ರಾಹುಲ್ ದೂರವಿಟ್ಟು ವಿಧಾನಸಭೆ ಚುನಾವಣೆ, ಇದು ಕರ್ನಾಟಕ ಕಾಂಗ್ರೆಸ್ ತಂತ್ರ

ದಿನಕ್ಕೊಂದು ಸೇಬು ತಿನ್ನಿ, ವೈದ್ಯರಿಂದ ದೂರವಿರಿ ಅನ್ನೋದು ಜನಜನಿತವಾದ ಮಾತು. ರಾಹುಲ್ ರನ್ನು ದೂರವಿಡಿ, ಚುನಾವಣೆ ಗೆಲ್ಲಿ ಎಂಬುದು ಕಾಂಗ್ರೆಸ್ ಗೆ ಜನರಾಡುತ್ತಿರುವ ಮಾತು.

ಬೆಂಗಳೂರು, ಮೇ 3: ಕರ್ನಾಟಕದ ವಿಚಾರದಲ್ಲಿ ಹೆಚ್ಚು ತಲೆ ಇಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಮುಂದಿನ ವಿಧಾನಸಭೆ ಚುನಾವಣೆಯನ್ನು ಸ್ಥಳೀಯ ನಾಯಕರೇ ಸಂಭಾಳಿಸಲಿ ಎಂಬ ತೀರ್ಮಾನಕ್ಕೆ ಮಂಗಳವಾರ ನಡೆದ ಸಭೆಯಲ್ಲಿ ಬರಲಾಗಿದೆ. ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಜತೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಈ ಸಭೆಯಲ್ಲಿದ್ದರು.

ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ವಿಧಾನಸಭೆ ಚುನಾವಣೆ ಎದುರಿಸುವುದಕ್ಕೆ ತೀರ್ಮಾನಿಸಲಾಯಿತು. ರಾಜ್ಯದ ಉಸ್ತುವಾರಿ ವಹಿಸಿರುವ ತಂಡಕ್ಕೆ ನಿರ್ಧಾರ ಕೈಗೊಳ್ಳುವುದಕ್ಕೆ ಪೂರ್ತಿ ಸ್ವಾತಂತ್ರ್ಯ ಇದೆ ಎಂದು ರಾಹುಲ್ ಹೇಳಿದ್ದಾರೆ. ದೆಹಲಿಯ ಹೈಕಮಾಂಡ್ ಮೂಗು ತೂರಿಸುವುದಿಲ್ಲ ಎಂದು ಕೂಡ ತಿಳಿಸಿದ್ದಾರೆ.[ರಾಹುಲ್ ಗಾಂಧಿಯನ್ನು ಉಳಿಸಿಕೊಳ್ಳಲು ದಿಗ್ವಿಜಯ್ ಬಲಿ, ಇದು ಕಾಂಗ್ರೆಸ್ ನಾಯಕತ್ವ!]

Rahul Gandhi

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ವಿಚಾರದಲ್ಲಿ ಕೂಡ ಸ್ವತಂತ್ರವಾಗಿ ತೀರ್ಮಾನ ಕೈಗೊಳ್ಳಬಹುದಾಗಿದೆ. ಮೈತ್ರಿ ಮಾಡಿಕೊಳ್ಳುವುದರಿಂದ ಬಿಜೆಪಿ ಮತಗಳನ್ನು ಒಡೆಯಬಹುದು ಎಂದು ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಮತ್ತು ಇದೇ ವೇಳೆ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯ ಉದಾಹರಣೆಯನ್ನು ನೀಡಿ, ಜೆಡಿಎಸ್ ಜತೆಗಿನ ದೋಸ್ತಿ ಹೇಗೆ ಸಹಾಯ ಮಾಡುತ್ತದೆ ಎಂದು ವಿವರಿಸಲಾಗಿದೆ.

Siddaramaiah

ತಂಡವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸ್ವತಂತ್ರವಾಗಿದೆ ಎಂದು ರಾಹುಲ್ ಹೇಳಿದ್ದಾರೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಅಭ್ಯರ್ಥಿ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+