India
  • search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಮಾನ ನಿಲ್ದಾಣದಲ್ಲಿ ಶೀಘ್ರವೇ ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ: ಸಿಎಂ

|
Google Oneindia Kannada News

ಬೆಂಗಳೂರು, ಜೂನ್ 24: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದಲ್ಲಿರುವ ಕೆಂಪೇಗೌಡರ ಬೃಹತ್ ಮೂರ್ತಿ ಅಂತಿಮ ಘಟ್ಟಕ್ಕೆ ಬಂದಿದೆ. ಶೀಘ್ರದಲ್ಲಿಯೇ ಕಂಚಿನ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವದೆಹಲಿಯಿಂದ ಇಂದು ಹಿಂದಿರುಗಿದ ಸಂದರ್ಭದಲ್ಲಿ ಬೆಂಗಳೂರು ವಿಮಾನನಿಲ್ದಾಣದಲ್ಲಿರುವ ಕೆಂಪೇಗೌಡರ ಬೃಹತ್ ಮೂರ್ತಿಯ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಸ್ಟೀಲ್ ಮತ್ತು ಕಂಚಿನಿಂದ ಮಾಡಲಾಗಿರುವ ಸುಮಾರು 108 ಅಡಿ ಎತ್ತರದ ಪ್ರತಿಮೆ 220 ಟನ್ ತೂಕವಿದೆ. ಇಷ್ಟು ದೊಡ್ಡ ಕೆಂಪೇಗೌಡರ ಮೂರ್ತಿ ಇನ್ನೆಲ್ಲಿಯೂ ಇಲ್ಲ. ಅಂತಹ ವಿಶಿಷ್ಟ ಮೂರ್ತಿ ಇಲ್ಲಿ ಸ್ಥಾಪನೆಯಾಗಲಿದೆ. ಇದರ ಜೊತೆಗೆ ಸುತ್ತಲಿನ ಪ್ರದೇಶದ ಸೌಂದರ್ಯೀಕರಣವನ್ನೂ ಮಾಡಲಾಗುತ್ತಿದೆ. ಆದಷ್ಟೂ ಶೀಘ್ರದಲ್ಲಿ ಇದರ ಅನಾವರಣ ಮಾಡಬೇಕೆನ್ನುವುದು ನಮ್ಮೆಲ್ಲರ ಆಶಯ ಎಂದರು.

ಬೆಂಗಳೂರು ವಿಮಾನ ನಿಲ್ದಾಣ ಟರ್ಮಿನಲ್ -2 ಉದ್ಘಾಟನಾ ಸಮಾರಂಭದ ಸಂದರ್ಭ ಇದರ ಅನಾವರಣ ಮಾಡಬೇಕೆಂಬ ಉದ್ದೇಶವಿದೆ. ಕೆಂಪೇಗೌಡರ ನಾಡಿದು. ಅವರ ಹೆಸರನ್ನೇ ವಿಮಾನನಿಲ್ದಾಣಕ್ಕೆ ಇಡಲಾಗಿದೆ. ಅವರ ನಾಡಿನಲ್ಲಿ ಅವರ ಬೃಹತ್ ಮೂರ್ತಿ ಬಹಳ ಸೂಕ್ತವಾಗಿದೆ. ಪ್ರತಿಮೆ ಇಡೀ ನಾಡಿನ ಅಭಿವೃದ್ಧಿಯ ಸಂಕೇತವೂ ಹೌದು. ಬೆಂಗಳೂರನ್ನು ಕಟ್ಟಿದ ನಾಡಪ್ರಭುಗಳ ದೂರದೃಷ್ಟಿಯ ಬೆಂಗಳೂರು ಆಧುನಿಕವಾಗಿ ಬೆಳೆಯುತ್ತಿರುವ ಸಂದರ್ಭದಲ್ಲಿ ಅವರನ್ನು, ಅವರು ಮಾಡಿರುವ ಕೆಲಸಗಳನ್ನು, ಸ್ಮರಿಸುತ್ತಾ ಅವರ ಯೋಜನಾಶೈಲಿಯನ್ನು ಮಾರ್ಗದರ್ಶನವಾಗಿ ಇಟ್ಟುಕೊಂಡು ಈಗ ಮಾಡುತ್ತಿರುವ ಎಲ್ಲಾ ಕೆಲಸಕಾರ್ಯಕ್ಕೆ ಈ ಪ್ರತಿಮೆ ಸರ್ಕಾರದ ಎಲ್ಲ ಕಾರ್ಯಕ್ರಮಗಳಿಗೆ ಕೆಂಪೇಗೌಡರ ಮೂರ್ತಿ ಪ್ರೇರಣೆ ಮತ್ತು ಸ್ಪೂರ್ತಿಯನ್ನು ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Kempegowda Bronze statue will be unveiled soon at KIA: CM Bommai

ಕೆಂಪೇಗೌಡರ ಪ್ರತಿಮೆಯ ಪಾದದವರೆಗೂ ಲಿಫ್ಟಿನಲ್ಲಿ ತಲುಪಿದ ಮುಖ್ಯಮಂತ್ರಿಗಳು, ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು. ಜೊತೆಗೆ, ಪ್ರತಿಮೆ ಸುಂದರವಾಗಿ ಮೂಡಿಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ದೆಹಲಿ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಹಿರಿಯ ನಾಯಕರ ಜೊತೆ ರಾಷ್ಟ್ರಪತಿ ಸ್ಥಾನದ ಅಭ್ಯರ್ಥಿಯ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಲಾಯಿತು ಎಂದರು.

English summary
The Bronze statue of Nadaprabhu Kempegowda will be unveiled soon at the Kempegowda International Airport(KIA), Chief Minister Basavaraj Bommai said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X