataka.gov.in/ugcetrank2025/rank2025/checkresult.aspx
* https://karresults.nic.in
ಫಲಿತಾಂಶ ವೀಕ್ಷಿಸುವುದು ಹೇಗೆ?
* ವಿದ್ಯಾರ್ಥಿಗಳು ಅಧಿಕೃತ ಕೆಇಎ ವೆಬ್‌ಸೈಟ್ cetonline.karnataka.gov.in ಅಥವಾ kea.kar.nic.in ಗೆ ಭೇಟಿ ನೀಡಬೇಕು.
* ಕೆಸಿಇಟಿ ಫಲಿತಾಂಶ 2025 ಮೇಲೆ ಕ್ಲಿಕ್ ಮಾಡಬೇಕು.
* ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಅಲ್ಲಿ ಕೇಳಲಾದ ಮಾಹಿತಿ ನಮೂದಿಸಿ.
* ಬಳಿಕ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಫಲಿತಾಂಶ ವೀಕ್ಷಣೆ ಮಾಡಬಹುದು.
ಪಶುವೈದ್ಯಕೀಯ ವಿಭಾಗದ ಟಾಪರ್ಸ್
* ಪ್ರಥಮ - ರಕ್ಷಿತಾ.ವಿ.ಪಿ
* ದ್ವಿತೀಯ - ನಂದನ್
* ತೃತೀಯ - ಭುವನೇಶ್ವರಿ
ಡಿ ಫಾರ್ಮ್ ವಿಭಾಗದ ಟಾಪರ್ಸ್
* ಪ್ರಥಮ - ಆತ್ರೆಯಾ ವೆಂಕಟಚಲಂ (ನರ್ಸಿಂಗ್,
* ದ್ವಿತೀಯ - ಭವೇಶ್ ಜಯಂತಿ
* ತೃತೀಯ - ಹರೀಶ್‌ರಾಜ್
ನರ್ಸಿಂಗ್ ವಿಭಾಗ
* ಯಲಹಂಕದ ನಾರಾಯಣ ಇ-ಟೆಕ್ನೋದ ಹರಿಶ್ ರಾಜ್ ಪ್ರಥಮ ಸ್ಥಾನ
* ಹೆಚ್ಎಸ್ಆರ್ ಲೇಔಟ್ನ ನ್ಯಾಷನಲ್ ಪಬ್ಲಿಕ್‌ಸ್ಕೂಲ್ ಆತ್ರೇಯ ದ್ವಿತೀಯ ಸ್ಥಾನ
* ಮಂಗಳೂರಿನ ಶಾಪಲ್ ಶೆಟ್ಟಿ ತೃತೀಯ ಸ್ಥಾನ
ಕೃಷಿಯಲ್ಲಿ ವಿಭಾಗದ ಟಾಪರ್ಸ್
* ಪ್ರಥಮ - ಅಕ್ಷಯ್ ಎಂ ಹೆಗ್ಡೆ
* ದ್ವಿತೀಯ - ಸಾಯಿಶ್ ಶ್ರವಣ ಪಂಡಿತ್
* ತೃತೀಯ - ಸುಚಿತ್ ಪಿ ಪ್ರಸಾದ್
ಇಂಜಿನಿಯರಿಂಗ್ ವಿಭಾಗದ ಟಾಪರ್ಸ್
* ಪ್ರಥಮ - ಭಾವೇಶ್ ಜಯಂತಿ
* ದ್ವಿತೀಯ - ಸಾತ್ವಿಕ್ ಬಿ ಬಿರಾದಾರ
* ತೃತೀಯ - ದಿನೇಶ್ ಗೋಮತಿ ಶಂಕರ್ ಅರುಣಾಚಲಂ
ಸಿಇಟಿಗೆ ಹಾಜರಾದ ವಿದ್ಯಾರ್ಥಿಗಳ ವಿವರ: ಸಿಇಟಿಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿಗೆ ಹಾಜರಾಗಿದ್ದರು ಎಂದು ಬೆಂಗಳೂರಿನ ಕೆಇಎ ಕಚೇರಿಯಲ್ಲಿ ಸುದ್ದಿಗೋಷ್ಠಿ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಇನ್ನು ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ ವಿಜ್ಞಾನ ವಿಭಾಗ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು.
ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮಾಹಿತಿ: ಯುಜಿಸಿಇಟಿ-2025 ಫಲಿತಾಂಶ ವೆಬ್ಸೈಟ್ನಲ್ಲೂ ಲಭ್ಯವಿದ್ದು, ವಿದ್ಯಾರ್ಥಿಗಳು cetonline.karnataka.gov.in ಅಥವಾ kea.kar.nic.inನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications