ವಸತಿ ಶಾಲೆ ಶಿಕ್ಷಕರ ನೇಮಕಾತಿ 2026: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ಅಭ್ಯರ್ಥಿಗಳಿಗೆ ಗುಡ್ ನ್ಯೂಸ್
KRIES Recruitment 2026: ರಾಜ್ಯದ ಸರ್ಕಾರಿ ವಸತಿ ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಒಂದು ಒಳ್ಳೆಯ ಸಿಹಿಸುದ್ದಿ ನೀಡಿದೆ. ಹೌದು ನೋಡಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KRIES) ಅಧೀನದಲ್ಲಿ ಕೆಲಸ ಮಾಡುವ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನ ಇದೀಗ ಪ್ರಾಧಿಕಾರ ವಿಸ್ತರಿಸಿದೆ.

ಯಾವೆಲ್ಲ ಶಾಲೆಗಳ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು?
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಬರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ವಿವಿಧ 'ಗ್ರೂಪ್-ಸಿ' ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಕೆಇಎ ಮುಂದಾಗಿದೆ. ಈ ಕುರಿತು ಜುಲೈ 10, 2026 ರಂದು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.
ಈ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 13, 2026 ಕೊನೆಯ ದಿನವಾಗಿತ್ತು. ಆದರೆ, ಅನೇಕ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ದಿನಾಂಕವನ್ನ ವಿಸ್ತರಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡಿದ್ದ ಕಾರಣಕ್ಕೆ, ಅಭ್ಯರ್ಥಿಗಳ ಹಿತದೃಷ್ಟಿಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಅರ್ಜಿ ಸಲ್ಲಿಕೆಯ ಹೊಸ ದಿನಾಂಕ ಮತ್ತು ಶುಲ್ಕ ಪಾವತಿ
ಅಭ್ಯರ್ಥಿಗಳ ಸತತ ಮನವಿಯ ಮೇರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು ಆಗಸ್ಟ್ 17, 2026 ರವರೆಗೆ ವಿಸ್ತರಿಸಿದೆ. ಅದೇ ರೀತಿ, ಅರ್ಜಿ ಶುಲ್ಕವನ್ನು ಪಾವತಿಸಲು ಆಗಸ್ಟ್ 18, 2026 ನ್ನು ಕಡೆಯ ದಿನವನ್ನಾಗಿ ನಿಗದಿಪಡಿಸಲಾಗಿದೆ.
ಈ ಮೊದಲು ಶುಲ್ಕ ಪಾವತಿಗೆ ಆಗಸ್ಟ್ 14 ಕೊನೆಯ ದಿನವಾಗಿತ್ತು. ಯಾರೆಲ್ಲಾ ಇದುವರೆಗೂ ಅರ್ಜಿ ಸಲ್ಲಿಸಿಲ್ಲವೋ, ಅವರು ಈ ಹೆಚ್ಚುವರಿ ಕಾಲಾವಕಾಶವನ್ನು ಸದುಪಯೋಗಪಡಿಸಿಕೊಂಡು ತಕ್ಷಣವೇ ಅರ್ಜಿ ಪ್ರಕ್ರಿಯೆಯನ್ನ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಪ್ರಮುಖ ಮಾಹಿತಿ
ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಐಎಎಸ್ ಹೆಚ್. ಪ್ರಸನ್ನ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮತ್ತು ಶುಲ್ಕ ಪಾವತಿಸುವ ದಿನಾಂಕಗಳಲ್ಲಿ ಮಾತ್ರ ಬದಲಾವಣೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಉಳಿದಂತೆ ಜುಲೈ 10, 2026 ರಂದು ಹೊರಡಿಸಲಾದ ಮೂಲ ಅಧಿಸೂಚನೆಯಲ್ಲಿನ ಯಾವುದೇ ನಿಯಮ ಅಥವಾ ಷರತ್ತುಗಳಲ್ಲಿ ಬದಲಾವಣೆಗಳು ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ಕ್ಷಣದ ಸರ್ವರ್ ಸಮಸ್ಯೆಗಳಿಗಾಗಿ ಕಾಯದೆ, ಬಿಡುವು ಮಾಡಿಕೊಂಡು ಕೆಇಎ ಅಧಿಕೃತ ವೆಬ್‌ಸೈಟ್ ಮೂಲಕ ಕೂಡಲೇ ತಮ್ಮ ಅರ್ಜಿಯನ್ನು ಸಲ್ಲಿಸುವುದು ಸೂಕ್ತ.
KRIES Recruitment 2026:ಕೆಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್ 11ರಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
ಪ್ರಸಕ್ತ ಸಾಲಿನ ಕೆಸೆಟ್ ಪರೀಕ್ಷೆಯನ್ನು ಒಟ್ಟು 37 ವಿಷಯಗಳಿಗೆ ನಡೆಸುತ್ತಿದ್ದು, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 5ರೊಳಗೆ ಅರ್ಜಿ ಸಲ್ಲಿಸಬೇಕು. ಸೆ.6ರೊಳಗೆ ಶುಲ್ಕ ಪಾವತಿಸಬೇಕು.
ಒಂದಕ್ಕಿಂತ ಹೆಚ್ಚು ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು, ಯಾವುದಾದರು ಒಂದು ವಿಷಯದಲ್ಲಿ ಮಾತ್ರ ಕೆಸೆಟ್ ಪರೀಕ್ಷೆ ತೆಗೆದುಕೊಳ್ಳಬಹುದು. ಒಮ್ಮೆ ವಿಷಯ ಆಯ್ಕೆ ಮಾಡಿದ ನಂತರ ಬದಲಾವಣೆಗೆ ಅವಕಾಶ ಇರುವುದಿಲ್ಲ.


Click it and Unblock the Notifications
