KEA Ayush 2025: ಯುಜಿ, ಪಿಜಿ ಆಯುಷ್ ಕೊರ್ಸ್ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ
KEA Ayush Seat Allocation Updates: ಕರ್ನಾಟಕದಲ್ಲಿ ಸ್ನಾತಕೋತ್ತರ ಮತ್ತು ಪದವಿ ಆಯುಷ್ ಕೋರ್ಸ್‌ಗಳ (PGAyush UGAyush 2025) ಅಭ್ಯರ್ಥಿಗಳ ಸ್ಟ್ರೇ ವೆಕೆನ್ಸಿ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಇದರೊಂದಿಗೆ ಸ್ನಾತಕೋತ್ತರ ಆಯುಷ್ ಕೋರ್ಸ್ ಗಳ (PGAyush) ಪ್ರವೇಶ ಸಂಬಂಧ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಇದೇ ಡಿಸೆಂಬರ್ 4ರಿಂದ ಆರಂಭವಾಗಲಿದೆ. ಶುಲ್ಕ ಪಾವತಿ, ಕಾಲೇಜು ಪ್ರವೇಶ ಕುರಿತು ಮಹತ್ವ ಸೂಚನೆಗಳು, ದಿನಾಂಕದ ಮಾಹಿತಿ ಇಲ್ಲಿದೆ.
ಸ್ನಾತಕೋತ್ತರ ಆಯುಷ್ ಕೋರ್ಸ್ ಗಳ ಪ್ರವೇಶ ಸಂಬಂಧ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಗುರುವಾರ (ಡಿಸೆಂಬರ್ 4ರಂದು) ಹೊಸದಾಗಿ ಭಾಗವಹಿಸಲು ಇಚ್ಛಿಸುವವರು ಕೂಡ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಸೋಮವಾರ ತಿಳಿಸಿದ್ದಾರೆ.

ಈ ಸುತ್ತಿನಲ್ಲಿ ಅರ್ಹತೆ ಪಡೆದು, ಪ್ರಾಧಿಕಾರದಲ್ಲಿ ನೋಂದಣಿ ಮಾಡದೇ ಇರುವ ಅಭ್ಯರ್ಥಿಗಳು ಡಿಸೆಂಬರ್ 2ರಿಂದ 4ರವರೆಗೆ ನೋಂದಣಿ ಮಾಡಿಕೊಂಡು ಶುಲ್ಕ ಪಾವತಿಸಬೇಕು. 3ನೇ ಸುತ್ತಿಗೆ ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಡಿಸೆಂಬರ್ 4ರಿಂದ ಡಿಸೆಂಬರ್ 6ರ ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದರು.
ಇನ್ನೂ ಡಿಸೆಂಬರ್ 6ರಂದು ಸಂಜೆ 7ಗಂಟೆಗೆ ತಾತ್ಕಾಲಿಕ ಫಲಿತಾಂಶ ಹಾಗೂ ಡಿಸೆಂಬರ್ 8ರಂದು ಬೆಳಗ್ಗೆ 11ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಡಿಸೆಂಬರ್ 8ರಿಂದ 9ರವರೆಗೆ ಶುಲ್ಕ ಪಾವತಿಸಬಹುದು. ಡಿಸೆಂಬರ್ 10ರವರೆಗೂ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಅಂದೇ ಸಂಜೆಯೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕೆಂದು ಅವರು ಅಭ್ಯರ್ಥಿಗಳಿಗೆ ಸೂಚನೆ ನೀಡಿದರು.
UGAyush ಕೋರ್ಸ್‌ಗಳಿಗೆ ಸಂಬಂಧಿಸಿದತೆ ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿದೆ. ಅಭ್ಯರ್ಥಿಗಳ ಶುಲ್ಕ ಪಾವತಿಗೆ ಡಿಸೆಂಬರ್ 3ರವರಗೆ ಅವಕಾಶ ನೀಡಲಾಗಿದೆ. ಮೂಲ ದಾಖಲೆಗಳ ಸಮೇತ ಡಿಸೆಂಬರ್ 4ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು.
ಅಷ್ಟೇ ಅಲ್ಲದೇ PGAyush ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರು ಶುಲ್ಕ ಪಾವತಿಸಿ, ಕಾಲೇಜಿಗೆ ವರದಿ ಮಾಡಿಕೊಳ್ಳಲು ಡಿಸೆಂಬರ್ 3ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications