KCET Results 2025: ಸಿಇಟಿ ಫಲಿತಾಂಶ ಲಭ್ಯವಾಗದ ವಿದ್ಯಾರ್ಥಿಗಳಿಗೆ ಕೆಇಎ ಮಹತ್ವದ ಮಾಹಿತಿ
KCET Results 2025: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಾಧಿಕಾರ ಕೆಇಎ ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಇಂದು (ಮೆ 24) ಪ್ರಕಟವಾಗಿದೆ. ಆದರೆ ಕೆಲ ವಿದ್ಯಾರ್ಥಿಗಳ ಫಲಿತಾಂಶ ಇನ್ನೂ ಪ್ರಕಟ ಆಗಿಲ್ಲ. ಆದ್ದರಿಂದ ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿಯೊಂದನ್ನು ನೀಡಿದೆ.
ಈ ಬಾರಿ ಸುಮಾರು 3,30,000 ವಿದ್ಯಾರ್ಥಿಗಳು ಅರ್ಜಿ ಹಾಕಿದ್ದು, 3,11,000 91 ಹಾಜರಾಗಿದ್ದರು. ಈ ಪೈಕಿ ಸಿಇಟಿಯಲ್ಲಿ 2, 62,195 ಮಂದಿ ಇಂಜಿನಿಯರ್ ರ‍್ಯಾಂಕ್ ಪಡೆದಿದ್ದಾರೆ. ಇಂದು ಸಿಇಟಿ-2025ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇನ್ನು ಕೆಲವು ಅಭ್ಯರ್ಥಿಗಳು ಹಿಂದಿನ ವರ್ಷದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ತೇರ್ಗಡೆ ಆಗಿದ್ದಾರೆ. ಆದರೆ ಫಲಿತಾಂಶ ಪ್ರಕಟವಾಗಿಲ್ಲ ಎಂದು ಮನವಿಗಳನ್ನು ಸಲ್ಲಿಸುತ್ತಿರುತ್ತಾರೆ.

ಸಿಇಟಿ-2025ರ ಫಲಿತಾಂಶವನ್ನು ಪ್ರಕಟಿಸುವ ಮೊದಲು ದ್ವಿತೀಯ ಪಿಯುಸಿ ಅಂಕಗಳನ್ನು ಆಯಾ ಮಂಡಳಿಗಳಿಂದಲೇ ಪಡೆಯಲಾಗುವುದು ಎಂದು ಸೂಚಿಸಲಾಗಿತ್ತು ಮತ್ತು ಅಭ್ಯರ್ಥಿಗಳು ಸರಿಯಾದ ನೊಂದಣಿ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯ ಎಂದು ಸೂಚಿಸಲಾಗಿರುತ್ತದೆ.
ನೋಂದಣಿ ಸಂಖ್ಯೆಯನ್ನು ಸರಿಯಾಗಿ ನಮೂದಿಸದ ಕಾರಣ ಸಿಇಟಿ-2025ರ ಫಲಿತಾಂಶ ಪ್ರಕಟವಾಗದೇ ಇರುವ ಅಭ್ಯರ್ಥಿಗಳಿಗೆ ಅಂಕಗಳನ್ನು ದಾಖಲಿಸಲು ಅವಕಾಶ ನೀಡುವ ಸಲುವಾಗಿ, ಮೇ 26, 2025ರಿಂದ ಆನ್‌ಲೈನ್ ಲಿಂಕ್ ಅನ್ನು ತೆರೆಯಲಾಗುವುದು. ಆ ಲಿಂಕ್‌ನಲ್ಲಿ ಅಭ್ಯರ್ಥಿಗಳು ದ್ವಿತೀಯ ಪಿಯು ಅಂಕಗಳನ್ನು ನೋಂದಣಿ ಸಂಖ್ಯೆಯೊಂದಿಗೆ ದಾಖಲಿಸಬೇಕು ಮತ್ತು ಅಂಕಪಟ್ಟಿಯನ್ನು ಅಪ್ಲೋಡ್ ಮಾಡಬೇಕು.
ಅಭ್ಯರ್ಥಿಗಳು ದಾಖಲಿಸುವ ಅಂಕಗಳನ್ನು ಆಯಾ ಪರೀಕ್ಷಾ ಮಂಡಳಿಯಿಂದ ಪರಿಶೀಲಿಸಿ ಧೃಡೀಕರಿಸಿದ ನಂತರವೇ ಸ್ಪಾಟ್ ರ‍್ಯಾಂಕ್ ಅನ್ನು ಮೇ 29 2025ರಿಂದ ನೀಡಲು ಕಮವಹಿಸಲಾಗುವುದು. ಸ್ಪಾಟ್ ರ‍್ಯಾಂಕ್ ಅನ್ನು ಪಡೆಯಲು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಬರುವ ಅವಶ್ಯಕತೆ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.
ಬೆಳಗ್ಗೆ ಫಲಿತಾಂಶ ಪ್ರಕಟ: ಏಪ್ರಿಲ್ 16, 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು. ಇಂದು (ಮೇ 24) ಬೆಳಗ್ಗೆ 11:30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿದರು.
ಸಿಇಟಿಗೆ ಹಾಜರಾದ ವಿದ್ಯಾರ್ಥಿಗಳ ವಿವರ: ಸಿಇಟಿಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿಗೆ ಹಾಜರಾಗಿದ್ದರು ಎಂದು ಬೆಂಗಳೂರಿನ ಕೆಇಎ ಕಚೇರಿಯಲ್ಲಿ ಸುದ್ದಿಗೋಷ್ಠಿ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಇನ್ನು ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ ವಿಜ್ಞಾನ ವಿಭಾಗ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು.
ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮಾಹಿತಿ: ಯುಜಿಸಿಇಟಿ-2025 ಫಲಿತಾಂಶ ವೆಬ್ಸೈಟ್ನಲ್ಲೂ ಲಭ್ಯವಿದ್ದು, ವಿದ್ಯಾರ್ಥಿಗಳು cetonline.karnataka.gov.in ಅಥವಾ kea.kar.nic.inನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದು.












Click it and Unblock the Notifications