FDA Exam Scam: ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ-ಅವ್ಯವಹಾರ, 18 ಮಂದಿ ಬಂಧನ, ವಿವರ

ಬೆಂಗಳೂರು, ಅಕ್ಟೋಬರ್ 29: ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶನಿವಾರ ನಡೆಸಿದ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಪೊಲೀಸರು ಒಟ್ಟು 18 ಜನರನ್ನು ಬಂಧಿಸಿದ್ದಾರೆ. ಈ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೆಳಕಿಗೆ ಬಂದಿದೆ.

ಬ್ಲೂಟೂತ್ ಬಳಸಿ ಉತ್ತರ ಹೇಳುತ್ತಿದ್ದ ಮತ್ತು ಪಡೆಯುತ್ತಿದ್ದವರನ್ನು ಪೋಲೀಸರು ಬಂಧಿಸಿದ್ದಾರೆ. ಅವರ ಪ್ರಕಾರ ಕಲಬುರ್ಗಿಯಲ್ಲಿ 09 ಮಂದಿ, ಯಾದಗಿರಿ ಜಿಲ್ಲೆಯಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ. ಇವರಲ್ಲಿ ಐವರು ಆರೋಪಿಗಳು ಮೊಬೈಲ್ ಮೂಲಕ ಉತ್ತರ ನೀಡುತ್ತಿದ್ದರು ಎಂದು ಪೊಲೀಸ್ ಒಬ್ಬರು ಮಾಹಿತಿ ನೀಡಿದ್ದಾರೆ.

KEA Exam Malpractice: 18 People Detained by Police, See Details

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೇ ಶನಿವಾರ ವಿವಿಧ ಮಂಡಳಿಗಳು ಮತ್ತು ನಿಗಮಗಳಲ್ಲಿ ಪ್ರಥಮ ವಿಭಾಗದ ಸಹಾಯಕ (FDA) ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆಗಳನ್ನು ನಡೆಸಿತ್ತು. ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಲೋಪದೋಷ ಪತ್ತೆಯಾಗಿದೆ.

ಪಿಎಸ್‌ಐ ಹಗರಣದ ಕಿಂಗ್‌ ಪಿನ್‌ ನಿಂದ ಮತ್ತೆ ಕೃತ್ಯ

ಈ ಹಿಂದೆ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (PSI) ಅಕ್ರಮ ನೇಮಕಾತಿ ಪ್ರಕರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಸಿಕ್ಕಿ ಬಿದ್ದು ಬಿಡುಗಡೆಯಾದ ಬಳಿಕವು ಈತ ತನ್ನ ಹಳೇ ಚಾಳಿ ಮುಂದುವರೆಸಿದ್ದ ಎನ್ನಲಾಗಿದೆ. ಸಿಕ್ಕಿಬಿದ್ದ ವ್ಯಕ್ತಿಗಳ ಪೈಕಿ ಒಬ್ಬರು ಕಿಂಗ್ ಪಿನ್ ಆರ್‌ಡಿ ಪಾಟೀಲ್ ದುಷ್ಕೃತ್ಯದಲ್ಲಿ ಭಾಗಿಯಾಗಿದ್ದರ ಬಗ್ಗೆ ಬಾಯಿ ಬಿಟ್ಟಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ ಸರ್ಕಾರಿ ಹುದ್ದೆಯ ಆಕಾಂಕ್ಷಿ ಬ್ಲೂಟೂತ್ ಡಿವೈಸ್ ಬಳಸಿ ಹೊರಗಿನ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದಾರೆ. ಹೊರಿನಿಂದಲೇ ಉತ್ತರ ಪಡೆಯುತ್ತಿದ್ದಾರೆ ಎಂಬ ಸಂಗತಿಯನ್ನು ಕೆಇಎ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿದ ಅಭ್ಯರ್ಥಿಯನ್ನು ವಶಕ್ಕೆ ಪಡೆದ ಪೊಲೀಸರು ಇಡೀ ಗುಂಪನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾದರು.

KEA Exam Malpractice: 18 People Detained by Police, See Details

ಹೊಟ್ಟೆ ಬಳಿ ರಿಸೀವರ್ ಇಟ್ಟಿದ್ದ ಆಕಾಂಕ್ಷಿ

ಒಟ್ಟು ಸುಮಾರು ಎಂಟು ಕಡೆ ಪರಿಶೀಲಿಸಿದ ಅಧಿಕಾರಿಗಳು ಆಕಾಂಕ್ಷಿಗಳನ್ನು ಬಂಧಿಸಿದ್ದಾರೆ. ಅಫಜಲಪುರದ ತ್ರಿಮೂರ್ತಿ ಎಂಬ ಅಭ್ಯರ್ಥಿ ಕಿವಿಯಲ್ಲಿ ಬ್ಲೂಟೂತ್ ಮತ್ತು ಹೊಟ್ಟೆ ಬಳಿ ಬಟ್ಟೆಯೊಳಗೆ ರಿಸೀವರ್ ಇಟ್ಟುಕೊಂಡು ಪರೀಕ್ಷೆಗೆ ಹಾಜರಾಗಿದ್ದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ತ್ರಿಮೂರ್ತಿ ಮಾತ್ರವಲ್ಲದೇ ಅವರ ಸಹೋದರ ಅಂಬರೀಶ್ ಅವರಿಗೂ ಸಹ ಪರೀಕ್ಷಾ ಕೇಂದ್ರದ ಹೊರಗಿನಿಂದಲೇ ಉತ್ತರ ನೀಡುತ್ತಿದ್ದರು. ಈ ಕುರಿತು ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದ್ದು ಕೂಡಲೇ ಪೊಲೀಸರು ಅವರನ್ನೂ ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದಲ್ಲಿ ಈ ಆರ್ ಡಿ ಪಾಟೀಲ್ ವ್ಯಕ್ತಿ ಪ್ರಮುಖ ಪಾತ್ರ ವಹಿಸಿದ್ದ. ಸದ್ಯ ಅವರು ಅನೇಕ ಪ್ರಕರಣಗಳನ್ನು ಎದುರಿಸುತ್ತಿದ್ದರು. ಈ ಕಳೆದ ಚುನಾವಣೆಯಲ್ಲಿ ಅಫ್ಜಲ್‌ಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು ಎಂಬುದು ಈ ಆರೋಪಿಯ ಹಿನ್ನೆಲೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+