PGNEET 2025: ಕೋರ್ಸ್‌ಗಳ ಪ್ರವೇಶಕ್ಕೆ ಆಹ್ವಾನ, ನೋಂದಣಿ ವೇಳೆ ತಾಂತ್ರಿಕ ದೋಷ...KEA ಸಲಹೆ
ಬೆಂಗಳೂರು, ಅಕ್ಟೋಬರ್ 07: ಸ್ನಾತಕೋತ್ತರ ವೈದ್ಯಕೀಯ ಹಾಗೂ ಡಿಪ್ಲೊಮಾ ಕೋರ್ಸುಗಳಿಗೆ ಪ್ರವೇಶ ಪಡೆಯಲು (PGNEET-2025) ಅರ್ಹ ಅಭ್ಯರ್ಥಿಗಳ ಆನ್‌ಲೈನ್ ನೋಂದಣಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಲಿಂಕ್ ಬಿಡುಗಡೆ ಮಾಡಿತ್ತು. ಆದರೆ ಕೆಲವು ಅಭ್ಯರ್ಥಿಗಳ ನೋಂದಣಿ ವೇಳೆ ತಾಂತ್ರಿಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ. ಇದಕ್ಕೆ ಕೆಇಎ ಅಧಿಕಾರಿಗಳು ಪರಿಹಾರ ನೀಡಿದ್ದಾರೆ.
ಆಗಿರುವ ಆನ್‌ಲೈನ್ ನೋಂದಣಿಯಲ್ಲಿನ ತಾಂತ್ರಿಕ ದೋಷವನ್ನು ತಾಂತ್ರಿಕ ವಿಭಾಗ ಪರಿಶೀಲನೆ ನಡೆಸಿದೆ. ಇತ್ತೀಚಿನ ಆವೃತ್ತಿಯ ಗೂಗಲ್ ಕ್ರೋಮ್ ಬ್ರೌಸರ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಅದರ ಮೂಲಕ ಲಾಗಿನ್ ಆಗುವಂತೆ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸಣ್ಣ ಅವರು ಸಲಹೆ ನೀಡಿದ್ದಾರೆ.

ಇನ್ನೂ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅಕ್ಟೋಬರ್ 9ರ ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಅಧಿಕೃತ ವೆಬ್‌ಸೈಟ್‌ಗೆ http://cetonline.karnataka.gov.in/KEA/pgetmed2025 ಭೇಟಿ ನೀಡುವಂತೆ ಅವರು ಕೋರಿದ್ದಾರೆ.
ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) NEET-PG 2025 ರಲ್ಲಿ ಅರ್ಹತೆ ಪಡೆದಿರುವ ಮತ್ತು ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳಿಂದ 2025-26ನೇ ಸಾಲಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳು, ಖಾಸಗಿ ಮತ್ತು ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳ ಸರ್ಕಾರಿ ಕೋಟಾ ಹಾಗೂ ಖಾಸಗಿ ಕೋಟಾ ಸೀಟುಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.
ಅದೇ ರೀತಿ, ದಿನಾಂಕ 10-01-2022 ನೀಡಿದ್ದ ಸರ್ಕಾರದ ಆದೇಶದನ್ವಯ ಕರ್ನಾಟಕ ಸೇವಾನಿರತ ಅರ್ಹ ಅಭ್ಯರ್ಥಿಗಳಿಂದ ಸ್ನಾತಕೋತ್ತರ DNB ಹಾಗೂ ಡಿಪ್ಲೊಮಾ ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶಕ್ಕಾಗಿ ಸಹ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬೇಕಿದೆ.
PGNEET 2025 ಪರೀಕ್ಷೆಯಲ್ಲಿ ನಿಗದಿಪಡಿಸಿರುವ ಕನಿಷ್ಠ ಪರ್ಸೆಂಟೈಜ್ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಮಾತ್ರ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನೋಂದಣಿ ಮಾಡಿಕೊಳ್ಳಲು ಅರ್ಹರಾಗಿದ್ದಾರೆ. ಕರ್ನಾಟಕದ ನಿವಾಸಿಗಳು ಮಾತ್ರ ಅರ್ಜಿ ಹಾಕಬಹುದು ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಶೈಕ್ಷಣಿಕ ಅರ್ಹತೆ, ಮಾನದಂಡಗಳು, ಸೀಟುಗಳಿಗೆ ನಿಗದಿಪಡಿಸಿ ಅಭ್ಯರ್ಥಿಗಳ ಅರ್ಹತೆ, ಆನ್‌ಲೈನ್ ಸೀಟು ಹಂಚಿಕೆ ವಿಧಾನ ಇನ್ನಿತರ ಅಂಶಗಳು, ಮಾರ್ಗಸೂಚಿ ಅನುಸರಿಸಿಕೊಂಡು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಸದ್ಯ ಈ ನೋಂದಣಿಯಲ್ಲಿ ಆದ ತೊಂದರೆ ಶೀಘ್ರವೇ ಪರಿಹಾರಗೊಳ್ಳಲಿದೆ ಎಂದು ಕೆಇಎ ಅಧಿಕಾರಿ ಎಚ್.ಪ್ರಸಣ್ಣ ಅವರು ಹೇಳಿದ್ದಾರೆ.












Click it and Unblock the Notifications