ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿದ ಕೆಇಎ!

ಬೆಂಗಳೂರು ಅಕ್ಟೋಬರ್ 20: ಕರ್ನಾಟಕದಲ್ಲಿ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಹೋಗುವ ವಿಚಾರದಲ್ಲಿ ಈ ಹಿಂದೆ ಸಾಕಷ್ಟು ಗಲಾಟೆಗಳು ನಡೆದಿವೆ. ಆದರೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿಯನ್ನು ನೀಡಿದೆ.

ಇದೇ ತಿಂಗಳು ಅಕ್ಟೋಬರ್ 28 ಮತ್ತು ಅಕ್ಟೋಬರ್ 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಅಭ್ಯರ್ಥಿಗಳು ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.

kea-allows-wearing-hijab-to-write-the-exam

ರಾಜ್ಯದಲ್ಲಿ ಹಿಜಾಬ್ ವಿಚಾರ ಭಾರೀ ಸಂಘರ್ಷಕ್ಕೆ ಕಾರಣವಾಗಿತ್ತು. ಇದೀಗ ಕೆಇಎ ವಿವಿಧ ಮಂಡಳಿಗಳ ಹುದ್ದೆ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶ ನೀಡಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಎಂದು ಕೆಇಎ ತಿಳಿಸಿದೆ.

ಪರೀಕ್ಷೆಗೆ ಹಾಜರಾಗುವವರು ಪ್ರವೇಶ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಎರಡು ಫೋಟೋ, ಸರ್ಕಾರ ಮಾನ್ಯ ಮಾಡಿರುವ ಗುರುತಿನ ಚೀಟಿ ತರಬೇಕು. ಪರೀಕ್ಷೆ ಮುಗಿಯುವವರೆಗೂ ಹೊರ ಹೋಗಲು ಅವಕಾಶವಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಏನಿದು ಸಮಸ್ಯೆ?

ಉಡುಪಿಯ ಸರಕಾರಿ ಪಿಯು ಕಾಲೇಜಿನಲ್ಲಿ ಕಳೆದ ವರ್ಷ ಜನವರಿ 1ರಂದು ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡುತ್ತಿಲ್ಲ ಎಂದು ಆರು ವಿದ್ಯಾರ್ಥಿನಿಯರು ಆರೋಪಿಸಿದಾಗ ಈ ಹಿಜಾಬ್ ವಿವಾದ ಬೆಳಕಿಗೆ ಬಂತು. ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಅಧಿಕಾರಿಗಳ ಮೇಲೆ ಆರೋಪ ಮಾಡಿದ್ದರು. ಬಳಿಕ ಪ್ರತಿಭಟನೆಗಳು ಆರಂಭವಾದವು. ಈ ವಿವಾದ ಶೀರ್ಘದಲ್ಲೇ ರಾಜ್ಯವ್ಯಾಪಿ ಹರಡಿತು. ಮಾತ್ರವಲ್ಲದೆ ಹಿಂದೂ ವಿದ್ಯಾರ್ಥಿಗಳು ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸುತ್ತೇವೆ ಎಂದು ಪಟ್ಟು ಹಿಡಿದರು. ಅದಕ್ಕೆ ಅವಕಾಶ ಕಲ್ಪಿಸಲು ಒತ್ತಾಯ ಮಾಡಿದರು. ಹೀಗೆ ಈ ವಿವಾದ ಕರ್ನಾಟಕ ಮಾತ್ರವಲ್ಲದೆ ವಿವಿಧ ರಾಜ್ಯಗಳಿಗೂ ಹರಡಿತು.

ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ' ಜೈ ಶ್ರೀ ರಾಮ' ಎಂದು ಕೂಗಿದರೆ. ಹಿಜಾಬ್ ಧರಿಸಿದ ವಿದ್ಯಾರ್ಥಿನಿ 'ಅಲ್ಲಾ ಹು ಅಕ್ಬರ್'' ಎಂದು ಕೂಗಿರುವ ವಿಡಿಯೋಗಳು ವೈರಲ್ ಆದವು. ಈ ವಿಚಾರ ನ್ಯಾಯಾಲಯದ ಕದ ತಟ್ಟಿತು. ಇದು ರಾಜಕೀಯ ಕೆಸರೆರೆಚಾಟಕ್ಕೂ ನಾಂದಿಯಾಯಿತು.

ರಾಜಕೀಯವಾದ ಹಿಜಾಬ್ ವಿವಾದ

ಬಿಜೆಪಿ ನೇತೃತ್ವದ ಈ ಹಿಂದಿನ ಕರ್ನಾಟಕ ಸರ್ಕಾರವು ತೆಗೆದುಕೊಂಡಿರುವ ಹಲವು ವಿವಾದಾತ್ಮಕ ನೀತಿ-ನಿರ್ಧಾರಗಳ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತುತ್ತಲೇ ಇದೆ. ಈ ವಿಚಾರಗಳ ವಿರುದ್ಧ ಸಾರ್ವಜನಿಕ ಹಾಗೂ ಕಾನೂನಾತ್ಮಕ ಹೋರಾಟಗಳಿಗೆ ಕಾಂಗ್ರೆಸ್ ನೇರ ಅಥವಾ ಪರೋಕ್ಷ ಬೆಂಬಲವನ್ನು ನೀಡಿತ್ತು.

ಇದೀಗ ಕಾಂಗ್ರೆಸ್ ಪಕ್ಷ ಭಾರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವುದರೊಂದಿಗೆ ನೀತಿ, ನಿರ್ಧಾರಗಳನ್ನು ಸರ್ಕಾರವು ಪರಾಮರ್ಶೆಗೆ ಒಳಪಡಿಸುವ ಸಾಧ್ಯತೆ ದಟ್ಟವಾಗಿದೆ. ಇಂಥ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸಿರುವುದಕ್ಕೆ ನಿಷೇಧ ಹೇರಿರುವುದು ಪ್ರಮುಖವಾಗಿದೆ. ದೇಶದ ಗಮನಸೆಳೆದಿದ್ದ ಹಿಜಾಬ್ ನಿಷೇಧಿಸಿ ರಾಜ್ಯ ಸರ್ಕಾರ ಮಾಡಿರುವ ಆದೇಶವನ್ನು ಕಾರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+