KEA Exam Guidelines: ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರು ಗಮನಿಸಿ: ಕಟ್ಟುನಿಟ್ಟಿನ ವಸ್ತ್ರಸಂಹಿತೆ, ಏನಿದೆ- ಏನಿಲ್ಲ?
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA), ಕೆಪಿಎಸ್‌ಸಿ, ಶಿಕ್ಷಣ ಮಂಡಳಿಗಳು ಸೇರಿದಂತೆ ಇತರ ಸಂಸ್ಥೆಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳು, ಪ್ರವೇಶ ಪರೀಕ್ಷೆ, ವಿವಿಧ ಇಲಾಖೆಗಳ ನೇಮಕಾತಿಗೆ ಪರೀಕ್ಷೆಗೆ ಹಾಜರಾಗುವಾಗ ಯಾವೆಲ್ಲ ನಿಯಮಗಳಿರುತ್ತವೆ. ಕಡ್ಡಾಯ ನಿಯಮಗಳ ಪಾಲನೆ, ಪರೀಕ್ಷಾ ಕೇಂದ್ರ ಪ್ರವೇಶಿಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಇರುವ ರೂಲ್ಸ್ ಏನು? ಯಾವೆಲ್ಲ ವಸ್ತುಗಳು ನಿಷೇಧ ಹಾಗೂ ಅನುಮತಿ ಇದೆ. ವಸ್ತ್ರಸಂಹಿತೆ ಹೇಗಿರುತ್ತದೆ ಎಂಬುದರ ಸಂಕ್ಷಿಪ್ತ ವಿವರ ಇಲ್ಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಕ್ಟೋಬರ್ ಮೊದಲ ವಾರ ರಾಜ್ಯ ಸರ್ಕಾರಿ ವಿವಿಧ ಇಲಾಖೆಗಳು, ನಿಗಮಗಳಿಗೆ ಸಂಬಂಧಿಸಿದಂತೆ ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 700ಕ್ಕು ಅಧಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿತ್ತು. ಈ ಪೈಕಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಇತರ ಇಲಾಖೆಗಳಲ್ಲಿನ ಖಾಲಿ ಇರುವ ಎಫ್‌ಡಿಎ ಹುದ್ದೆಗಳಿಗೆ ಜನವರಿ 11ರಂದು ಪರೀಕ್ಷೆಗಳು ನಡೆಯಲಿವೆ. ಇತರ ಪರೀಕ್ಷೆಗಳು ಇದೇ ತಿಂಗಳು ಹಾಗೂ ಮುಂದಿನ ದಿನಗಳು ಜರುಗಲಿವೆ.

ಅಭ್ಯರ್ಥಿಗಳ ಪ್ರವೇಶ ಪತ್ರ ಸಹ ಇತ್ತೀಚೆಗೆ ಬಿಡುಗಡೆ ಆಗಿದೆ. ಇಲಾಖಾವಾರು ನೇಮಕಾತಿ ವೇಳಾಪಟ್ಟಿ ನೋಡಿಕೊಂಡು ಅಭ್ಯರ್ಥಿಗಳು ಪರೀಕ್ಷೆ ಎದುರಿಸಬೇಕಿದೆ. ಪರೀಕ್ಷೆಗಳಲ್ಲಿ ನಕಲು ಆಗದಂತೆ, ಅಹಿಕರ ಘಟನೆಗಳು ಜರುಗಂತೆ ಯಾವೆಲ್ಲ ನಿಯಮ ಜಾರಿ ಮಾಡಲಾಗಿದೆ. ಏನೆಲ್ಲ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವ ಮೂಲಕ ಪರೀಕ್ಷೆ ಹಾಜರಾಗುವ ಕೊನೆ ಕ್ಷಣದ ತಲೆಬಿಸಿ ತಪ್ಪಿಸಿಕೊಳ್ಳಬಹುದು. ಬಹುತೇಕ ಎಲ್ಲ ವಿಧದ ಪರೀಕ್ಷೆಗಳಲ್ಲೂ ಇದೇ ರೀತಿಯ ನಿಯಮಗಳು ಇರುತ್ತವೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ವಿವಿಧ ನೇಮಕಾತಿ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಪ್ರವೇಶ ಪರೀಕ್ಷೆಗೆ ವಸ್ತ್ರಸಂಹಿತೆ ಸಂಪೂರ್ಣ ಪಟ್ಟಿ.
ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ
1. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲ. ಆದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್‌ರಹಿತ ಸಾಧಾರಣ ಶರ್ಟ್/ ಟಿ-ಶರ್ಟ್ ಧರಿಸಲು ಆದ್ಯತೆ ನೀಡಬೇಕು.
2. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮವನ್ನು, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ.
3. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ (ZIP) ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.
4. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು.
5. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
1. ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.
2. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಮತ್ತು ಮೇಲೆ ಉಲ್ಲೇಖಿಸಿರುವ ಬಗೆಯಲ್ಲಿ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
3. ಎತ್ತರವಾದ ಹಿಮ್ಮಡಿಯ ಶೂಗಳನ್ನು/ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
4. ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).
ಪರೀಕ್ಷಾ ಕೇಂದ್ರ: ನಿಷೇಧಿತ ವಸ್ತುಗಳು ಯಾವುವು
1. ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಯಾವುದೇ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗದಂತೆ ಖಚಿತಪಡಿಸಿಕೊಳ್ಳಬೇಕು.
2. ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲ್ಲ.
3. ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ. ಬಣ್ಣದ ಹಾಗೂ ಲೋಹದ ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ.
4. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
5. ತಲೆಯ ಮೇಲೆ ಟೋಪಿ/ Hat ಧರಿಸುವಂತಿಲ್ಲ.
6. ಯಾವುದೇ ರೀತಿಯ ಮುಖ ಮುಚ್ಚುವಂತ ಮಾಸ್ಕನ್ನು ಧರಿಸುವಂತಿಲ್ಲ.
ಪರೀಕ್ಷಾ ಕೇಂದ್ರ: ಈ ವಸ್ತುಗಳಿಗೆ ಮಾತ್ರವೇ ಅನುಮತಿ
1. ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು.
2. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯಗೊಳಿಸಲಾಗಿದೆ.
3. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.
ವಿಶೇಷ ಸೂಚನೆ: ಮೇಲೆ ನಿಗದಿಪಡಿಸಲಾದ ವಸ್ತ್ರ ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಲೇಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಚ್ಚರಿಸಿದೆ.
ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ನೇಮಕಾತಿ ಪರೀಕ್ಷೆಗಳಲ್ಲಿ ಬಹುತೇಕ ಇದೆ ನಿಯಮಗಳು ಅನ್ವಯವಾಗಲಿವೆ. ಈ ಹಿಂದೆ ನಕಲು ಮಾಡುವುದು, ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆ ನಡೆದಿದ್ದವು. ಹಿಜಾಬ್ ಧಾರಣೆ, ಜನಿವಾರ ಧರಿಸಿದ್ದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿ ಒಳಗೆ ಬಿಟ್ಟಿರಲಿಲ್ಲ. ಇದು ದೊಡ್ಡ ಸುದ್ದಿ ಆಗಿತ್ತು. ವರ್ಷಗಟ್ಟಲೇ ಓದಿ ಪರೀಕ್ಷಾ ದಿನ ಮಾಡುವ ಸಣ್ಣ ತಪ್ಪಿನಿಂದ, ನಿಯಮ ಪಾಲಿಸದ ಕಾರಣ ಕನಸುಗಳನ್ನು ಚೂರಾಗಲು ಬಿಡಬೇಡಿ. ಎಲ್ಲ ನಿಯಮ ಪಾಲಿಸಿಯೇ ಪರೀಕ್ಷೆ ಎದುರಿಸಿದರೆ ಉತ್ತಮ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications