ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪದ್ಮನಾಭ ಭಟ್, ಕಂಚ್ಯಾಣಿ ಶರಣಪ್ಪಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ

|
Google Oneindia Kannada News

ಬೆಂಗಳೂರು, ಜೂನ್ 22: ಪತ್ರಕರ್ತ, ಕಥೆಗಾರ ಪದ್ಮನಾಭ ಭಟ್ ಶೇವ್ಕಾರ್ ಮತ್ತು ನಿವೃತ್ತ ಶಿಕ್ಷಕ ಕಂಚ್ಯಾಣಿ ಶರಣಪ್ಪ ಶಿವಸಂಗಪ್ಪ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ 2018ನೇ ಸಾಲಿನ ಯುವ ಪುರಸ್ಕಾರ ಮತ್ತು ಬಾಲ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ದೊರೆತಿವೆ.

ಕಥೆಗಾರ ವಸುಧೇಂದ್ರ ಅವರು ಸ್ಥಾಪಿಸಿರುವ 'ಛಂದ ಪ್ರಶಸ್ತಿ'ಗೆ 2014ರಲ್ಲಿ ಆಯ್ಕೆಯಾಗುವ ಮೂಲಕ ಪ್ರಕಟಗೊಂಡಿದ್ದ 'ಕೇಪಿನ ಡಬ್ಬಿ' ಕಥಾಸಂಕಲನಕ್ಕೆ ಪದ್ಮನಾಭ ಭಟ್ ಶೇವ್ಕಾರ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ ಧ್ಯೇಯ ಮತ್ತು ಉದ್ದೇಶಕರ್ನಾಟಕ ಸಾಹಿತ್ಯ ಅಕಾಡೆಮಿ ಧ್ಯೇಯ ಮತ್ತು ಉದ್ದೇಶ

ಈ ಪುಸ್ತಕವು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಧುರ ಚೆನ್ನ ದತ್ತಿನಿಧಿ ಪ್ರಶಸ್ತಿ, ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ 2014ರ 'ಶಾ ಬಾಲೂ ರಾವ್ ಯುವ ಬರಹಗಾರ ಪ್ರಶಸ್ತಿ' ಸೇರಿದಂತೆ ವಿವಿಧ ಗೌರವಗಳನ್ನು ಪಡೆದುಕೊಂಡಿದೆ.

Kendra sahitya academy awards announced

ಭಾರತದ ವಿವಿಧ ಭಾಷೆಗಳ 23 ಯುವ ಲೇಖಕರ ಕೃತಿಗಳನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 50 ಸಾವಿರ ನಗದು ಮತ್ತು ತಾಮ್ರದ ಫಲಕವನ್ನು ಒಳಗೊಂಡಿದೆ. ಶೀಘ್ರದಲ್ಲಿಯೇ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸುವುದಾಗಿ ಅಕಾಡೆಮಿ ತಿಳಿಸಿದೆ.

ವಿಜಯಪುರದ ಕಂಚ್ಯಾಣಿ ಶರಣಪ್ಪ ಶಿವಸಂಗಪ್ಪ ಅವರು ಮಕ್ಕಳ ಸಾಹಿತ್ಯಕ್ಕೆ ನೀಡಿದ ಒಟ್ಟಾರೆ ಕೊಡುಗೆಯನ್ನು ಪರಿಗಣಿಸಿ ಬಾಲ ಸಾಹಿತ್ಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ನವೆಂಬರ್ 14ರ ಮಕ್ಕಳ ದಿನಾಚರಣೆಯಂದು ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶರಣಪ್ಪ ಅವರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದವರು. ಅವರು ನಾಲ್ಕು ದಶಕಗಳಿಂದ ಮಕ್ಕಳ ಸಾಹಿತ್ಯ ರಚನೆಯಲ್ಲಿ ತೊಡಗಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಕೂಡ ದೊರೆತಿತ್ತು.

English summary
Story writer, journalist Padmanabha Bhat Shevkar and retired teacher Kanchyani Sharanappa Shivasangappa have won Kendra Sahitya Academy's Yuva Puraskara and Bala Sahitya Puraskara respectively.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X