ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2017ನೇ ಸಾಲಿನ ಕರ್ನಾಟಕ ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

2017ನೇ ಸಾಲಿನ ಸಿಇಟಿ ಪರೀಕ್ಷಾ ವೇಳಾಪಟ್ಟಿ ಸೋಮವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. 2017 ಮೇ 02 ಮತ್ತು 03 ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ.

By Ramesh
|
Google Oneindia Kannada News

ಬೆಂಗಳೂರು, ಡಿಸೆಂಬರ್. 13 : ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ 2017ನೇ ಸಾಲಿನ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕವನ್ನು ಸೋಮವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ.

2017 ಮೇ 02 ಮತ್ತು 03 ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ. ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಭಾಷಾ ಪರೀಕ್ಷೆ ಮೇ 4ರಂದು ಬೆಳಗ್ಗೆ 11.30ರಿಂದ 12.30ರವರೆಗೆ ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

ಮುಂದಿನ ವರ್ಷದಿಂದ ವೈದ್ಯಕೀಯ ಸೀಟುಗಳಿಗೆ ನೀಟ್ ಕಡ್ಡಾಯವಾಗಿರುವ ಕಾರಣ ವೈದ್ಯಕೀಯ ಸೀಟು ಹೊರತುಪಡಿಸಿ ಎಂಜಿನಿಯರಿಂಗ್, ಆಯುಷ್ ಹಾಗೂ ಕೃಷಿ ಎಂಜಿನಿಯರಿಂಗ್ ಸೀಟುಗಳಿಗೆ ಮಾತ್ರ ಪರೀಕ್ಷೆ ನಡೆಯಲಿದೆ.

CET 2017 to be held on May 2 and 3

ಮೇ 2ರಂದು ಬೆಳಗ್ಗೆ ಜೀವಶಾಸ್ತ್ರ ನಡೆದರೆ, ಮಧ್ಯಾಹ್ನದ ಬಳಿಕ ಗಣಿತ ಪರೀಕ್ಷೆ ನಡೆಯಲಿದೆ. ಮೇ 3ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದೆ. ಈ ನಾಲ್ಕು ವಿಷಯಗಳಿಗೆ 60 ಅಂಕಗಳನ್ನು ನಿಗದಿಪಡಿಸಲಾಗಿದೆ.

ಪರೀಕ್ಷೆಗಳು ನಡೆಯುವ ಸಮಯ: ಬೆಳಗ್ಗೆ 10.30ರಿಂದ 11.50ರವರೆಗೆ ನಡೆದರೆ, ಮಧ್ಯಾಹ್ನದ ಪರೀಕ್ಷೆಗಳು 2.30ರಿಂದ 3.50ರವರೆಗೆ ನಡೆಯಲಿದೆ.

CET 2017 to be held on May 2 and 3

ಹೊರನಾಡು, ಗಡಿನಾಡು ಕನ್ನಡಿಗರಿಗೆ 50 ಅಂಕಗಳಿಗೆ ಮಾತ್ರ ನಡೆಯುವ ಕನ್ನಡ ಭಾಷಾ ಪರೀಕ್ಷೆ ಮೇ 4ರಂದು ಬೆಳಗ್ಗೆ 11.30ರಿಂದ 12.30ರವರೆಗೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ http://kea.kar.nic.in/ ವೆಬ್ ಸೈಟ್ ನ್ನು ಸಂಪರ್ಕಿಸಿ.

English summary
The Karnataka Examinations Authority (KEA) on Monday announced the schedule for Common Entrance Test (CET) 2017. The test, slated to be held on May 2 and 3, is for admissions to Ayurveda, Homoeopathy, Unani, Naturopathy, Engineering, Technology and Farm Science courses.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X