KEA- NEET UG 2024: ಫೈನಲ್ ಸುತ್ತಿನ ಸೀಟು ಹಂಚಿಕೆಯ ಪಟ್ಟಿ ಬಿಡುಗಡೆ
ಬೆಂಗಳೂರು, ನವೆಂಬರ್ 25: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ( KEA) ರಾಜ್ಯದ ವೈದ್ಯಕೀಯ ಕಾಲೇಜಿಗೆ ಪ್ರವೇಶಿಸಲು ಬಯಸಿದ್ದ ಯಾರೆಲ್ಲ ಅಭ್ಯರ್ಥಿಗಳು ಕೊನೆಯ ಸುತ್ತಿನಲ್ಲಿ (stray round) ಪಾಲ್ಗೊಂಡಿದ್ದವರ ತಾತ್ಕಾಲಿಕ ಸೀಟು ಹಂಚಿಕೆ ಪಟ್ಟಿ ಬಿಡುಗಡೆ ಮಾಡಿದೆ. ನೀವು ಆನ್‌ಲೈನ್ ನಲ್ಲಿ ಪ್ರಾಧಿಕಾರದ ಅಧಿಕೃತ ಜಾಲತಾಣದಲ್ಲಿ ಡೌಲ್‌ನೋಡ್ ಮಾಡಿಕೊಂಡು ನೋಡಬಹುದಾಗಿದೆ.
ಕರ್ನಾಟಕ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು 'ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ' NEET UG 2024 ಪರೀಕ್ಷೆ ಎದುರಿಸಿದ್ದರು. ಈ ಪ್ರಕ್ರಿಯೆ ಸೀಟು ಹಂಚಿಕೆವರೆಗೂ ಬಂದಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿ ನೀಟ್‌ಗೆ ಸಂಬಂಧಿಸಿದಂತೆ ಫೈನಲ್ ಸುತ್ತಿನಲ್ಲಿ ಒಂದಷ್ಟು ಜನರಿಗೆ ಅವಕಾಶ ನೀಡಿತ್ತು. ಈ ಸುತ್ತಿಗೆ ಸಂಬಂಧಿಸಿದಂತೆ ಖಾಲಿ ಉಳಿದಿದ್ದ ಸೀಟುಗಳ ಹಂಚಿಕೆ ಮಾಡಲಾಗಿದೆ.

ವೈದ್ಯಕೀಯ ಕಾಲೇಜಿಗೆ ಪ್ರವೇಶ ಕೋರಿ ಪರಿಕ್ಷೆ ಎದರಿಸಿ ಬಳಿಕ ಅಂತಿಮ ಸುತ್ತಿನಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು ಕೆಇಎ ಬಿಡುಗಡೆ ಮಾಡಿದ ತಾತ್ಕಾಲಿಕ ಪಟ್ಟಿಯನ್ನು KEA ಅಧಿಕೃತ ವೆಬ್‌ಸೈಟ್ kea.kar.nic.in ನಲ್ಲಿ ಪರಿಶೀಲಿಸಬಹುದು. ದಂತ ಮತ್ತು ವೈದ್ಯಕೀಯ ಕೋರ್ಸ್‌ಗಳಿಗೆ ಸಂಬಂಧಿಸಿದ ಸೀಟುಗಳು ಇವಾಗಿದೆ ಎಂದು ಪ್ರಕಟಣೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ಆಕ್ಷೇಪಣೆ ಪರಿಶೀಲಿಸಿ ಶೀಘ್ರವೇ ಅಂತಿಮ ಪಟ್ಟಿ ಪ್ರಕಟ
NEET UG ಅಂತಿಮವಾಗಿ ಸೀಟು ಹಂಚಿಕೆ ಪಟ್ಟಿಯಲ್ಲಿ ಹೆಸರು ಇರುವ ಅಭ್ಯರ್ಥಿಗಳು ತಮಗೆ ಸೂಚಿಸಿದ ವೈದ್ಯಕೀಯ ಕಾಲೇಜುಗಳಿಗೆ ಸೂಕ್ತ ಸಮಯಕ್ಕೆ ಭೇಟಿ ನೀಡಿ ಪ್ರವೇಶ ಪಡೆಯಬೇಕು. ಈ ತಾತ್ಕಾಲಿಕ ಪಟ್ಟಿಯಲ್ಲಿ ಆಕ್ಷೇಪಣೆಗಳು ಇದ್ದಲ್ಲಿ ಇದೇ ಸೋಮವಾರದ ಒಳಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇ-ಮೇಲ್ ವಿಳಾಸ [email protected] ಕ್ಕೆ ಕಳುಹಿಸುವಂತೆ ಕೋರಲಾಗಿತ್ತು.
ರಾಜ್ಯ ಪರೀಕ್ಷಾ ಪ್ರಾಧಿಕಾರವು ಸಲ್ಲಿಕೆಯಾಗುವ ಆಕ್ಷೇಪಣೆಗಳಲ್ಲಿ ಪರಿಶೀಲಿಸುತ್ತದೆ. ತಪ್ಪುಗಳಿದ್ದರೆ ಸರಿ ಮಾಡಿ ಮಂಗಳವಾರ ನವೆಂಬರ್ 26ರಂದು ಮಂಗಳವಾರ ಅಂತಿಮ ಸೀಟು ಹಂಚಿಕೆಯ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇದೇ ಅಂತಿ ಪಟ್ಟಿಯಾಗಿರುವ ಕಾರಣ, ನಂತರದ ಯಾವ ಕ್ರಮಗಳಿಗೂ ಪ್ರಾಧಿಕಾರ ಜವಾಬ್ದಾರಿ ಆಗಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ, ಹಾಗೂ ತಾತ್ಕಲಿಕ ಪಟ್ಟಿ ವೀಕ್ಷಿಸಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ಕಾಣುವ NEET PG 2024 ಸೀಟ್ ಅಲಾಟ್‌ಮೆಂಟ್ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಗತ್ಯ ಲಾಗಿನ ದಾಖಲೆಗಳನ್ನು ಹಾಕಿಕೊಂಡು ತಾತ್ಕಾಲಿಕ ಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರ ತಿಳಿಸಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications