ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಕೆಂಪೇಗೌಡ ಪ್ರತಿಮೆ ಅನಾವರಣ, ದೇವೇಗೌಡರ ಮೊದಲ ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ನವೆಂಬರ್ 14; ಭಾರತದ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರನ್ನು ಆಹ್ವಾನಿಸಿಲ್ಲ ಎಂಬುದು ಚರ್ಚೆಗೆ ಕಾರಣವಾಗಿದೆ.

ಈ ಕುರಿತು ಸೋಮವಾರ ಹಾಸನದಲ್ಲಿ ರಾಜ್ಯಸಭಾ ಸದಸ್ಯರು ಆಗಿರುವ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದರು. "ನಾನು ಈ ವಿಚಾರದಲ್ಲಿ ಏನೂ ಮಾತನಾಡಲ್ಲ" ಎಂದು ಸ್ಪಷ್ಟಪಡಿಸಿದರು.

Breaking; ಕೆಂಪೇಗೌಡರ ಪ್ರತಿಮೆ ನೋಡಲು ಹೋದವರಿಗೆ ನಿರಾಸೆ Breaking; ಕೆಂಪೇಗೌಡರ ಪ್ರತಿಮೆ ನೋಡಲು ಹೋದವರಿಗೆ ನಿರಾಸೆ

ಕಡೆಯ ಕಾರ್ತಿಕ ಸೋಮವಾರ ಹುಟ್ಟೂರು ಹರದನಹಳ್ಳಿಯ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ದೇವೇಗೌಡರು, "ಯಾರು ಯಾರು ಏನು ಮಾಡಿದರು ಎಂದು ವಿಶ್ಲೇಷಣೆ ಮಾಡುವುದಿಲ್ಲ" ಎಂದರು.

ಪ್ರತಿಮೆ ಅನಾವರಣದಿಂದ ಮತ ಸಿಗಲ್ಲ: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿ ಪ್ರತಿಮೆ ಅನಾವರಣದಿಂದ ಮತ ಸಿಗಲ್ಲ: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿ

Kempegowda Statue Inauguration Event Devegowda Reaction

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರಿಗೆ ಆಹ್ವಾನ ನೀಡಿಲ್ಲ ಎಂಬುದು ಚರ್ಚೆಗೆ ಕಾರಣವಾಗಿತ್ತು. ಜೆಡಿಎಸ್ ಟ್ವೀಟ್ ಮೂಲಕ ಈ ಕುರಿತು ಆಕ್ಷೇಪ ವ್ಯಕ್ತಪಡಿಸಿತ್ತು.

ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ; ದೇವೇಗೌಡರಿಗೇಕೆ ಆಹ್ವಾನ ನೀಡಿಲ್ಲ: ಜೆಡಿಎಸ್ ಕಿಡಿಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ; ದೇವೇಗೌಡರಿಗೇಕೆ ಆಹ್ವಾನ ನೀಡಿಲ್ಲ: ಜೆಡಿಎಸ್ ಕಿಡಿ

ಜೆಡಿಎಸ್ ಪಕ್ಷ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿತ್ತು. 'ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಶ್ರೀ ದೇವೇಗೌಡ ಅವರನ್ನು ಶ್ರೀ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಕರ್ನಾಟಕ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ' ಎಂದು ಹೇಳಿತ್ತು.

ಸ್ಪಷ್ಟನೆ ನೀಡಿದ್ದ ಸಚಿವರು; ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದ ವಿಚಾರದ ಕುರಿತು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ್ ಸ್ಪಷ್ಟನೆ ನೀಡಿದ್ದರು.

"ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರಿಗೆ ಸ್ವತಃ ಮುಖ್ಯಮಂತ್ರಿಗಳೇ ಕರೆ ಮಾಡಿ ಮತ್ತು ಪತ್ರ ಬರೆದು ಆಹ್ವಾನಿಸಿದ್ದರು" ಎಂದು ಹೇಳಿದ್ದರು.

"ಈ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಯನ್ನೇ ಮುದ್ರಿಸಿರಲಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿಗಳಿಗೆ, ಮಾಜಿ ಮುಖ್ಯಮಂತ್ರಿಗಳಿಗೆ ಆಮಂತ್ರಣ ನೀಡಿದ್ದಾರೆ" ಎಂದು ತಿಳಿಸಿದ್ದರು.

English summary
108 feet Kempegowda statue inauguration event at Bengaluru. Former PM Devegowda not invited for event. Devegowda first reaction on issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X