PGCET 2026: MBA, MCA ಮತ್ತು MTech ಕೋರ್ಸುಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್! ಕಾರಣವೇನು?

ಬೆಂಗಳೂರು: ರಾಜ್ಯದ ಎಂಬಿಎ, ಎಂಸಿಎ ಮತ್ತು ಎಂ.ಟೆಕ್ ಆಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಹಾಗೂ ಸಿಹಿಸುದ್ದಿಯೊಂದನ್ನ ನೀಡಿದೆ. ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ಆದೇಶದ ಹಿನ್ನೆಲೆಯಲ್ಲಿ 2026ನೇ ಸಾಲಿನ ಪಿಜಿಸಿಇಟಿ ಕೋರ್ಸುಗಳ ಪ್ರವೇಶಾತಿಗೆ ಮತ್ತೊಂದು ಅಂತಿಮ ಸುತ್ತಿನ ಕೌನ್ಸೆಲಿಂಗ್ ನಡೆಸಲು ಕೆಇಎ ತೀರ್ಮಾನಿಸಿದೆ.

ಈ ಕುರಿತಾದ ಸಂಪೂರ್ಣ ವೇಳಾಪಟ್ಟಿಯನ್ನ ಪ್ರಾಧಿಕಾರವು ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ 31 ರಿಂದಲೇ ಈ ಹೊಸ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ತಿಳಿಸಿದ್ದಾರೆ.

KEA PGCET 2026 Counseling Another Final Round Announced Following SC Order Check New Dates Here

ರಾಜ್ಯದಲ್ಲಿ ಸ್ನಾತಕೋತ್ತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಈ ಸುತ್ತು ವರದಾನವಾಗಲಿದೆ. ಪ್ರಾಧಿಕಾರ ನೀಡಿರುವ ಮಾಹಿತಿಯ ಪ್ರಕಾರ, ಅಕ್ಟೋಬರ್ 13 ರಿಂದ ಅಕ್ಟೋಬರ್ 15ರವರೆಗೆ ತಮ್ಮ ಆಯ್ಕೆಗಳನ್ನ ದಾಖಲಿಸಿ, ಆ ಬಳಿಕ ಸೀಟು ಹಂಚಿಕೆಯಾದ ಕಾಲೇಜುಗಳಲ್ಲಿ ಪ್ರವೇಶ ಪಡೆಯದಿರುವ ಅಭ್ಯರ್ಥಿಗಳಿಗೆ ಇದು ಕೊನೆಯ ಅವಕಾಶವಾಗಿದೆ. ಇಂತಹ ಅಭ್ಯರ್ಥಿಗಳು ಅಕ್ಟೋಬರ್ 31ರ ಸಂಜೆ 6 ಗಂಟೆಯ ಒಳಗೆ ನಿಗದಿತ ಶುಲ್ಕವನ್ನು ಪಾವತಿಸಿ ಆಯಾ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಪ್ರವೇಶ ಪಡೆದ ನಂತರ, ವಿದ್ಯಾರ್ಥಿಗಳಿಗೆ ಬೇಕಾದರೆ ಅಪ್‌ಗ್ರೇಡೇಷನ್‌ಗೆ ಹೋಗುವ ಆಯ್ಕೆಯೂ ಮುಕ್ತವಾಗಿರುತ್ತದೆ. ಆದರೆ, ಗಮನಿಸಬೇಕಾದ ಮುಖ್ಯ ಅಂಶವೆಂದರೆ, ಹಂಚಿಕೆಯಾದ ಕಾಲೇಜಿಗೆ ತೆರಳಿ ಪ್ರವೇಶ ಪಡೆಯದಿದ್ದರೆ, ಅಂತಹ ಅಭ್ಯರ್ಥಿಗಳಿಗೆ ಈ ಅಂತಿಮ ಸುತ್ತಿನ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಲು ಯಾವುದೇ ಅವಕಾಶ ಇರುವುದಿಲ್ಲ ಎಂದು ಪ್ರಾಧಿಕಾರ ಕಟ್ಟುನಿಟ್ಟಾಗಿ ಸ್ಪಷ್ಟಪಡಿಸಿದೆ.

