ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿ Ranking ಗೊಂದಲ: ಹೈಕೋರ್ಟ್ ತೀರ್ಪು ಪ್ರಶ್ನಿಸಲು ತೀರ್ಮಾನಿಸಿದ ಸರ್ಕಾರ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್‌ 05: 2020-21ರಲ್ಲಿ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ರ್‍ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂಬ ಹೈಕೋರ್ಟ್ ತೀರ್ಪಿನಿಂದ ಈ ವರ್ಷದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತದೆ. ಹೀಗಾಗಿ ಅದನ್ನು ಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಸಂಬಂಧ ತಮ್ಮ ನಿವಾಸದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜತೆ ಸೋಮವಾರ ಬೆಳಗ್ಗೆ ಅವರು ದೀರ್ಘ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಅವರು, ತೀರ್ಪಿತ್ತಿರುವ ಏಕ ಸದಸ್ಯ ಪೀಠದ ಮುಂದೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕೋ ಅಥವಾ ಮೇಲ್ಮನವಿ ಸಲ್ಲಿಸಬೇಕೋ ಎನ್ನುವುದನ್ನು ವಕೀಲರ‌ ತೀರ್ಮಾನಿಸುತ್ತಾರೆ. ತ್ವರಿತವಾಗಿ ಯಾವುದು ಆಗುತ್ತದೊ ಅದನ್ನು ಮಾಡಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾರ್ಥಿಗಳ ನೆರವಿಗೆ ಹೈಕೋರ್ಟ್, ಹೊಸ ಸಿಇಟಿ Ranking ಪ್ರಕಟಿಸಲು ಆದೇಶವಿದ್ಯಾರ್ಥಿಗಳ ನೆರವಿಗೆ ಹೈಕೋರ್ಟ್, ಹೊಸ ಸಿಇಟಿ Ranking ಪ್ರಕಟಿಸಲು ಆದೇಶ

ಕೋರ್ಟ್ ತೀರ್ಪನ್ನು ಪಾಲಿಸಲು ಹೋದರೆ ಈ ವರ್ಷ ಸಿಇಟಿ ಬರೆದಿರುವ 1.50 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಅವರ ರ್‍ಯಾಂಕ್ ಪಟ್ಟಿ ದೊಡ್ಡ ಪ್ರಮಾಣದಲ್ಲಿ ಏರುಪೇರಾಗುತ್ತದೆ. ಕೋರ್ಟ್ ಮೆಟ್ಟಿಲೇರಿದ್ದವರು ಯಾವುದೋ ಒಂದು ತಾಂತ್ರಿಕ ಅಂಶಕ್ಕೆ ಅಂಟಿಕೊಂಡಿದ್ದಾರೆ. ಹೋದ ವರ್ಷ ಕೊರೋನಾ ಹಿನ್ನೆಲೆಯಲ್ಲಿ ಕೈಗೊಂಡ ತೀರ್ಮಾನವನ್ನು ಅವರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ಅವರು ಹೇಳಿದರು.

KEA CET Ranking Confusion: Govt Decides to Challenge High Court Verdict

ಹೋದ ವರ್ಷದ ವಿದ್ಯಾರ್ಥಿಗಳ ಬಗ್ಗೆ ನಮಗೆ ಅಸಮಾಧಾನವೇನಿಲ್ಲ. ನಾವು ಯಾರಿಗೂ ಅನ್ಯಾಯ ಆಗದಂತೆ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಎಲ್ಲವೂ ನಿಗದಿತ ಕಾಲಮಿತಿಯಲ್ಲೇ ನಡೆಯಲಿದೆ ಎಂದು ಅವರು ಭರವಸೆ ನೀಡಿದರು. ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮತ್ತು ಕಾನೂನು ತಜ್ಞರ ಭಾಗವಹಿಸಿದ್ದರು.

KEA CET Ranking Confusion: Govt Decides to Challenge High Court Verdict

ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶದಿಂದ ಅವಕಾಶ ವಂಚಿತರಾಗುವ ಆತಂಕದಲ್ಲಿದ್ದ 2020-21ನೇ ಸಾಲಿನ ದ್ವಿತೀಯ ಪಿಯು ಪುನರಾವರ್ತಿತ ಸಾವಿರಾರು ವಿದ್ಯಾರ್ಥಿಗಳ ಪರವಾಗಿ ಹೈಕೋರ್ಟ್ ತೀರ್ಪು ನೀಡಿತ್ತು. ಪಿಯುಸಿಯಲ್ಲಿ ಶೇ.50 ಮತ್ತು ಸಿಇಟಿಯ ಶೇ.50 ಅಂಕ ಪರಿಗಣಿಸಿ ಹೊಸದಾಗಿ ರ್‍ಯಾಂಕಿಂಗ್ ಪ್ರಕಟಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು.


English summary
This year's students will be unfairly treated by the High Court's decision to release the ranking list considering the secondary PUC marks of 24,000 candidates who have written CET this year after passing PUC in 2020-21. Therefore, it will be questioned in the court, said Higher Education Minister Dr. CN Ashwathtanarayan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X