ಕರ್ನಾಟಕ ಸಿಇಟಿ 2014 ವೇಳಾಪಟ್ಟಿ ಪ್ರಕಟ

ಬೆಂಗಳೂರು, ಡಿ.1:ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟವಾಗಿದ್ದು, ೨೦೧೪ರ ಮೇ 1 ರಿಂದ 3 ದಿನಗಳ ಕಾಲ ನಡೆಯಲಿದೆ.

2014ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ವೈದ್ಯಕೀಯ, ದಂತವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ, ಯುನಾನಿ, ನ್ಯಾಚುರೋಪತಿ ಮತ್ತು ಯೋಗ, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ರೇಷ್ಮೆ, ಅರಣ್ಯ ಶಾಸ್ತ್ರ, ತೋಟಗಾರಿಕೆ, ಬಿ-ಫಾರ್ಮಾ, ಡಿ-ಫಾರ್ಮಾ ಮುಂತಾದ ಕೋರ್ಸ್ ಗಳಿಗೆ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

* ಮೇ 1 ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತಶಾಸ್ತ್ರ,
* ಮೇ 2 ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಾಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.

KEA announced Karnataka CET 2014 time table

* ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಮೇ 3ರ ಶನಿವಾರ ಬೆಳಗ್ಗೆ 11.30ರಿಂದ 12.30ರವರೆಗೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಬಾರಿ ಕೌನ್ಸಲಿಂಗ್ ನಲ್ಲಿ ಕರ್ನಾಟಕ ಸರ್ಕಾರ ಒಂದಷ್ಟು ಪ್ರಯೋಗಗಳನ್ನು ನಡೆಸಿ ಯಶಸ್ವಿಯಾಗಿತ್ತು. ಇದೇ ಮೊದಲ ಬಾರಿಗೆ ಆನ್ ಲೈನ್ ಮೂಲಕ ಶುಲ್ಕ ಪಾವತಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಶುಲ್ಕ ಪಾವತಿಗೆ ಡಿಡಿ ಪಡೆಯುವ ಅಗತ್ಯವಿರಲಿಲ್ಲ. ಇಂಡಿಯನ್ ಬ್ಯಾಂಕ್ ಮೂಲಕ ನೇರವಾಗಿ ಶುಲ್ಕ ಪಾವತಿಸಬಹುದಾಗಿತ್ತು.

ಸಚಿವ ಆರ್ ವಿ ದೇಶಪಾಂಡೆ ಅವರ ರ ಭರವಸೆಯಂತೆ ಕಾಮೆಡ್-ಕೆ ಸೀಟು ಪಡೆದ ನಂತರ ಸರ್ಕಾರಿ ಸೀಟು ದೊರೆಕಿದರೆ, ಕಾಮೆಡ್-ಕೆ ಶುಲ್ಕ ಮರುಪಾವತಿ ಮಾಡುವ ವ್ಯವಸ್ಥೆಯೂ ಜಾರಿಗೆ ಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+