ಕಾಷನ್ ಡಿಪಾಸಿಟ್ ಪಾವತಿ ಮತ್ತು ಆಪ್ಷನ್ ಎಂಟ್ರಿ ದಿನಾಂಕ

ಈ ವಿಶೇಷ ಹಾಗೂ ಕೊನೆಯ ಸುತ್ತಿನ ಕೌನ್ಸೆಲಿಂಗ್‌ನಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳು ನಿಗದಿತ ಕಾಷನ್ ಡಿಪಾಸಿಟ್ ಪಾವತಿಸುವುದು ಕಡ್ಡಾಯವಾಗಿದೆ. ಅಕ್ಟೋಬರ್ 31 ರಿಂದ ನವೆಂಬರ್ 3ರ ಒಳಗೆ ಅಭ್ಯರ್ಥಿಗಳು ಈ ಡಿಪಾಸಿಟ್ ಹಣವನ್ನು ಪಾವತಿಸಬೇಕು.

ಈ ಆರ್ಥಿಕ ಪ್ರಕ್ರಿಯೆ ಮುಗಿದ ಬಳಿಕ ಅಭ್ಯರ್ಥಿಗಳಿಗೆ ಹೊಸದಾಗಿ ಕಾಲೇಜು ಮತ್ತು ಕೋರ್ಸ್‌ಗಳ ಇಚ್ಛೆ ಅಥವಾ ಆಯ್ಕೆಗಳನ್ನ ಆದ್ಯತಾ ಕ್ರಮದಲ್ಲಿ ದಾಖಲಿಸಲು ಅವಕಾಶ ನೀಡಲಾಗುತ್ತದೆ. ಇದಕ್ಕಾಗಿ ಅಕ್ಟೋಬರ್ 31ರ ಮಧ್ಯಾಹ್ನ 2 ಗಂಟೆಯಿಂದ ನವೆಂಬರ್ 4ರ ಮಧ್ಯಾಹ್ನ 2 ಗಂಟೆಯವರೆಗೆ ಸಮಯಾವಕಾಶವನ್ನು ಒದಗಿಸಲಾಗಿದೆ.

ವಿದ್ಯಾರ್ಥಿಗಳು ತಮಗೆ ಸೂಕ್ತವೆನಿಸುವ ಮತ್ತು ಲಭ್ಯವಿರುವ ಸೀಟುಗಳ ಆಧಾರದ ಮೇಲೆ ಎಚ್ಚರಿಕೆಯಿಂದ ಆಯ್ಕೆಗಳನ್ನ ದಾಖಲಿಸುವಂತೆ ಸಲಹೆ ನೀಡಲಾಗಿದೆ.

ಕರ್ನಾಟಕ ಪಿಜಿಸಿಇಟಿ 2026 ಅಂತಿಮ ಫಲಿತಾಂಶ ಯಾವಾಗ?

ವಿದ್ಯಾರ್ಥಿಗಳು ದಾಖಲಿಸುವ ಹೊಸ ಆಪ್ಷನ್ ಎಂಟ್ರಿಗಳ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನ ನವೆಂಬರ್ 5ರಂದು ಪ್ರಕಟಿಸಲಿದೆ. ಅಂದು ಮಧ್ಯಾಹ್ನ 1 ಗಂಟೆಯ ನಂತರ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನ ವೀಕ್ಷಿಸಬಹುದಾಗಿದೆ.

ಎಂಬಿಎ, ಎಂಸಿಎ ಹಾಗೂ ಎಂ.ಟೆಕ್ ವ್ಯಾಸಂಗ ಮಾಡಲು ಕಾತರರಾಗಿರುವ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸಿಕ್ಕಿರುವ ಈ ಕೊನೆಯ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೆಇಎ ಸೂಚಿಸಿದೆ.

ಕೌನ್ಸೆಲಿಂಗ್ ಪ್ರಕ್ರಿಯೆ, ಶುಲ್ಕ ಪಾವತಿ ವಿಧಾನ, ಆಪ್ಷನ್ ಎಂಟ್ರಿ ಲಿಂಕ್ ಹಾಗೂ ಇನ್ನಿತರ ಹೆಚ್ಚಿನ ಮತ್ತು ನಿಖರ ಮಾಹಿತಿಗಾಗಿ ವಿದ್ಯಾರ್ಥಿಗಳು ನಿಯಮಿತವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವುದು ಸೂಕ್ತ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+