ಬಂಡೀಪುರ ಅರಣ್ಯದಲ್ಲಿ ಫ್ಲೈ ಓವರ್ : 50ರಷ್ಟು ವೆಚ್ಚ ಕೊಡಲು ಸಿದ್ಧ ಎಂದ ಕೇರಳ

ಬೆಂಗಳೂರು, ಡಿಸೆಂಬರ್ 02 : ಬಂಡೀಪುರ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 212ರಲ್ಲಿ ಫ್ಲೈ ಓವರ್ ನಿರ್ಮಾಣ ಮಾಡುವ ಪ್ರಸ್ತಾವನೆ ಇದ್ದು, ಇದರ ನಿರ್ಮಾಣ ವೆಚ್ಚದಲ್ಲಿ ಶೇ 50ರಷ್ಟು ಮೊತ್ತವನ್ನು ನೀಡುವುದಾಗಿ ಕೇರಳ ಸರ್ಕಾರ ಹೇಳಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. ಈಗಾಗಲೇ ಈ ಮಾರ್ಗದಲ್ಲಿ ಫ್ಲೈ ಒವರ್ ನಿರ್ಮಾಣ ಮಾಡಲು ಭಾರೀ ವಿರೋಧ ವ್ಯಕ್ತವಾಗಿದೆ.

ಬಂಡೀಪುರ-ವಯನಾಡು ಮಾರ್ಗದಲ್ಲಿ 1 ಕಿ.ಮೀ. ಉದ್ದ 5 ಫ್ಲೈ ಓವರ್ ನಿರ್ಮಾಣ ಮಾಡುವ ಪ್ರಸ್ತಾವನೆ ಇದೆ. ಈ ಯೋಜನೆಗೆ ಶೇ 50ರಷ್ಟು ವೆಚ್ಚವನ್ನು ಭರಿಸಲು ಸಿದ್ಧರಿದ್ದೇವೆ ಎಂದು ಕೇರಳ ಹೇಳಿದೆ.

Kerala ready to offer 50 percent cost for Bandipur Wayanad highway

ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸುವ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರವನ್ನು ವನ್ಯಜೀವಿಗಳ ಹಿತದೃಷ್ಟಿಯಿಂದ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಿಸಿ ರಾತ್ರಿ ಸಂಚಾರಕ್ಕೂ ಅವಕಾಶ ನೀಡುವ ಪ್ರಸ್ತಾವನೆ ಇದೆ.

ಬಂಡೀಪುರ ಕಾಡಿನಲ್ಲಿ ಹಾದು ಹೋಗುವ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಾಣ ಮಾಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ಆರಂಭವಾದರೆ ಕೇರಳ ರಾಜ್ಯಕ್ಕೆ ಹೆಚ್ಚು ಲಾಭವಾಗಲಿದೆ.

ಈ ಹಿನ್ನಲೆಯಲ್ಲಿ ಕೇರಳ ಸರ್ಕಾರ ಯೋಜನೆಗೆ ಶೇ 50ರಷ್ಟು ವೆಚ್ಚ ಭರಿಸಲು ಮುಂದೆ ಬಂದಿದೆ. ಆದರೆ, ಕರ್ನಾಟಕ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಲಿದೆಯೇ? ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+