UGNEET 2026: ಅರ್ಹತಾ ಅಭ್ಯರ್ಥಿಗಳ ಯುಜಿಸಿಇಟಿಗೆ ಹೊಸದಾಗಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಬೆಂಗಳೂರು: ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ- ಪದವಿಪೂರ್ವ (UG NEET 2026) ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಬರೆದು, ಅರ್ಹರಾದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಗುಡ್‌ನ್ಯೂಸ್ ನೀಡಿದೆ. ನೀಟ್ ಅರ್ಹತೆ ಪಡೆದು ಯುಜಿಸಿಇಟಿಗೆ ಇದುವರೆಗೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳು ಹೊಸ ಅರ್ಜಿ ಸಲ್ಲಿಸುವವರಿಗೆ ಜುಲೈ 30ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಈ ಮೊದಲು ಜುಲೈ 24ರಂದು ಶುಕ್ರವಾರವೇ ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿತ್ತು. ಆದರೆ ಸಾರ್ವಜನಿಕರ ಕೋರಿಕೆ ಮೇರೆಗೆ ಮತ್ತೆ ದಿನಾಂಕ ವಿಸ್ತೀರ್ಣ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.

ನೀಟ್ ರೋಲ್ ನಂಬರ್ ಜೋಡಣೆ ಅವಕಾಶ
ನೀಟ್ ಫಲಿತಾಂಶದ ಮಾಹಿತಿಯೂ ಇನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬಂದಿಲ್ಲ. ಅದು ಲಭ್ಯವಾದ ನಂತರ ನೀಟ್ ರೋಲ್ ನಂಬರ್ ಜೋಡಣೆಗೆ ಅವಕಾಶ ನೀಡಲಾಗುವುದು. ಅಲ್ಲಿಯವರೆಗೂ ಅಭ್ಯರ್ಥಿಗಳು/ಪೋಷಕರು ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ.
ಇನ್ನೂ ನೀಟ್ ರೋಲ್ ನಂಬರ್ ದಾಖಲಿಸಿದ ನಂತರ ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ. ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳ https://cetonline.karnataka.gov.in/kea/ ಗೆ ಸಂಪರ್ಕಿಸುವಂತೆ ಮಾಹಿತಿ ನೀಡಲಾಗಿದೆ.
ಯುಜಿಸಿಇಟಿ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕಳೆದ ವಾರ ಬಿಡುಗಡೆ ಮಾಡಿತ್ತು. ಅಭ್ಯರ್ಥಿಗಳು ಕೆಇಎ ವೆಬ್ ಸೈಟ್ ನಲ್ಲಿ ಬಿಟ್ಟಿರುವ ಲಿಂಕ್ ಮೂಲಕ ಫಲಿತಾಂಶ ಪಡೆಯುವಂತೆ ತಿಳಿಸಲಾಗಿದೆ.
ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆ ಇದ್ದಲ್ಲಿ ಜುಲೈ 14ರಂದು ಸಂಜೆ 5 ಗಂಟೆಯೊಳಗೆ ಆನ್ ಲೈನ್ ಮೂಲಕ ಸಲ್ಲಿಸಬಹುದು. ಜುಲೈ 9ರಂದು ಬೆಳಿಗ್ಗೆ 11 ಗಂಟೆವರೆಗೆ ದಾಖಲಿಸಿದ್ದ ಇಚ್ಛೆ/ಆಯ್ಕೆಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗಿತ್ತು.
ಯುಜಿಸಿಇಟಿ 2026ಗೆ ಸಂಬಂಧಿಸಿದಂತೆ ಆರ್ಕಿಟೆಕ್ಚರ್ ಪದವಿ ಕೋರ್ಸ್ ಪ್ರವೇಶಕ್ಕೆ 888 ಅರ್ಹ ಅಭ್ಯರ್ಥಿಗಳ ಶ್ರೇಣಿಯನ್ನು ಪ್ರಾಧಿಕಾರ ಪ್ರಕಟಿಸಿತ್ತು. ಮುಂದಿನ ದಿನಗಳಲ್ಲಿ ಈ ಅಭ್ಯರ್ಥಿಗಳಿಗೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಪ್ಲೊಮಾ (DCET) ಅಭ್ಯರ್ಥಿಗಳು, ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶಕ್ಕಾಗಿ ನಾಟಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಪಟ್ಟಿಯನ್ನು ಪ್ರಾಧಿಕಾರಕ್ಕೆ ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ಅನೇಕ ಡಿಸಿಇಟಿ ಅರ್ಜಿ ಪ್ರತಿ, ನಾಟಾ ಅಂಕ ಪಟ್ಟಿ, ಡಿಪ್ಲೊಮಾ ಅಂಕಪಟ್ಟಿ, ಅರ್ಜಿಯಲ್ಲಿ ಕ್ಲೇಮ್ ಮಾಡಿರುವ ವಿದ್ಯಾರ್ಥಿಗಳು ದಾಖಲೆ ಸಮೇತ ಸಲ್ಲಿಸಿದ್ದಾರೆ. ಮುಂದಿನ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕೆಇಎ ತಿಳಿಸಿದೆ.


Click it and Unblock the Notifications
