KEA: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಹಾಗೂ ಸೇವಾ ನಿರತ ವೈದ್ಯರಿಗೆ ಒಂದು ಪ್ರಮುಖ ಸುದ್ದಿ ಇಲ್ಲಿದೆ. 2026-27ನೇ ಸಾಲಿನ ಪಿಜಿ ನೀಟ್-2026 ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕೃತವಾಗಿ ಅಧಿಸೂಚನೆಯನ್ನ ಪ್ರಕಟಿಸಿದೆ.

ಸ್ನಾತಕೋತ್ತರ ವೈದ್ಯಕೀಯ ಪದವಿ ಕೋರ್ಸ್‌ಗಳು, ಡಿಪ್ಲೊಮಾ ಕೋರ್ಸ್‌ಗಳು ಹಾಗೂ ಕರ್ನಾಟಕದ ಸೇವಾ ನಿರತ ವೈದ್ಯರಿಗೆ ಡಿಎನ್‌ಬಿ ಮತ್ತು ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ನಿಗದಿತ ಅರ್ಹತೆಯನ್ನ ಪಡೆದ ಅಭ್ಯರ್ಥಿಗಳು ಡೆಡ್‌ಲೈನ್ ಮುಗಿಯುವ ಮುನ್ನವೇ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

KEA Starts PG NEET 2026 Registration For Medical Courses In Karnataka Apply Now Before October 15

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಕೆಇಎ ಅರ್ಜಿ ಆಹ್ವಾನ

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳು, ಖಾಸಗಿ ಹಾಗೂ ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಸರ್ಕಾರಿ ಮತ್ತು ಖಾಸಗಿ ಕೋಟಾದ ಸೀಟುಗಳ ಪ್ರವೇಶಕ್ಕಾಗಿ ಈ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಕೆಇಎ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿನ್ನೆಯಿಂದ ಅಂದ್ರೆ ಅಕ್ಟೋಬರ್ 5 ಬೆಳಿಗ್ಗೆ 11:00 ಗಂಟೆಯಿಂದಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭಿಸಬಹುದಾಗಿದೆ.

ಅರ್ಜಿಗಳನ್ನ ಸಲ್ಲಿಸಲು ಹಾಗೂ ನಿಗದಿತ ಶುಲ್ಕವನ್ನ ಪಾವತಿಸಲು ಅಕ್ಟೋಬರ್ 15ರ ಬೆಳಿಗ್ಗೆ 11:00 ಗಂಟೆಯವರೆಗೆ ಅಂತಿಮ ಅವಕಾಶವನ್ನ ನೀಡಲಾಗಿದೆ.

ವೈದ್ಯಕೀಯ ಕೋರ್ಸ್ ಪ್ರವೇಶ ಮತ್ತು ಅರ್ಹತಾ ಮಾನದಂಡಗಳು

ಪಿಜಿ ನೀಟ್-2026 ಪರೀಕ್ಷೆಯಲ್ಲಿ ನಿಗದಿಪಡಿಸಿರುವ ಕನಿಷ್ಠ ಪರ್ಸೆಂಟೈಲ್ ಅಂಕಗಳನ್ನ ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನ ಪಡೆದಿರುವ ಅಭ್ಯರ್ಥಿಗಳು ಮಾತ್ರ ಈ ವೈದ್ಯಕೀಯ ಕೋರ್ಸ್ ಪ್ರವೇಶ ಪ್ರಕ್ರಿಯೆಯಲ್ಲಿ ನೋಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ.

ಕರ್ನಾಟಕೇತರ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಮೀಸಲಾತಿ ಸೌಲಭ್ಯಗಳು ಅನ್ವಯವಾಗುವುದಿಲ್ಲ. ಆದ್ದರಿಂದ ಹೊರರಾಜ್ಯದ ವಿದ್ಯಾರ್ಥಿಗಳು ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿರುವ ಕನಿಷ್ಠ 50ನೇ ಪರ್ಸೆಂಟೈಲ್ ಅಂಕಗಳನ್ನು ಪಡೆದಿದ್ದರೆ ಮಾತ್ರ ಪ್ರವೇಶಕ್ಕಾಗಿ ನೋಂದಣಿ ಮಾಡಿಕೊಳ್ಳಬಹುದು.

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ (SC/ST/OBC) ಮೀಸಲಾತಿ ಮತ್ತು ಅದರ ಅರ್ಹತಾ ಮಾನದಂಡಗಳು ಕೇವಲ ಕರ್ನಾಟಕದ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತವೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

KEA ಕಚೇರಿಯಲ್ಲಿ ಕಡ್ಡಾಯ ದಾಖಲೆ ಪರಿಶೀಲನೆ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಶುಲ್ಕ ಪಾವತಿಸಿದ ನಂತರ, ಅಭ್ಯರ್ಥಿಗಳ ಪ್ರಕ್ರಿಯೆ ಅಲ್ಲಿಗೇ ಮುಗಿಯುವುದಿಲ್ಲ. ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಪಿಜಿ ನೀಟ್-2026 ರ ಅನೆಕ್ಸರ್ 18-19ರ ಅನ್ವಯ ಆನ್‌ಲೈನ್‌ನಲ್ಲಿ ಸ್ಲಾಟ್ ಬುಕ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ತಮಗೆ ನಿಗದಿಯಾದ ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಖುದ್ದಾಗಿ ಹಾಜರಾಗಿ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳಬೇಕು.

ಕೇವಲ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಮಾತ್ರಕ್ಕೆ ಅಥವಾ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ತಕ್ಷಣವೇ ಯಾರಿಗೂ ಪ್ರವೇಶದ ಹಕ್ಕು ಲಭಿಸುವುದಿಲ್ಲ. ಯಶಸ್ವಿಯಾಗಿ ದಾಖಲೆ ಪರಿಶೀಲನೆ ಪೂರ್ಣಗೊಳಿಸುವ ಅಭ್ಯರ್ಥಿಗಳು ಮಾತ್ರ ಮುಂದಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಅರ್ಹರಾಗುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಐಎಎಸ್ ಅವರು ಅಧಿಸೂಚನೆಯಲ್ಲಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.

ಆನ್‌ಲೈನ್ ಸೀಟು ಹಂಚಿಕೆ ವಿಧಾನ, ವಿವಿಧ ವರ್ಗದ ಸೀಟುಗಳ ಮಾಹಿತಿ ಹಾಗೂ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಹೆಚ್ಚಿನ ಮತ್ತು ನಿಖರ ಮಾಹಿತಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/KEA/pgetmed2026ಗೆ ಭೇಟಿ ನೀಡಿ ಎಂದು ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+