Power Tariff Hike; ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ, ಏ. 1ರಿಂದಲೇ ಜಾರಿ

ಬೆಂಗಳೂರು, ಏಪ್ರಿಲ್ 04; ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಮತ್ತೊಂದು ಶಾಕ್ ಕಾದಿದೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಿದ್ದು, ಏಪ್ರಿಲ್‌ 1 ರಿಂದಲೇ ನೂತನ ದರ ಜಾರಿಗೆ ಬರಲಿದೆ. ಒಟ್ಟಾರೆ ಸರಾಸರಿ 35 ಪೈಸೆಯಷ್ಟು ದರ ಹೆಚ್ಚಳವಾಗಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಬೆಲೆ ಏರಿಕೆ ಕುರಿತು ಮಾಹಿತಿ ನೀಡಿದೆ. ಎಸ್ಕಾಂಗಳ ಬೇಡಿಕೆ ಪರಿಗಣಿಸಿ ಬೆಲೆ ಏರಿಕೆಗೆ ಒಪ್ಪಿಗೆ ನೀಡಲಾಗಿದೆ.

2022-23ನೇ ಆರ್ಥಿಕ ವರ್ಷದಲ್ಲಿ ಉಂಟಾಗುವ ಆದಾಯ ಕೊರತೆಯ ಮೊತ್ತ 2159.48 ಕೋಟಿ ರೂ.ಗಳನ್ನು ಮರು ಪಡೆಯಲು ದರ ಹೆಚ್ಚಳ ಅನಿವಾರ್ಯವಾಗಿದೆ. ಸದರಿ ಮೊತ್ತವು ಆರ್ಥಿಕ ವರ್ಷ 2020-21ರ ಕೊರತೆಯ ಮೊತ್ತ ರೂ. 1700.49 ಕೋಟಿ ರೂ.ಗಳನ್ನು ಒಳಗೊಂಡಿರುತ್ತದೆ ಎಂದು ಹೇಳಿದೆ.

ವಿದ್ಯುತ್ ಸರಬರಾಜು ಕಂಪನಿಗಳ ಪ್ರಸ್ತಾವನೆಗಳನ್ನು ಪರಿಗಣಿಸಿ ಆಯೋಗವು ಆರ್ಥಿಕ ವರ್ಷ 2023ಕ್ಕೆ ವಿದ್ಯುತ್ ಸರಬರಾಜು ಕಂಪನಿಗಳ 2159.00 ಕೋಟಿ ರೂಪಾಯಿಗಳ ಕಂದಾಯ ಕೊರತೆಯನ್ನು ಅನುಮೋದಿಸಿದೆ.

2159.00 ಕೋಟಿ ರೂಪಾಯಿಗಳ ಕೊರತೆಯನ್ನು ನೀಗಿಸುವ ಸಲುವಾಗಿ ಪ್ರತಿ ಯೂನಿಟ್‌ಗೆ 5 ಪೈಸೆಗಳಷ್ಟು ಇಂಧನ ಶುಲ್ಕಗಳ ಹಾಗೂ ಪ್ರತಿ ಹೆಚ್.ಪಿ/ ಕಿ. ವ್ಯಾ/ ಕೆ.ವಿ.ಎ.ಗೆ ರೂ.10 ರಿಂದ ರೂ. 30 ರವರೆಗೆ ನಿಗದಿತ ಶುಲ್ಕಗಳ ಹೆಚ್ಚಳವನ್ನು ಸಹ ಅನುಮೋದಿಸಲಾಗಿದೆ.

ಆರ್ಥಿಕ ವರ್ಷ 2023ಕ್ಕೆ ಒಟ್ಟಾರೆ ಸರಾಸರಿ ಹೆಚ್ಚಳ ಪ್ರತಿ ಯೂನಿಟ್‌ಗೆ 35 ಪೈಸೆಯಷ್ಟು ಯಷ್ಟಾಗಿರುತ್ತದೆ. (ಶೇ 4.33 ಹೆಚ್ಚಳ). ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್‌ಗೆ ಸರಾಸರಿ 185 ಪೈಸೆ ಅಂದರೆ ಶೇ 23.83ರಷ್ಟು ಹೆಚ್ಚಳಕ್ಕೆ ಮನವಿ ಮಾಡಿದ್ದವು.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ಜೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಮತ್ತು ಹೆಸ್ಕಾಂ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ 35 ಪೈಸೆ ದರ ಹೆಚ್ಚಳವಾಗಲಿದೆ. ಏಪ್ರಿಲ್ 1 ರಿಂದಲೇ ನೂತನ ದರ ಜಾರಿಗೆ ಬರಲಿದೆ.

KERC Hiked Power Tariff Here Is The List Of Fare List
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+