KEA Exam: ವೈದ್ಯಕೀಯ ಪಿಜಿ ಕೋರ್ಸ್‌ಗಳ ಪ್ರವೇಶ ಪರೀಕ್ಷೆ, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ, ವಿವರ
PG Entrance Exam 2025: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೈದ್ಯಕೀಯ ಶಿಕ್ಷಣ ಇಲಾಖೆ ಕೋರಿಕೆಯಂತೆ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪರೀಕ್ಷೆ ನಡೆಸಲಿದೆ. ಈ ಸಂಬಂಧ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ. ಇಂದು ಸೆಪ್ಟಂಬರ್ 03ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಅಧಿಕೃತ ವೆಬ್‌ಸೈಟ್ ಲಿಂಕ್, ಕೋರ್ಸ್‌ಗಳು ಹಾಗೂ ಪರೀಕ್ಷೆ ಮಾಹಿತಿ ಇಲ್ಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಎಂ.ಎಸ್.ಸಿ ನರ್ಸಿಂಗ್, ಎಂ.ಪಿ.ಟಿ, ಎಂ.ಎಸ್.ಸಿ, ಅಲೈಡ್ ಹೆಲ್ತ್ ಸೈನ್ಸ್ ಮತ್ತು ಎಂ.ಫಾರ್ಮ ಮತ್ತು ಫಾರ್ಮ-ಡಿ (Post Baccalaureate) ಸೇರಿದಂತೆ ಇತರ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿಗೆ ಪಿಜಿ ಪ್ರವೇಶ ಪರೀಕ್ಷೆ 2025 ನಡೆಸಲಾಗುವುದು. ಈ ಸಂಬಂಧ ಅರ್ಜಿ ಸಲ್ಲಿಕೆ ಸೆಪ್ಟಂಬರ್ 3 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಸೆಪ್ಟಂಬರ್ 14 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.

ವೆಬ್ ಸೈಟ್ https://cetonline.karnataka.gov.in/ kea ಪ್ರಾಧಿಕಾರದ ಮೂಲಕ ನೋಂದಾಯಿಸಿಕೊಳ್ಳಬೇಕು. ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸುವಂತೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ಪತ್ರ ದಿನಾಂಕ 18-08-2025 ಮತ್ತು 20-08-2025 ರಲ್ಲಿ ಕೋರಿರುವಂತೆ ಈ ಮೇಲಿನ ಕೋರ್ಸ್‌ಗಳ ಪ್ರವೇಶಾತಿಗೆ ಕೆಇಎ ಪರೀಕ್ಷೆ ನಡೆಸಲಿದೆ. ಪಿಜಿ ಪ್ರವೇಶ ಪರೀಕ್ಷೆಗಳಲ್ಲಿ ಪಡೆಯುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ 2025-26ನೇ ಸಾಲಿಗೆ ಸೀಟು ಹಂಚಿಕೆ ಮಾಡಲಾಗುತ್ತದೆ ಎಂದರು.
ಈ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025-26ನೇ ಶೈಕ್ಷಣಿಕ ಸಾಲಿಗೆ, ಎಂ.ಎಸ್.ಸಿ ನರ್ಸಿಂಗ್. ಎಂ.ಪಿ.ಟಿ, ಎಂ.ಎಸ್.ಸಿ, ಅಲೈಡ್ ಹೆಲ್ತ್ ಸೈನ್ಸ್ ಮತ್ತು ಎಂ.ಫಾರ್ಮ ಮತ್ತು ಫಾರ್ಮ-ಡಿ (Post Baccalaureate) ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿಗೆ ಅಭ್ಯರ್ಥಿಗಳು ಆಯಾ ಕೋರ್ಸುಗಳಲ್ಲಿ ಪದವಿ ಪಡೆದು ಅರ್ಹರಿದ್ದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆಯಾ ಕೋರ್ಸುಗಳಿಗೆ ವಿವಿಧ ಇಲಾಖೆಯವರು ನಿಗದಿಪಡಿಸಿರುವ ಅರ್ಹತಾ ವಿವರಗಳನ್ನು ಹಾಗೂ ಅಗತ್ಯ ಇರುವ ದಾಖಲೆಗಳು ಇತರೆ ಮಾಹಿತಿಯನ್ನು ಒಳಗೊಂಡ ಮಾಹಿತಿ ಪುಸ್ತಕವನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ https://cetonline.karnataka.gov.in/kea ಪ್ರಕಟಿಸಲಾಗಿದೆ. ನೀವು ನಿಗದಿತ ಲಿಂಕ್ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಸಲ್ಲಿಸಬೇಕು. ಪಿಜಿ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುವುದು. ಪ್ರವೇಶ ಪರೀಕ್ಷೆಯ ದಿನಾಂಕವನ್ನು ಪ್ರಾಧಿಕಾರದ ವೆಬ್ ಸೈಟಿನಲ್ಲಿ ಸದ್ಯದಲ್ಲಿಯೇ ಪ್ರಕಟಿಸಲಾಗುವುದು. ಪ್ರಾಧಿಕಾರದಿಂದ ನೀಡುವ ಪ್ರವೇಶಾತಿಗಳು, ಹಂಚಿಕೆಗಳು ಸರ್ಕಾರ/ವೈದ್ಯಕೀಯ ಶಿಕ್ಷಣ ಇಲಾಖೆ / ಸಂಬಂಧ ಪಟ್ಟ ವಿಶ್ವವಿದ್ಯಾಲಯ /ಇಲಾಖೆಗಳು /ಅಪೆಕ್ಸ್ ಸಂಸ್ಥೆಗಳ ಅನುಮೋದನೆಗೆ ಒಳಪಟ್ಟಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.












Click it and Unblock the Notifications