UGCET 2026: ವೃತ್ತಿಪರ ಕೋರ್ಸ್‌ಗಳ ಪ್ರವೇಶದ ಅಪ್ಡೇಟ್: ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ: KEA
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ-ಯಜಿ 2026 (UGCET 2026) ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ನೆನ್ನೆ ತಡರಾತ್ರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಡುಗಡೆ ಮಾಡಿದೆ. ಅಧಿಕೃತ ವೆಬ್‌ಸೈಟ್ ಲಿಂಕ್ ಮೂಲಕ ಪರಿಶೀಲಿಸುವಂತೆ ಸೂಚಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜುಲೈ 9ರಂದು ಬೆಳಿಗ್ಗೆ 11 ಗಂಟೆವರೆಗೆ ದಾಖಲಿಸಿದ್ದ ಇಚ್ಛೆ/ಆಯ್ಕೆಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗಿದೆ. UGCET 2026ಗೆ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಕಾಲೇಜು ಪ್ರವೇಶ ಪಡೆಯಲು ಬಯಸುವವರು ಸದರಿ ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆ ಇದ್ದಲ್ಲಿ ಜುಲೈ 14ರಂದು ಸಂಜೆ 5ಗಂಟೆಯೊಳಗೆ ಆನ್ ಲೈನ್ (ಇಮೇಲ್[email protected]) ಮೂಲಕ ಆಧಾರ ಸಹಿತವಾಗಿ ಸಲ್ಲಿಸುವಂತೆ ಅವರು ತಿಳಿಸಿದ್ದಾರೆ.

ಆಯ್ಕೆಗಳನ್ನು ನಮೂದಿಸದ ಕಾರಣ ಸೀಟು ಹಂಚಿಕೆಯಾಗಿಲ್ಲ, ಅಂತಹ ಆಕ್ಷೇಪಣೆಗಳನ್ನು ಸಲ್ಲಿಸಬಾರದು. ಈ ಹಂತದಲ್ಲಿ ಆಯ್ಕೆಗಳ ಬದಲಾವಣೆಗೆ ಅವಕಾಶ ಇರುವುದಿಲ್ಲ. ನಿಮ್ಮ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಅಭ್ಯರ್ಥಿಗಳಿಗೆ ಕೆಇಎ ಮಹತ್ವ ಎಚ್ಚರಿಕೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವೆಬ್‌ಸೈಟ್‌ನಲ್ಲಿ ಸೀಟು ಹಂಚಿಕೆ ಕುರಿತು ಕಾಣಿಸಿಕೊಳ್ಳುವ ಸೂಚನೆಗಳು, ಅಧಿಸೂಚನೆಗಳು ಮತ್ತು ಪ್ರಕಟಣೆಗಳನ್ನು ಸರಿಯಾದ ರೀತಿಯಲ್ಲಿ ಅನುಸರಿಸದ ಕಾರಣ ಉಂಟಾಗುವ ಯಾವುದೇ ಕ್ರಮ/ಪರಿಣಾಮಗಳಿಗೆ KEA ಜವಾಬ್ದಾರವಾಗುವುದಿಲ್ಲ. ಅಭ್ಯರ್ಥಿಗಳು KEA ವೆಬ್‌ಸೈಟ್ (https://cetonline.karnataka.gov.in/kea/) ಆಗಿಂದಾಗ್ಗೆ ಭೇಟಿ ನೀಡುವ ಜೊತೆಗೆ ಅಪ್ಡೇಟ್ ಮಾಹಿತಿಗಳನ್ನು ಗಮನಿಸುತ್ತಿರಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಹುದ್ದೆಗಳ ಭರ್ಜರಿ ನೇಮಕಕ್ಕೆ ಕೆಇಎ ಅಧಿಸೂಚನೆ
ರಾಜ್ಯದಲ್ಲಿ ಕೆಇಎ ಬೃಹತ್ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಿದ್ಧತೆ ಆರಂಭಿದೆ ಎಂದು ಈ ಹಿಂದೆ ಹೇಳಲಾಗಿತ್ತು. ರಾಜ್ಯದ ಸರ್ಕಾರದ ವಿವಿಧ ಇಲಾಖೆಗಳ ಒಟ್ಟು 4,723 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಹತ್ವದ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಒಳಗೊಂಡಂತೆ ನೇಮಕಾತಿ ಅಧಿಸೂಚನೆಗಳನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುವ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿ, ಕರ್ನಾಟಕ ಸ್ಟೇಟ್ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (KSRP), ಗ್ರಾಮ ಆಡಳಿತ ಅಧಿಕಾರಿ, ಭೂಮಾಪಕರು ಸೇರಿದಂತೆ ಅನೇಕ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಪ್ರತ್ಯೇಕ ಅಧಿಸೂಚನೆ ಪ್ರಕಟಿಸಿದೆ.
ಕೆಲವು ಸರ್ಕಾರ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆಗೆ ಆನ್‌ಲೈಲ್ ಪೋರ್ಟಲ್ ತೆರೆಯಲಾಗಿದೆ. ಯಾರೆಲ್ಲ ಸರ್ಕಾರಿ ಹುದ್ದೆಗಳು ಬೇಕೆನ್ನು, ನೇಮಕಾತಿ ಪ್ರಕ್ರಿಯೆಗೆ ಕಾಯುತ್ತಾ ಕುಳಿತಿದ್ದ ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿಕೊಮಡು ನಿಮಗೆ ಸರಿಹೊಂದುವ ಹುದ್ದೆಗಳಿಗೆ ದಾಖಲೆ ಸಮೇತರಾಗಿ ಅರ್ಜಿ ಸಲ್ಲಿಸಬೇಕೆಂದು ಕೋರಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಅಧಿಸೂಚನೆಗಳಿಗೆ ಕೆಎಎ ವೆಬ್‌ಸೈಟ್ ಪರಿಶೀಲಿಸುವಂತೆ ಕೋರಲಾಗಿದೆ.













Click it and Unblock the Notifications