ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆ ಬಳಿಕ ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳದ ಶಾಕ್

|
Google Oneindia Kannada News

ಬೆಂಗಳೂರು, ಮೇ 30: ಚುನಾವಣೆ ಮುಗಿದು ಫಲಿತಾಂಶವೂ ಹೊರಬಿದ್ದು, ಮತದಾರರು ನಿರಾಳರಾಗುವ ಸಂದರ್ಭದಲ್ಲಿಯೇ ಪೆಟ್ರೋಲ್ ಮತ್ತು ಡೀಸೆಲ್‌ ದರದಲ್ಲಿ ಏರಿಕೆಯಾಗಿ ಗ್ರಾಹಕರ ಜೇಬಿಗೆ ಹೊರೆ ಹೆಚ್ಚುವ ಸೂಚನೆ ದೊರೆತಿದೆ. ಅದರ ನಡುವೆಯೇ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (ಕೆಪಿಟಿಸಿಎಲ್) ವ್ಯಾಪ್ತಿಯ ಎಲ್ಲ ಐದು ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿಯೂ ಪ್ರತಿ ಯುನಿಟ್‌ಗೆ ಸರಾಸರಿ 33 ಪೈಸೆ ಹೆಚ್ಚಳ ಮಾಡಲಾಗಿದೆ.

ರಾಜ್ಯದ ಎಲ್ಲ 5 ವಿದ್ಯುತ್ ಸರಬರಾಜು ಕಂಪೆನಿಗಳು ವಿವಿಧ ಮಟ್ಟದಲ್ಲಿ ದರ ಏರಿಕೆಗೆ ಒತ್ತಾಯಿಸಿ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದವು. ಈ ಎಲ್ಲ ಪ್ರಸ್ತಾವನೆಗಳನ್ನು ಪರಿಶೀಲಿಸಿ 2019-20 ನೇ ಸಾಲಿಗೆ ದರ ಪರಿಷ್ಕರಣೆ ಮಾಡಲಾಗಿದೆ ಎಂದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಭುದಯಾಳ್ ಮೀನಾ ತಿಳಿಸಿದ್ದಾರೆ.

ಜೂನ್ 1 ರಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ ಜೂನ್ 1 ರಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ

ಇದರಿಂದ ಮೊದಲೇ ದರ ಏರಿಕೆ, ಬರಗಾಲದಿಂದ ತತ್ತರಿಸಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಗ್ರಾಮೀಣ ಭಾಗಗಳಲ್ಲಿ ಪವರ್ ಕಟ್‌ನಿಂದ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಇದರಿಂದ ಹೊಲ, ತೋಟಗಳಿಗೆ ಸಾಕಷ್ಟು ನೀರು ಪೂರೈಸಲು ಸಾಧ್ಯವಾಗದೆ ರೈತರು ಕಂಗಾಲಾಗಿದ್ದಾರೆ. ಅನಿಯಮಿತ ವಿದ್ಯುತ್ ಪೂರೈಕೆ ಹಾಗೂ ವೋಲ್ಟೇಜ್ ಸಮಸ್ಯೆಯಿಂದ ಬೆಳೆಗಳು ಒಣಗುತ್ತಿವೆ. ಬೆಂಗಳೂರು ಮುಂತಾದ ನಗರ ಭಾಗಗಳಲ್ಲಿ ಮಳೆಯಾಗುತ್ತಿದ್ದರೂ ಪ್ರಮುಖವಾಗಿ ಮಳೆಯ ಅಗತ್ಯವಿರುವ ಗ್ರಾಮೀಣ ಭಾಗಗಳಲ್ಲಿ ಮಳೆಯಾಗುತ್ತಿಲ್ಲ. ಈ ಸಂಕಷ್ಟದ ನಡುವೆಯೇ ವಿದ್ಯುತ್ ದರ ಏರಿಕೆಯ ಆಘಾತ ಎದುರಾಗಿದೆ.

1.01 ರೂ. ಏರಿಕೆ ಕೋರಿದ್ದ ಬೆಸ್ಕಾಂ

1.01 ರೂ. ಏರಿಕೆ ಕೋರಿದ್ದ ಬೆಸ್ಕಾಂ

ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ವಿದ್ಯುತ್ ದರ 33 ಪೈಸೆ ಏರಿಕೆ ಮಾಡಲಾಗಿತ್ತು. ಬೆಸ್ಕಾಂ ಪ್ರತಿ ಯೂನಿಟ್‌ಗೆ 1.01 ರೂ. ಏರಿಕೆ ಕೋರಿ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಕೆಇಆರ್‌ಸಿ ಯೂನಿಟ್ ಗೆ 33 ಪೈಸೆ ಏರಿಕೆಗೆ ಒಪ್ಪಿಗೆ ನೀಡಿದೆ.

