ಕರ್ನಾಟಕದಲ್ಲಿ ಮಾ.15,16ರಂದು ಕೇಜ್ರಿ ರೋಡ್ ಶೋ

ಬೆಂಗಳೂರು, ಮಾ.3 : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಪ್ರಚಾರ ನಡೆಸಲು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಾ.15, 16ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಎರಡು ದಿನಗಳ ಭೇಟಿಯ ಸಮಯದಲ್ಲಿ ಅವರು ರೋಡ್ ಶೋ ನಡೆಸಲಿದ್ದು, ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಭಾನುವಾರ ಅರವಿಂದ್ ಕೇಜ್ರಿವಾಲ್ ಕರ್ನಾಟಕ ಭೇಟಿಯ ಕುರಿತು ಮಾಹಿತಿ ನೀಡಿದ, ಪಕ್ಷದ ವಕ್ತಾರ ಮಹಾಂತೇಶ್ ಅರಳಿ, ಮಾರ್ಚ್ 15 ಮತ್ತು 16ರಂದು ಕೇಜ್ರಿವಾಲ್ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ತಮ್ಮ ಭೇಟಿಯ ವೇಳೆ ರೋಡ್ ಶೋ ನಡೆಸಲಿರುವ ಅವರು, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಹಾಂತೇಶ್ ಹೇಳಿದರು. [ಕೇಜ್ರಿ ಹಿಟ್ ಲೀಸ್ಟ್ ನಲ್ಲಿ ರಾಜ್ಯದ ನಾಲ್ವರು]

Arvind Kejriwal

ಅರವಿಂದ್ ಕೇಜ್ರಿವಾಲ್ ರಾಜ್ಯ ಭೇಟಿಗೂ ಮೊದಲು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದೇವೆ. ಎರಡನೇ ಪಟ್ಟಿಯನ್ನು ಸ್ವತಃ ಕೇಜ್ರಿವಾಲ್ ಬಿಡುಗಡೆ ಮಾಡಲಿದ್ದಾರೆ ಎಂದು ಮಹಾಂತೇಶ್ ತಿಳಿಸಿದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ಎಸ್ ದೊರೆಸ್ವಾಮಿ ಮತ್ತು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್ಆರ್ ಹಿರೇಮಠ ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮಾರ್ಚ್ 15ರಂದು ಅರವಿಂದ್ ಕೇಜ್ರಿವಾಲ್ ಬೆಂಗಳೂರಿನಗೆ ಆಗಮಿಸಲಿದ್ದು, ನಂತರ ಆಯ್ದ ಸ್ಥಳಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ. ಚಿಕ್ಕಬಳ್ಳಾಪುರ ಅಥವ ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಜೊತೆಗೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಪಕ್ಷ ಈಗಾಗಲೇ 28 ಕ್ಷೇತ್ರಗಳ ಅಭ್ಯರ್ಥಿಗಳನ್ನು ಗುರುತಿಸಿದ್ದು, ಅವರು ಕ್ಷೇತ್ರದಲ್ಲಿ ಮನೆ-ಮನೆ ಪ್ರಚಾರ ಕೈಗೊಂಡಿದ್ದಾರೆ. [ಬಿಎಸ್‌ವೈಗೆ ಆಮ್ ಆದ್ಮಿ ಅಭ್ಯರ್ಥಿ ಪೈಪೋಟಿ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+