ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲಾ ಜಿಲ್ಲೆಗಳಲ್ಲೂ ಸಿಇಟಿ ಕೇಂದ್ರ ಆರಂಭ, ಶುಲ್ಕವೂ ಕಡಿತ

|
Google Oneindia Kannada News

ಬೆಂಗಳೂರು, ಜನವರಿ 29: ಎಲ್ಲಾ ಜಿಲ್ಲೆಗಳಲ್ಲೂ ಈ ವರ್ಷದಿಂದಲೇ ಸಿಇಟಿ ಕೇಂದ್ರ ಆರಂಭವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಾಯಕ ಕೇಂದ್ರಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗಳ ದಾಖಲಾಇ ಪರಿಶೀಲನೆಗೆ ವಿದ್ಯಾರ್ಥಿಗಳು ಪರದಾಡುವಂತಿಲ್ಲ. ಈ ವರೆಗೆ ರಾಜ್ದ 16 ಜಿಲ್ಲೆಗಳಲ್ಲಿ ಮಾತ್ರ ಕೆಇಎ ಪ್ರಾದೇಶಿಕ ಕೇಂದ್ರಗಳಿದ್ದವು. ಸಿಇಟಿ ಪರೀಕ್ಷೆಗಳಿಗೆ ಸಂಬಂಧಿಸಿದ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ಕಷ್ಟವಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ಸೋಮವಾರ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಇ ತುಕಾರಾಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುವುದಕ್ಕಾಗಿ ವಿಧಿಸುತ್ತಿದ್ದ ಶುಲ್ಕವನ್ನೂ ಕೂಡ ಕಡಿತಗೊಳಿಸಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಸಾಮಾನ್ಯ ವರ್ಗದವರಿಗೆ ವಿಧಿಸುತ್ತಿದ್ದ 650-500 ರೂ ಗಳಿಗೆ ಕಡಿತಗೊಳಿಸಲಾಗಿದೆ. ಪರಿಶಿಷ್ಟ ಜಾತಿ, ಪ್ರವರ್ಗ-1ಕ್ಕೆ ವಿಧಿಸುತ್ತಿದ್ದ 500 ರೂ ಗಳಿಂದ 250ಕ್ಕೆ ಶುಲ್ಕ ಕಡಿತಗೊಳಿಸಲಾಗಿದೆ.

KEA cuts CET fee by Rs 150

ಏಪ್ರಿಲ್ 23,24ರಂದು ಸಿಇಟಿ ಪರೀಕ್ಷೆ, ವಿದ್ಯಾರ್ಥಿಗಳೇ ಸಿದ್ಧರಾಗಿ ಏಪ್ರಿಲ್ 23,24ರಂದು ಸಿಇಟಿ ಪರೀಕ್ಷೆ, ವಿದ್ಯಾರ್ಥಿಗಳೇ ಸಿದ್ಧರಾಗಿ

ಪರೀಕ್ಷಾ ಪ್ರಾಧಿಕಾರದಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಿಗದಿ ಮಾಡಿರುವ ಕ್ರೀಡಾ ಕಕೋಟಾದಲ್ಲಿ ಯಾವುದೇ ಬದಲಾವಣೆ ತರದಿರಲು ನಿರ್ಣಯಿಸಲಾಗಿದೆ. ಎಂದಿನಂತೆ ಕೈಪಿಡಿಯಲ್ಲಿ ನೀಡಿರುವ ಕೋರ್ಸ್ ಗಳಿಗೂ ಕೋಟಾದಡಿ ಸೀಟು ನೀಡಲಾಗುವು ಎಂದು ಸಚಿವರು ತಿಳಿಸಿದ್ದಾರೆ.

English summary
Students writing the Common Entrance Test (CET) 2019 will be paying a smaller fee, starting this year. The revised registration fee will be Rs 150 lower than last year’s fee for general candidates, and 50 per cent lower from last year for girls and SC/ST students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X