ವಿದ್ಯುತ್ ಬೆಲೆ ಪ್ರತಿ ಯುನಿಟ್‌ಗೆ 1 ರೂ ಏರಿಸಲು ಬೆಸ್ಕಾಂ ಒತ್ತಾಯ ವಿದ್ಯುತ್ ಬೆಲೆ ಪ್ರತಿ ಯುನಿಟ್‌ಗೆ 1 ರೂ ಏರಿಸಲು ಬೆಸ್ಕಾಂ ಒತ್ತಾಯ

ಪ್ರಸ್ತಾಪ ಸಲ್ಲಿಸಿದ್ದ ಕಂಪೆನಿಗಳು

ಪ್ರಸ್ತಾಪ ಸಲ್ಲಿಸಿದ್ದ ಕಂಪೆನಿಗಳು

ಮೆಸ್ಕಾಂ ಒಂದು ಯೂನಿಟ್ ವಿದ್ಯುತ್ ಗೆ 1.38 ರೂಪಾಯಿ, ಚೆಸ್ಕಾಂ ಯೂನಿಟ್ ಗೆ ಸರಾಸರಿ 1 ರೂ, ಹೆಸ್ಕಾಂ 1.63 ರೂ, ಜೆಸ್ಕಾಂ 1.27 ರೂ. ಏರಿಕೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಒಟ್ಟಾರೆ 5 ವಿದ್ಯುತ್ ಸರಬರಾಜು ಕಂಪನಿಯಲ್ಲಿ ಸರಾಸರಿ ಯೂನಿಟ್ ವಿದ್ಯುತ್ ದರ 33 ಪೈಸೆ ಏರಿಕೆಯಾಗಿದೆ. ನೂತನ ವಿದ್ಯುತ್ ದರವು ಜೂನ್ 1ರಿಂದ ಜಾರಿಯಾಗಲಿದೆ.

ಏರಿಕೆ ನಿರಾಕರಿಸಿದ್ದ ಮುಖ್ಯಮಂತ್ರಿ

ಏರಿಕೆ ನಿರಾಕರಿಸಿದ್ದ ಮುಖ್ಯಮಂತ್ರಿ

ಕಳೆದ ವರ್ಷಾಂತ್ಯದಲ್ಲಿ ಪ್ರತಿ ಯೂನಿಟ್‌ಗೆ 14 ಪೈಸೆ ದರ ಹೆಚ್ಚಳ ಮಾಡಲಾಗಿತ್ತು. ಇದೇ ವರ್ಷದ ಜನವರಿಯಲ್ಲಿ ಪ್ರತಿ ಯೂನಿಟ್‌ಗೆ 1 ರೂಪಾಯಿ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಕೆಇಆರ್‌ಸಿ (ಕರ್ನಾಟಕ ಎಲೆಕ್ಟ್ರಾನಿಕ್ ರೆಗ್ಯುಲೇಟರಿ ಕಮಿಷನ್‌) ಸಂಸ್ಥೆಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು, ಆದರೆ ಆಗ ಕುಮಾರಸ್ವಾಮಿ ಅವರು ಅದಕ್ಕೆ ತಡೆ ಒಡ್ಡಿದ್ದರು.

ಚುನಾವಣೆ ಕಾರಣದಿಂದ ವಿಳಂಬ

ಚುನಾವಣೆ ಕಾರಣದಿಂದ ವಿಳಂಬ

ಪ್ರತಿ ವರ್ಷ ಏಪ್ರಿಲ್‌ನಲ್ಲಿಯೇ ವಿದ್ಯುತ್ ದರ ಹೆಚ್ಚಳವಾಗುತ್ತದೆ, ಆದರೆ ಚುನಾವಣೆ ಇದ್ದ ಕಾರಣ ಫಲಿತಾಂಶ ಹೊರಬಂದ ಬಳಿಕ ತಡವಾಗಿ ದರ ಏರಿಕೆ ಮಾಡಲಾಗುತ್ತಿದೆ.

ಕಳೆದ ವರ್ಷ ಎರಡು ಬಾರಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗಿತ್ತು, ಮೊದಲಿಗೆ ಮೇ ತಿಂಗಳಿನಲ್ಲಿ ಯೂನಿಟ್ ಒಂದಕ್ಕೆ 38 ಪೈಸೆ ಹೆಚ್ಚಳ ಮಾಡಿದ್ದರೆ, ಅಕ್ಟೋಬರ್ ವೇಳೆಗೆ 14 ಪೈಸೆ ಹೆಚ್ಚಳ ಮಾಡಲಾಗಿತ್ತು.

English summary
KERC hiked electricity price 33 Paise per unit in all 5 Electricity Supply Companies across Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X