ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಂಪಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು : ಚುನಾವಣಾ ಆಯೋಗ

|
Google Oneindia Kannada News

ಬೆಂಗಳೂರು, ಏಪ್ರಿಲ್ 06 : ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರು 2014ರಿಂದ ಕರ್ನಾಟಕ ಗೃಹ ಸಚಿವರ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಶುಕ್ರವಾರ ಚುನಾವಣಾ ಆಯೋಗ ಈ ಕುರಿತು ಆದೇಶ ಹೊರಡಿಸಿದೆ. ಕೆಂಪಯ್ಯ ಅವರ ಹುದ್ದೆ ಅಸಂವಿಧಾನಿಕ ತಕ್ಷಣ ಅವರು ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಯೋಗ ಆದೇಶದಲ್ಲಿ ಸೂಚನೆ ನೀಡಿದೆ. ಈ ಆದೇಶದಿಂದ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ಗೆ ಗೆಲುವು ಸಿಕ್ಕಂತಾಗಿದೆ.

ಕೆಂಪಯ್ಯರನ್ನು ವಿವಾದಗಳು ಸದಾ ಕಾಡುವುದೇಕೆ?ಕೆಂಪಯ್ಯರನ್ನು ವಿವಾದಗಳು ಸದಾ ಕಾಡುವುದೇಕೆ?

ಬಿಜೆಪಿ ಮತ್ತು ಜೆಡಿಎಸ್ ಕೆಂಪಯ್ಯ ಅವರು ಗೃಹ ಸಚಿವರ ಸಲಹೆಗಾರರಾಗಿ ಮುಂದುವರೆಯಬಾರದು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು. ಕೆಂಪಯ್ಯ ಹುದ್ದೆಯಲ್ಲಿ ಮುಂದುವರೆದರೆ ರಾಜ್ಯದಲ್ಲಿ ಪೊಲೀಸ್ ಇಲಾಖೆ ರಾಜಕೀಯ ಹಸ್ತಕ್ಷೇಪವಿಲ್ಲದೆ ಕೆಲಸ ಮಾಡುವುದು ಸಾಧ್ಯವಿಲ್ಲ ಎಂದು ಹೇಳಿದ್ದವು.

Kempaiah should resign for his post says election commission

ಕಳೆದ ವಾರ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, 'ರಾಜಕೀಯ ಮತ್ತು ಇತರ ಸಲಹೆಗಾರರು ತಮ್ಮ ಹುದ್ದೆಯಲ್ಲಿ ಮುಂದುವರೆಯುವಂತಿಲ್ಲ' ಎಂದು ಹೇಳಿದ್ದರು.

ನಕಲಿ ಜಾತಿ ಪ್ರಮಾಣ ಪತ್ರ ಆರೋಪ, ಕೆಂಪಯ್ಯಗೆ ಕ್ಲೀನ್ ಚಿಟ್ನಕಲಿ ಜಾತಿ ಪ್ರಮಾಣ ಪತ್ರ ಆರೋಪ, ಕೆಂಪಯ್ಯಗೆ ಕ್ಲೀನ್ ಚಿಟ್

1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರು 2009ರಲ್ಲಿ ಸ್ವಯಂ ನಿವೃತ್ತಿ ಪಡೆದಿದ್ದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೇಲೆ 2014ರಲ್ಲಿ ಅವರನ್ನು ಗೃಹ ಸಚಿವರ ಸಲಹೆಗಾರರಾಗಿ ನೇಮಿಸಲಾಗಿತ್ತು. ಕೆಂಪಯ್ಯ ಅವರನ್ನು ನೇಮಕ ಮಾಡಿದ ಕುರಿತು ಭಾರೀ ಚರ್ಚೆ ನಡೆದಿತ್ತು.

English summary
Karnataka Home minister adviser Kempaiah should quite his post said Election Commission. In a order Commission said that Kempaiah post is unconstitutional.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X