KEA Recruitment: VA ಹುದ್ದೆ ಅರ್ಜಿ ಸಲ್ಲಿಕೆಗೆ ಗಡುವು ವಿಸ್ತರಣೆ; ಇಲ್ಲಿದೆ ಸಂಪೂರ್ಣ ವಿವರ
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ಗ್ರಾಮ ಆಡಳಿತ ಅಧಿಕಾರಿ (VA) ಹುದ್ದೆಗಳ ಆಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಹಿಸುದ್ದಿ ನೀಡಿದೆ. ಸಾರ್ವಜನಿಕರ ಮತ್ತು ಅಭ್ಯರ್ಥಿಗಳ ಮನವಿಯ ಮೇರೆಗೆ, ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 7ರವರೆಗೆ ವಿಸ್ತರಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಈ ಹಿಂದೆ ಹೊರಡಿಸಿದ ಅಧಿಸೂಚನೆಯಂತೆ ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನವಾಗಿತ್ತು. ಆದರೆ ಇದೀಗ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಹಾಗೂ ತಾಂತ್ರಿಕ ಕಾರಣಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಈ ಗಡುವನ್ನು ಮುಂದೂಡಲಾಗಿದೆ.

ಕೆಇಎ ವಿಎ ಅರ್ಜಿ ಕೊನೆಯ ದಿನಾಂಕ ಮತ್ತು ಪ್ರಮುಖ ಬದಲಾವಣೆಗಳು
ಎಲ್ಲರಿಗೂ ತಿಳಿದಿರುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2026ರ ಜುಲೈ 10ರಂದು ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿಗಾಗಿ ಪ್ರತ್ಯೇಕ ಅಧಿಸೂಚನೆಯನ್ನ ಹೊರಡಿಸಿತ್ತು. ಮೊದಲು ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ ಹಾಗೂ ಶುಲ್ಕ ಪಾವತಿಸಲು ಜುಲೈ 31 ಕೊನೆಯ ದಿನ ಎಂದು ನಿಗದಿಪಡಿಸಲಾಗಿತ್ತು.
ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಹೊಸ ದಿನಾಂಕಗಳ ವಿವರ ಈ ಕೆಳಗಿನಂತಿದೆ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-08-2026
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10-08-2026
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು: ಅರ್ಜಿ ಸಲ್ಲಿಸುವ ವಿಧಾನ
1. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ (cetonline.karnataka.gov.in/kea/) ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ.
2. ಮೊದಲು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
3. ಮುಖಪುಟದಲ್ಲಿ ಕಾಣುವ "ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ-2026 ಆನ್‌ಲೈನ್ ಅರ್ಜಿ ಲಿಂಕ್" ಮೇಲೆ ಕ್ಲಿಕ್ ಮಾಡಿ.
4. ನಿಮ್ಮ ಅಗತ್ಯ ಶೈಕ್ಷಣಿಕ ದಾಖಲೆಗಳು, ವೈಯಕ್ತಿಕ ವಿವರಗಳು ಮತ್ತು ಮೀಸಲಾತಿ ಪ್ರಮಾಣಪತ್ರಗಳ ಮಾಹಿತಿಯನ್ನು ಹಾಕಿ.
5. ನಿಗದಿತ ಅರ್ಜಿ ಶುಲ್ಕವನ್ನ ಆನ್‌ಲೈನ್ ಮೂಲಕ (ಆಗಸ್ಟ್ 10 ರೊಳಗೆ) ಪಾವತಿಸಿ, ಅರ್ಜಿಯನ್ನ ಸಲ್ಲಿಸಿ.
#KEARecruitment: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಆಗಸ್ಟ್ 7ರವರೆಗೆ #KEA ವಿಸ್ತರಿಸಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) July 29, 2026
ಶುಲ್ಕ ಪಾವತಿಸಲು ಆಗಸ್ಟ್ 10 ಕೊನೆ ದಿನ.
ಸಾರ್ವಜನಿಕರ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ.
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ… pic.twitter.com/I4rHOGJt7p
ಅಭ್ಯರ್ಥಿಗಳಿಗೆ ಕೆಇಎ ಪ್ರಮುಖ ಸೂಚನೆ
ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕಗಳನ್ನು ಹೊರತುಪಡಿಸಿ, ದಿನಾಂಕ 10-07-2026 ರ ಮೂಲ ಅಧಿಸೂಚನೆಯಲ್ಲಿ ತಿಳಿಸಲಾದ ವಯೋಮಿತಿ, ಶೈಕ್ಷಣಿಕ ಅರ್ಹತೆ, ಮೀಸಲಾತಿ ನಿಯಮಗಳು ಹಾಗೂ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಬದಲಾವಣೆಗಳಿರುವುದಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ. ಲಾಸ್ಟ್ ಮಿನಿಟ್ ಸರ್ವರ್ ಸಮಸ್ಯೆಯನ್ನ ತಪ್ಪಿಸಲು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಆದಷ್ಟು ಬೇಗನೇ ಅರ್ಜಿ ಸಲ್ಲಿಸುವುದು ಸೂಕ್ತ.


Click it and Unblock the Notifications
