ಗೃಹ ಲಕ್ಷ್ಮೀ ಯೋಜನೆ: 'ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್' ಅಳವಡಿಕೆ ಸರ್ಕಾರ ಅಧಿಸೂಚನೆ
ಬೆಂಗಳೂರು, ಆಗಸ್ಟ್ 18: ರಾಜ್ಯ ಸರ್ಕಾರ ಜನರಿಗೆ ಗೃಹ ಲಕ್ಷ್ಮಿ ಯೋಜನೆಯಡಿ ಉಚಿತ ವಿದ್ಯುತ್ ಒದಗಿಸಿದೆ. ಇದರ ಬೆನ್ನಲ್ಲೆ
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ರಾಜ್ಯದ್ಯಂತ ಎಲ್ಲ ವರ್ಗದ ಗ್ರಾಹಕರಿಗೆ 'ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್' ಅಳವಡಿಸಲು ಕರಡು ನಿಯಮಗಳ ಅಧಿಸೂಚನೆ ಹೊರಡಿಸಿದೆ.

ಆಯೋಗದ ಈ ನಿಯಮವು ಎಸ್ಕಾಮ್‌ಗಳಿಗೆ ವಾರ್ಷಿಕ ಭದ್ರತಾ ಠೇವಣಿ (ESD) ಪಾವತಿಗೆ ಹೆಚ್ಚಿನ ಉಳಿತಾಯಕ್ಕೆ ದಾರಿ ಮಾಡಿಕೊಡಲಿದೆ ಎನ್ನಲಾಗುತ್ತಿದೆ. ಅದಷ್ಟೇ ಅಲ್ಲದೇ ಬಿಲ್ಲಿಂಗ್ ಸಮಯದಲ್ಲಿ ವಿದ್ಯುತ್ ಬಳಕೆಯನ್ನು ತಿದ್ದುವ ಪ್ರಯತ್ನಗಳನ್ನು ತಡೆಯಲಿದೆ. ಒಂದು ರೀತಿಯಲ್ಲಿ ಎಲೆಕ್ಟ್ರಿಕ್ ಮೀಟರ್‌ಗಳು ಮೊಬೈಲ್ ಫೋನ್‌ಗಳಿಗೆ ಪ್ರಿಪೇಯ್ಡ್ ಕರೆನ್ಸಿ ಯೋಜನೆ ರೀತಿಯಲ್ಲಿ ಕೆಲಸ ಮಾಡಲಿವೆ.
ಉದ್ದೇಶಿತ ಈ 'ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಗಳನ್ನು ಸ್ಮಾರ್ಟ್‌ಫೋನ್‌ಗಳಿಗೆ ಲಿಂಕ್ ಮಾಡಲಾಗಿದೆ ಮತ್ತು ಮಾಸಿಕ ಪವರ್ ಕೋಟಾ ಖಾಲಿಯಾದಾಗ ಗ್ರಾಹಕರು ಎಚ್ಚರಿಕೆ ಪಡೆಯಲಿದ್ದಾರೆ. ವಿದ್ಯುತ್ ಬಳಕೆಗಾಗಿ ರಿಚಾರ್ಜ್ ಸಹ ಮಾಡಬಹುದಾಗಿದೆ ಎಂದು ಆಯೋಗ ಮಾಹಿತಿ ನೀಡಿದೆ.

ವಿದ್ಯುತ್ ಪರಿಣಾಮಕಾರಿ ನಿರ್ವಹಣೆಗೆ ಸಹಾಯ
ಆಯೋಗುವ ಅಧಿಸೂಚನೆಯನ್ನು ಬುಧವಾರ ಹೊರಡಿಸಿದೆ. KERC ಈ ಅಧಿಸೂಚನೆಗೆ ಏನಾದರೂ ಆಕ್ಷೇಪಣೆಗಳು, ಸಲಹೆಗಳು ಇದ್ದಲ್ಲಿ 30 ದಿನಗಳಲ್ಲಿ ಸಲ್ಲಿಸುವಂತೆ ತಿಳಿಸಿದೆ. ಆಯೋಗದ ಈ ಕ್ರಮದಿಂದ ತಿಂಗಳ ವಿದ್ಯುತ್ ಬಳಕೆಯನ್ನು ಪರಿಣಾಮಕಾರಿ ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ತಿಳಿದು ಬಂದಿದೆ.
ಎಸ್ಕಾಮ್‌ಗಳು 2 ಕೋಟಿಗೂ ಹೆಚ್ಚು ಗ್ರಾಹಕರಿಂದ ಠೇವಣಿ ಎಎಸ್‌ಡಿಯಾಗಿ 9,108 ಕೋಟಿ ರೂ.ಗಳನ್ನು ಸಂಗ್ರಹಿಸಿವೆ. ಪ್ರಿಪೇಯ್ಡ್ ಮೀಟರ್ ಹೊಂದಿರುವುದು ಗ್ರಾಹಕರ ಬಹುಕಾಲದ ಬೇಡಿಕೆ ಆಗಿತ್ತು. ಸದ್ಯ ಆಯೋಗವು ತಾತ್ಕಾಲಿಕ ಅಳವಡಿಕೆಗಳಲ್ಲಿ ಪ್ರಿಪೇಯ್ಡ್ ಮೀಟರ್‌ಗಳನ್ನು ಅಳವಡಿಸಲು ಆದೇಶಿಸಿದೆ. ಇದು ಸರ್ಕಾರಿ ಕಟ್ಟಡಗಳಲ್ಲಿ ಜಾರಿಗೆ ಬರಲಿದೆ.
2011 ರಲ್ಲಿ ಯೋಜನೆಯನ್ನು ಪ್ರಾಯೋಗಿಕ ನಡೆಸಲಾಗಿತ್ತು. ಗ್ರಾಹಕರು ಈ ಪ್ರಿಪೇಯ್ಡ್ ಮೀಟರ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಆಯೋಗ ತಿಳಿಸಿದೆ.
ವಿದ್ಯುತ್ ದುರ್ಬಳಕೆಗೆ ಬ್ರೇಕ್ ಸಾಧ್ಯತೆ
ಪ್ರಿಪೇಯ್ಡ್ ಮೀಟರ್‌ನ ಬೆಲೆ ಅದರ ಸಾಮರ್ಥ್ಯದ ಆಧಾರದ ಮೇಲೆ ನಿಗಿದಯಾಗಿರುತ್ತದೆ. ಅಂದರೆ ಆರಂಭಿಕ 6,000 ರೂಪಾಯಿಯಿಂದ 13,000 ರೂ.ವರೆಗೆ ಇರಲಿದೆ. ಇದು ದೇಶೀಯ, ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವರದಾನವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸದ್ಯ ಕಳ್ಳತನದಲ್ಲಿ ಎಷ್ಟು ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಉತ್ತರ ಬಂದಿಲ್ಲ ಎನ್ನಲಾಗಿದೆ. ಈ ಪ್ರಿಪೇಯ್ಡ್ ಮೀಟರ್ ಅಳವಡಿಕೆ ವಿದ್ಯುತ್ ದುರ್ಬಳಕೆಯನ್ನು ಸಹ ತಡೆಯುತ್ತದೆ. ಇನ್ನೂ ಈ ಮೀಟರ್ ಅನ್ನು ಗ್ರಾಹಕರ ಬಳಕೆ ಅನುಗುಣವಾಗಿ ಪ್ರೋಗ್ರಾಂ ಮಾಡಬಹುದಾಗಿದೆ ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications