ಉದ್ಯೋಗಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : ಗ್ರಾಮ ಆಡಳಿತ ಅಧಿಕಾರಿ ಸೇರಿ ಒಟ್ಟು 4,723 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ರಾಜ್ಯದ ಯುವಜನತೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ಜರಿ ಸಿಹಿಸುದ್ದಿಯೊಂದನ್ನಾ ನೀಡಿದೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 4,723 ಹುದ್ದೆಗಳನ್ನು ಭರ್ತಿ ಮಾಡಲು ಕೆಇಎ ಅಧಿಕೃತ ಅಧಿಸೂಚನೆಗಳನ್ನು ಹೊರಡಿಸಿದೆ. ರಾಜ್ಯದಲ್ಲಿರುವ ನಿರುದ್ಯೋಗಿಗಳಿಗೆ ಈ ನೇಮಕಾತಿ ಪ್ರಕ್ರಿಯೆಯು ಒಂದು ಸುವರ್ಣಾವಕಾಶವನ್ನು ಒದಗಿಸಲಿದೆ.

ವಿವಿಧ ಇಲಾಖೆಗಳ ಹುದ್ದೆಗಳ ವಿವರ

ಈ ಬಾರಿಯ ನೇಮಕಾತಿ ಅಧಿಸೂಚನೆಯಲ್ಲಿ ಕೇವಲ ಒಂದು ಇಲಾಖೆಗೆ ಮಾತ್ರವಿಲ್ಲ. ಬದಲಿಗೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಪ್ರಮುಖ ಹುದ್ದೆಗಳು ಒಳಗೊಂಡಿದೆ. ಪ್ರಮುಖವಾಗಿ ಕೆಎಸ್ಆರ್ ಪಿ ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಆಡಳಿತ ಅಧಿಕಾರಿ, ಕಂದಾಯ ಇಲಾಖೆಯ ಭೂಮಾಪಕರು ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುವ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರತ್ಯೇಕ ಅಧಿಸೂಚನೆಗಳನ್ನು ಬಿಡುಗಡೆ ಮಾಡಲಾಗಿದೆ.

KEA Recruitment 2026

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಅಧಿಸೂಚನೆ ಬಿಡುಗಡೆ

2026ರ ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಿದ್ದು, ಈ ಭಾಗದಲ್ಲಿ ಖಾಲಿಯಿರುವ ಹುದ್ದೆಗಳಿಗೂ ಪ್ರತ್ಯೇಕ ಅಧಿಸೂಚನೆಯನ್ನು ಹೊರಡಿಸಿದೆ. ಕಲ್ಯಾಣ ಕರ್ನಾಟಕ ವೃಂದಕ್ಕೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳ ಹುದ್ದೆಗಳಿಗೂ ಪ್ರತ್ಯೇಕ ಅಧಿಸೂಚನೆ ಲಭ್ಯವಿದ್ದು, ಆಯಾ ಭಾಗದ ಅರ್ಹ ಅಭ್ಯರ್ಥಿಗಳು ತಮ್ಮ ಮೀಸಲಾತಿಯ ಲಾಭ ಪಡೆಯಬಹುದು.

ಅರ್ಜಿ ಸಲ್ಲಿಕೆ ಹೇಗೆ ?

ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕೆಲವು ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಮತ್ತು ಎಚ್ಚರಿಕೆಯಿಂದ ಓದಿ, ತಮಗೆ ಅನ್ವಯವಾಗುವ ಹುದ್ದೆಗಳಿಗೆ ಅರ್ಜಿ ಹಾಕಬಹುದು.

ಈ ಬಾರಿ ವಿಶೇಷವೆಂದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆಯಲ್ಲೇ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕಗಳನ್ನು ಕೂಡ ಪ್ರಕಟಿಸಿದೆ. ಇದರಿಂದ ಅಭ್ಯರ್ಥಿಗಳಿಗೆ ಪರೀಕ್ಷೆಗೆ ತಯಾರಾಗಲು ಸಾಕಷ್ಟು ಅನುಕೂಲವಾಗಲಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕವನ್ನು ಖಚಿತಪಡಿಸಿಕೊಂಡು, ನಿಗದಿತ ದಿನದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಲು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್.ಪ್ರಸನ್ನ ಐಎಎಸ್‌ ಅವರು ಕೋರಿದ್ದಾರೆ.

ಹುದ್ದೆಗಳ ವಿವರ ಮತ್ತು ಅಧಿಕೃತ ಲಿಂಕ್‌ಗಳು

ಈ ಕೆಳಗೆ ವಿವಿಧ ಹುದ್ದೆಗಳಿಗೆ ಸಂಬಂದಿಸಿದ ಅಧಿಸೂಚನೆಗಳ ಪಿಡಿಎಫ್ ಲಿಂಕ್‌ಯಿದೆ. ಅಭ್ಯರ್ಥಿಗಳು ಈ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ ಅಥವಾ ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು:

1. ಕೆಎಸ್ಆರ್ ಪಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು

ಸಾಮಾನ್ಯ ವೃಂದದ ಲಿಂಕ್: https://cetonline.karnataka.gov.in/keawebentry456/kisrpc2026/ksrpnkkkannada.pdf

ಕಲ್ಯಾಣ ಕರ್ನಾಟಕ ವೃಂದದ ಲಿಂಕ್: https://cetonline.karnataka.gov.in/keawebentry456/kiskk2026/ksrpkkkannada.pdf

2. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು

ಸಾಮಾನ್ಯ ವೃಂದದ ಲಿಂಕ್: https://cetonline.karnataka.gov.in/keawebentry456/vaorpc2026/vao_rpc_notification_10072026kannada.pdf

ಕಲ್ಯಾಣ ಕರ್ನಾಟಕ ವೃಂದದ ಲಿಂಕ್: https://cetonline.karnataka.gov.in/keawebentry456/vaokk2026/vao_kk_notification_10072026kannada.pdf

3. ವಸತಿ ಶಾಲಾ ಶಿಕ್ಷಕರ ನೇಮಕಾತಿ

ಸಾಮಾನ್ಯ ವೃಂದದ ಲಿಂಕ್: https://cetonline.karnataka.gov.in/keawebentry456/kreisrpc2026/kries_rpc_notification_10072026kannada.pdf

ಕಲ್ಯಾಣ ಕರ್ನಾಟಕ ವೃಂದದ ಲಿಂಕ್: https://cetonline.karnataka.gov.in/keawebentry456/kreiskk2026/kries_kk_notification_10072026kannada.pdf


ಸರ್ಕಾರಿ ಕೆಲಸದ ಕನಸು ಕಾಣುತ್ತಿರುವ ಯುವಜನರು ಇದನ್ನಾ ಸದುಪಯೋಗಪಡಿಸಿಕೊಳ್ಳಲು ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+