KEA: ವೈದ್ಯಕೀಯ ಕೋರ್ಸ್‌ಗಳು: 3ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟ..UGNEET 2025
ಬೆಂಗಳೂರು, ಸೆಪ್ಟಂಬರ್ 11: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಹಾಗೂ ಎಂಜಿನಿಯರಿಂಗ್ ಸೇರಿದಂತೆ ಇತರ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ಪದವಿಪೂರ್ವ- UGNEET 2025) ಕೋರ್ಸ್ ಗಳ 3ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ.
ಯಾರೆಲ್ಲ ಈ ಪ್ರವೇಶ ಪರೀಕ್ಷೆ ಬರೆದಿದ್ದೀರೋ ಅಂತಹ ಅಭ್ಯರ್ಥಿಗಳು ಪ್ರಕಟಗೊಂಡ ಈ ಫಲಿತಾಂಶಕ್ಕೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಇಂದು ಸೆಪ್ಟಂಬರ್ 11ರಂದು ಬೆಳಗ್ಗೆ 11ಗಂಟೆ ಒಳಗೆ ಇ-ಮೇಲ್ ([email protected]) ಮೂಲಕ ತಿಳಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.

ಅಂತಿಮ ಫಲಿತಾಂಶ ಪ್ರಕಟಣೆ ನಂತರ ಎಂಜಿನಿಯರಿಂಗ್ ಸೇರಿದಂತೆ ಇತರ ಯುಜಿಸಿಇಟಿ ಕೋರ್ಸ್ ಗಳ ಅಭ್ಯರ್ಥಿಗಳು ಸೆಪ್ಟಂಬರ್ 13ರೊಳಗೆ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸಂಬಂಧಪಟ್ಟ ಕಾಲೇಜುಗಳಿಗೆ ವರದಿ ಮಾಡಿಕೊಳ್ಳುವಂತೆ ಹೇಳಿದರು.
ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶದ ದಿನಾಂಕವನ್ನು ಎಂಸಿಸಿ ಮುಂದೂಡಿರುವ ಕಾರಣ ರಾಜ್ಯದಲ್ಲಿ ಕೂಡ ಈ ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳು ಮುಂದಿನ ಸೂಚನೆಗಾಗಿ ಕಾಯಬೇಕಾಗುತ್ತದೆ. ಎಂಜಿನಿಯರಿಂಗ್ ಸೇರಿದಂತೆ ಯುಜಿಸಿಇಟಿ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಹಿಂದಿನ ಸುತ್ತಿನಲ್ಲಿ ಶುಲ್ಕ ಅಥವಾ ಎಚ್ಚರಿಕೆ ಠೇವಣಿ (ಕಾಷನ್ ಡೆಪಾಸಿಟ್) ಪಾವತಿಸಿದ್ದರೆ ಅದನ್ನು ಈ ಸುತ್ತಿನಲ್ಲಿ ಹಂಚಿಕೆಯಾದ ಸೀಟಿನ ಶುಲ್ಕಕ್ಕೆ ಹೊಂದಾಣಿಕೆ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ಬಂದಿರುವ ಸೀಟುಗಳನ್ನೂ ಸೇರಿಸಿಕೊಂಡು ಮತ್ತೊಮ್ಮೆ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಎಂಸಿಸಿ ಯವರು 2ನೇ ಸುತ್ತಿನ ಫಲಿತಾಂಶ ಪ್ರಕಟಿಸಿದ ನಂತರ MCC ಯಲ್ಲಿ ಸೀಟು ಪಡೆದವರು ಅಲ್ಲಿ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಅವರಿಗೆ ಪ್ರಾಧಿಕಾರದಿಂದ ಉಚಿತವಾಗಿ ಹೊರಗೆ ಹೋಗಲು ಅವಕಾಶ ನೀಡಿ ಫಲಿತಾಂಶ ಪ್ರಕಟಿಸುತ್ತದೆ. MCC ಕೌನ್ಸೆಲಿಂಗ್ ನಲ್ಲಿ ಭಾಗವಹಿಸಲಿಚ್ಛಿಸುವ ಅಭ್ಯರ್ಥಿಗಳು ಪಾಲ್ಗೊಳ್ಳುವಂತೆ ಕೋರಿದೆ. ಫಲಿತಾಂಶ ಪ್ರಕಟಣೆ ನಂತರ ಸಹ ಅಭ್ಯರ್ಥಿಗಳು ಸೂಕ್ತ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಇತ್ತೀಚೆಗೆ KEA ಹೇಳಿತ್ತು.












Click it and Unblock the Notifications