2018ನೇ ಸಾಲಿನ ಕರ್ನಾಟಕ ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 08: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) 2018ನೇ ಸಾಲಿನ ಪರೀಕ್ಷಾ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಬುಧವಾರದಂದು ಪ್ರಕಟಿಸಿದೆ.

ವೈದ್ಯಕೀಯ ಪ್ರವೇಶ ಪರೀಕ್ಷೆ NEET ಕನ್ನಡ ಆಯ್ಕೆ ಇಲ್ಲ ಏಕೆ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ಏಪ್ರಿಲ್‌ 18 ರಿಂದ 20, 2018ರ ವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದೆ.

KEA announces schedule for Common Entrance Test (CET) 2018

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌), ಆರ್ಕಿಟೆಕ್ಚರ್‌ ಕೋರ್ಸ್‌ನ ಪ್ರವೇಶಕ್ಕಾಗಿ ಜೆಇಇ-2 ಅಥವಾ ಕೌನ್ಸಿಲ್‌ ಆಫ್‌ ಆರ್ಕಿಟೆಕ್ಚರ್‌ ನಡೆಸುವ ಎನ್‌ಎಟಿಎ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಬೇಕಾಗಿದೆ. ಕಳೆದ ವರ್ಷ ನೀಟ್ ಪರೀಕ್ಷೆ ಕಡ್ಡಾಯವಾಗಿರಲಿಲ್ಲ.

ಈ ಬಾರಿ ವೈದ್ಯಕೀಯ ಸೀಟುಗಳಿಗೆ ನೀಟ್ ಕಡ್ಡಾಯವಾಗಿದೆ. ಹೀಗಾಗಿ ಪರೀಕ್ಷೆ ದಿನಾಂಕ ನಿಗದಿ ಮಾಡಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರ ದಿನಾಂಕ ಪ್ರಕಟಣೆ ತಿಳಿಸಿದೆ. ಇಂಜಿನಿಯರಿಂಗ್, ಆಯುಷ್ ಹಾಗೂ ಕೃಷಿ ಇಂಜಿನಿಯರಿಂಗ್ ಸೀಟುಗಳಿಗೆ ಮಾತ್ರ ಪರೀಕ್ಷೆ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ ನೋಡಬಹುದು.

ದಿನಾಂಕ ದಿನ ಸಮಯ ವಿಷಯ ಅಂಕಗಳು
18/04/2018 ಬುಧವಾರ
ಬೆಳಗ್ಗೆ 10.30 ರಿಂದ 11.50ರ ವರೆಗೆ ಜೀವಶಾಸ್ತ್ರ 60
ಮಧ್ಯಾಹ್ನ 2.30 ರಿಂದ 3.50ರ ವರೆಗೆ ಗಣಿತ 60
19/04/2018 ಗುರುವಾರ ಬೆಳಗ್ಗೆ 10.30 ರಿಂದ 11.50ರ ವರೆಗೆ ಭೌತಶಾಸ್ತ್ರ 60
ಮಧ್ಯಾಹ್ನ 2.30 ರಿಂದ 3.50ರ ವರೆಗೆ ರಸಾಯನಶಾಸ್ತ್ರ 60
ಕನ್ನಡ ಭಾಷಾ (ಬೆಂಗಳೂರು ಕೇಂದ್ರದಲ್ಲಿ ಮಾತ್ರ) 50
20/04/2018 ಶುಕ್ರವಾರ ಬೆಳಗ್ಗೆ 11.30 ರಿಂದ 12.30ರ ವರೆಗೆ ಹೊರನಾಡು ಮತ್ತು ಗಡಿನಾಡಿನ ಕನ್ನಡ ಅಭ್ಯರ್ಥಿಗಳಿಗೆ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Karnataka Examinations Authority (KEA) on Wednesday announced the schedule for Common Entrance Test (CET) 2018. The test, slated to be held on April 18 and 20, is for admissions to Ayurveda, Homoeopathy, Unani, Naturopathy, Engineering, Technology and Farm Science courses.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