KEA: ಪಿಜಿ ನೀಟ್ 2025 ಸೀಟು ಹಂಚಿಕೆ, ಫಾರ್ಮಾ ಕೋರ್ಸ್‌ಗಳ ಅಪ್ಡೇಟ್ ನೀಡಿದ ಕೆಇಎ
ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ (PGNEET 2025) ವೈದ್ಯಕೀಯ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ಹಾಗೂ ಎಂ ಫಾರ್ಮಾ ಮತ್ತು ಡಿ ಫಾರ್ಮಾ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಅಪ್ಡೇಟ್ ನೀಡಿದೆ.
ಪಿಜಿ ನೀಟ್ 2025 ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಫೆಬ್ರವರಿ 10ರಂದು ಬೆಳಗ್ಗೆ 8 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ. ತಾತ್ಕಾಲಿಕ ಸೀಟು ಹಂಚಿಕೆಯನ್ನು ಫೆಬ್ರವರಿ 10ರಂದು ಸಂಜೆ 5 ಗಂಟೆ ಹಾಗೂ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಫೆಬ್ರವರಿ 11ರಂದು ಮಧ್ಯಾಹ್ನ 1 ಗಂಟೆ ನಂತರ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಲ್ಲಿ ಸೀಟು ಹಂಚಿಕೆಯಾದವರು ಇದೇ ಫೆಬ್ರವರಿ 12 ರಿಂದ 13 ರವರೆಗೆ ಶುಲ್ಕ ಪಾವತಿಸಲು ಅವಕಾಶ ಇದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಫೆಬ್ರವರಿ 14ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಫಾರ್ಮಾ ಕೋರ್ಸ್: ಆಪ್ಷನ್ಸ್ ದಾಖಲಿಸಲು ಅವಕಾಶ
ಇನ್ನೂ ಎಂ ಫಾಮಾ ಹಾಗೂ ಡಿ ಫಾರ್ಮಾ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಶ್ರೇಣಿ (Rank) ಪ್ರಕಟಿಸಲಾಗಿದೆ. ಫೆಬ್ರವರಿ 7ರಿಂದಲೇ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಫೆಬ್ರವರಿ 9ರ ವರೆಗೆ ಅರ್ಹರು ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೇವಲ ಪರಿಶಿಷ್ಟ ಜಾತಿ ಎಂದು ನಮೂದಿಸಿರುವವರು ಈಗ ಒಳಮೀಸಲಾತಿ ಪ್ರಕಾರ SC-A, SC-B, SC-C ಎಂದು ನಮೂದಿಸಲು ಅವಕಾಶ ನೀಡಲಾಗಿದೆ. ಈ ಸಂಬಂಧ ಆರ್‌ಡಿ ಸಂಖ್ಯೆಯನ್ನು ನಮೂದಿಸಿ ನಂತರ ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳವುದು ಕಡ್ಡಾಯವಾಗಿದೆ.
ಫೆಬ್ರವರ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಸಮಯಾವಕಾಶ ನೀಡಲಾಗಿದೆ. ಫೆಬ್ರವರಿ 10ರಂದು ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುತ್ತದೆ. ಬಳಿಕ ಫೆಬ್ರವರಿ 11ರವರೆಗೆ ಇಚ್ಛೆ/ಆಯ್ಕೆಗಳನ್ನು ಬದಲಿಸಿಕೊಳ್ಳುವುದಕ್ಕೂ ಅವಕಾಶ ನೀಡಲಾಗಿದೆ. ಫೆಬ್ರವರಿ 11ರಂದು ಸಂಜೆ 6ಗಂಟೆ ಬಳಿಕ ನೈಜ ಫಲಿತಾಂಶವನ್ನು ಪ್ರಾಧಿಕಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಸೀಟು ಹಂಚಿಕೆಯಾದವರು ಫೆಬ್ರವರಿ 12 ರಿಂದ 16ರ ವರೆಗೆ ಶುಲ್ಕ ಪಾವತಿಸಿ, ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಬೇಕೆಂದು ಅವರು ನಿರ್ದೇಶಿಸಿದ್ದಾರೆ.












Click it and Unblock the Notifications