ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾ.20ರಿಂದ ವಿದ್ಯುತ್ ದರ ಹೆಚ್ಚಳ?

|
Google Oneindia Kannada News

ಬೆಂಗಳೂರು, ಮಾರ್ಚ್ 05 : ರಾಜ್ಯದಲ್ಲಿನ ವಿದ್ಯುತ್ ಸಮಸ್ಯೆಯ ನಡುವೆಯೇ ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಮಾರ್ಚ್ 20ರಂದು ವಿದ್ಯುತ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಿದೆ.

'ರಾಜ್ಯದಲ್ಲಿರುವ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳು ದರ ಹೆಚ್ಚಳದ ಕುರಿತು ಸಲ್ಲಿಸಿದ ಬೇಡಿಕೆಗಳನ್ನು ಪರಿಗಣಿಸಿ ಮಾರ್ಚ್ 20ರೊಳಗೆ ವಿದ್ಯುತ್ ದರ ಪರಿಷ್ಕರಣೆಯ ಅಂತಿಮ ಆದೇಶ ಹೊರಡಿಸಲಾಗುವುದೆಂದು' ಎಂದು ಆಯೋಗದ ಅಧ್ಯಕ್ಷ ಎಂ.ಕೆ. ಶಂಕರಲಿಂಗೇಗೌಡ ಹೇಳಿದ್ದಾರೆ. [ವಿದ್ಯುತ್ ದರ ಎಷ್ಟು ಹೆಚ್ಚಳವಾಗಿದೆ?]

shankarlinge gowda

2015ರಲ್ಲಿ ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್‌ಗೆ ಕನಿಷ್ಠ 80 ಪೈಸೆ ದರ ಹೆಚ್ಚಳ ಮಾಡಬೇಕೆಂದು ಎಂದು ಮನವಿ ಮಾಡಿದ್ದವು. 2015ರ ಮಾರ್ಚ್‌ನಲ್ಲಿ ಮಾರ್ಚ್‌ನಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪ್ರತಿ ಯೂನಿಟ್‌ಗೆ 13 ರಿಂದ 20 ಪೈಸೆ ತನಕ ದರ ಹೆಚ್ಚಳ ಮಾಡಿತ್ತು. [ಕರೆಂಟ್ ಕೊಡಿ ಎಂದು ಕರೆ ಮಾಡಿದ್ದಕ್ಕೆ ಕಂಬಿ ಹಿಂದೆ ಹೋದ್ರು]

ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾಗದ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಮತ್ತು ಚೆಸ್ಕಾಂ ಪುನಃ ಆಯೋಗಕ್ಕೆ ದರ ಹೆಚ್ಚಳಕ್ಕೆ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿವೆ. ಮಾರ್ಚ್ 20ರ ವೇಳೆಗೆ ವಿದ್ಯುತ್ ದರ ಹೆಚ್ಚಳದ ಬಗ್ಗೆ ಅಂತಿಮ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ. [ಕರ್ನಾಟಕದಲ್ಲಿ ವಿದ್ಯುತ್ ಕೊರತೆ : ಶಾಶ್ವತ ಪರಿಹಾರಗಳು]

English summary
The Karnataka Electricity Regulatory Commission (KERC) may hike power tariff soon. KERC Chairman MK Shankarlinge Gowda said, we announce final decision on March 20th, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X