ಏಪ್ರಿಲ್ 01ರಿಂದ ವಿದ್ಯುತ್ ದರ ಏರಿಕೆ ಬರೆ!
ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಎಸ್ಕಾಂಗಳ ಬಹುದಿನ ಬೇಡಿಕೆಗೆ ಸರ್ಕಾರ ಮಣಿದಿದೆ. ಮಾರ್ಚ್ 31ಕ್ಕೆ ಕೆಇಆರ್‍ಸಿಯಿಂದ (ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ)ದರ ಪ್ರಕಟಿಸಲಿದೆ.
ಬೆಂಗಳೂರು, ಮಾರ್ಚ್ 27: ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಎಸ್ಕಾಂಗಳ ಬಹುದಿನ ಬೇಡಿಕೆಗೆ ಸರ್ಕಾರ ಮಣಿದಿದೆ. ಮಾರ್ಚ್ 31ಕ್ಕೆ ಕೆಇಆರ್‍ಸಿಯಿಂದ (ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ)ದರ ಪ್ರಕಟಿಸಲಿದೆ.
ಕಳೆದ ಡಿಸೆಂಬರ್ ತಿಂಗಳಿನಲ್ಲಿ ಎಲ್ಲಾ ಎಸ್ಕಾಂಗಳು(ಬೆಸ್ಕಾಂ, ಚೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಹಾಗೂ ಜೆಸ್ಕಾಂ ಕಂಪನಿ) ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪ್ರತಿ ಯೂನಿಟ್ ಗೆ 1.40ಪೈಸೆ ಹೆಚ್ಚಳಕ್ಕೆ ಆಗ್ರಹಿಸಲಾಗಿತ್ತು. ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳಲ್ಲಿ ಪ್ರತಿ ಯೂನಿಟ್‍ಗೆ 40 ಪೈಸೆ ದರ ಹೆಚ್ಚಳ ಮಾಡಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‍ಸಿ) ತೀರ್ಮಾನಿಸಿದೆ.[ಏಪ್ರಿಲ್ ನಂತರ ನಂದಿನಿ ಹಾಲಿನ ದರ ಏರಿಕೆ!]
ಈ ಬಾರಿ ರಾಜ್ಯದಲ್ಲಿ 140ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲ ಆವರಿಸಿರುವ ಕಾರಣ ದರ ಹೆಚ್ಚಳ ಮಾಡಿದರೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಮುಂಗಾರು ಮಳೆ ಕೂಡಾ ಕ್ಷೀಣ ಎಂದು ಸ್ಕೈಮಾಟ್ ಹವಾಮಾನ ಮುನ್ಸೂಚನೆ ನೀಡಿದೆ.

ಡಿಕೆ ಶಿವಕುಮಾರ್ ಸಮರ್ಥನೆ: ಕಳೆದ ವರ್ಷ ಮಾರ್ಚ್‍ನಲ್ಲಿ ವಿದ್ಯುತ್‍ದರ ಏರಿಕೆ ಮಾಡಲಾಗಿತ್ತು. ವಿದ್ಯುತ್ ದರ ಏರಿಕೆ ಅನಿವಾರ್ಯ ಪ್ರತಿ ಯೂನಿಟ್ ಗೆ 1.48 ರು ಏರಿಕೆಗೆ ಮನವಿ ಬಂದಿದೆ. 40 ಪೈಸೆ ಹೆಚ್ಚಳಕ್ಕೆ ಕೆಇ ಆರ್ ಸಿ ಮುಂದಾಗಿದೆ ಎಂದರು.
ಕಳೆದ ಬಾರಿ ನಗರದ ಗೃಹಬಳಕೆ ಗ್ರಾಹಕರಿಗೆ ಮೊದಲ 30 ಯೂನಿಟ್‍ಗೆ 30 ಪೈಸೆ, 31ರಿಂದ 100 ಯೂನಿಟ್‍ಗೆ 40 ಪೈಸೆ ಹೆಚ್ಚಿಸಲಾಗಿತ್ತು. 100 ಯೂನಿಟ್‍ಗೆ ಮೇಲ್ಪಟ್ಟ ಬಳಕೆಗೆ ಪ್ರತಿ ಹಂತದಲ್ಲಿ ತಲಾ 50 ಪೈಸೆ ಏರಿಸಲಾಗಿತ್ತು. ಗ್ರಾಮೀಣ ಗೃಹಬಳಕೆದಾರರಿಗೂ ಇಷ್ಟೇ ದರ ಹೆಚ್ಚಳವಾಗಿತ್ತು.












Click it and Unblock the Notifications