2016ನೇ ಸಾಲಿನ ಕರ್ನಾಟಕ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು, ಡಿ. 04: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ 2016-17ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ.

ಸೂಚನೆ: ಪರೀಕ್ಷಾ ದಿನಾಂಕಗಳು ಬದಲಾಗಿದೆ . ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ
ಇಂಜಿನಿಯರಿಂಗ್, ವೈದ್ಯಕೀಯ ಅಲ್ಲದೆ ದಂತ ವೈದ್ಯಕೀಯ, ಪಶು ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ, ಯುನಾನಿ, ನ್ಯಾಚುರೋಪತಿ ಮತ್ತು ಯೋಗ, ಕೃಷಿ ವಿಜ್ಞಾನ, ರೇಷ್ಮೆ, ತೋಟಗಾರಿಕೆ, ಬಿ-ಫಾರ್ಮ, ಫಾರ್ಮ-ಡಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆಯಲು ಸಿಇಟಿ ನಡೆಸಲಾಗುತ್ತದೆ.

KEA announces dates for Karnataka Common Entrance Test (CET)-2016

* ಮೇ 1 ರ ಭಾನುವಾರ
ಬೆಳಗ್ಗೆ 10.30 ರಿಂದ 11.50ರವರೆಗೆ ಜೀವಶಾಸ್ತ್ರ,
ಮಧ್ಯಾಹ್ನ 2.30ರಿಂದ 3.50 ರವರೆಗೆ ಗಣಿತ
* ಮೇ 2ರಂದು ಸೋಮವಾರ
ಬೆಳಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ,
ಮಧ್ಯಾಹ್ನ 2.30ರಿಂದ 3.50ರವರೆಗೆ ರಾಸಾಯನಶಾಸ್ತ್ರ
* ಮೇ 3ರಂದು ಮಂಗಳವಾರ
ಬೆಳಿಗ್ಗೆ 11.30ರಿಂದ 12.30ರವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ 50 ಅಂಕಗಳಿಗೆ ಕನ್ನಡ ಭಾಷಾ ಪರೀಕ್ಷೆಯು ನಡೆಯುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಮೇ 8ರಂದು ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳಲ್ಲಿನ ಸೀಟುಗಳಿಗಾಗಿ ರಾಷ್ಟ್ರೀಯ ಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಕಾಮೆಡ್-ಕೆ ಹೇಳಿದೆ. ಆನ್ ಲೈನ್ ಪ್ರವೇಶ ಪರೀಕ್ಷೆ ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ನೋಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+