ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಕೆ.ಜಿ.ಬೋಪಯ್ಯ ಹೆಸರು ಅಂತಿಮ

|
Google Oneindia Kannada News

ಬೆಂಗಳೂರು, ಜುಲೈ 29 : ವಿರಾಜಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಕೆ. ಜಿ. ಬೋಪಯ್ಯ ಅವರ ಹೆಸರನ್ನು ಕರ್ನಾಟಕ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಅಂತಿಮಗೊಳಿಸಲಾಗಿದೆ. ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಿದ್ದಾರೆ. ಹೊಸ ಸ್ಪೀಕರ್ ಯಾರು? ಎಂಬ ಪ್ರಶ್ನೆ ಎದುರಾಗಿತ್ತು.

ರಮೇಶ್ ಕುಮಾರ್ ರಾಜೀನಾಮೆ: ಮುಂದಿನ ಸ್ಪೀಕರ್ ಯಾರು?ರಮೇಶ್ ಕುಮಾರ್ ರಾಜೀನಾಮೆ: ಮುಂದಿನ ಸ್ಪೀಕರ್ ಯಾರು?

ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಸ್ಪೀಕರ್ ಆಗಿ ಆಯ್ಕೆಯಾಗಿದ್ದ ರಮೇಶ್ ಕುಮಾರ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ, ಹೊಸ ಸ್ಪೀಕರ್ ಯಾರು? ಎಂಬ ಪ್ರಶ್ನೆ ಎದುರಾಗಿತ್ತು.

ಯಡಿಯೂರಪ್ಪ ಸಂಪುಟ : 2 ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಠಿ?ಯಡಿಯೂರಪ್ಪ ಸಂಪುಟ : 2 ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಠಿ?

KG Bopaiah All Set To Elect As Karnataka Assembly Speaker

ಜುಲೈ 31ರ ಬುಧವಾರ ನೂತನ ಸ್ಪೀಕರ್ ಆಯ್ಕೆ ಮಾಡಲು ದಿನಾಂಕ ನಿಗದಿ ಮಾಡಲಾಗಿದೆ. ಜುಲೈ 30ರ ಮಧ್ಯಾಹ್ನ 12 ಗಂಟೆ ತನಕ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಬಿಜೆಪಿ ಕೆ. ಜಿ. ಬೋಪಯ್ಯ ಹೆಸರನ್ನು ಅಂತಿಮಗೊಳಿಸಿದ್ದು, ಅವರು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಎಲ್ಲಾ ನಿಗಮ/ಮಂಡಳಿ ಅಧ್ಯಕ್ಷರ ನೇಮಕ ರದ್ದುಗೊಳಿಸಿದ ಸಿಎಂಎಲ್ಲಾ ನಿಗಮ/ಮಂಡಳಿ ಅಧ್ಯಕ್ಷರ ನೇಮಕ ರದ್ದುಗೊಳಿಸಿದ ಸಿಎಂ

ಸ್ಪೀಕರ್ ಸ್ಥಾನಕ್ಕೆ ಸುರೇಶ್ ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಜಗದೀಶ್ ಶೆಟ್ಟರ್ ಮತ್ತು ಕೆ. ಜಿ. ಬೋಪಯ್ಯ ಅವರ ಹೆಸರು ಕೇಳಿ ಬಂದಿತ್ತು. ಬಿಜೆಪಿ ನಾಯಕರು ಸಭೆ ನಡೆಸಿ, ಕೆ. ಜಿ. ಬೋಪಯ್ಯ ಹೆಸರನ್ನು ಅಂತಿಮಗೊಳಿಸಿದ್ದಾರೆ.

4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೆ. ಜಿ. ಬೋಪಯ್ಯ 2009 ರಿಂದ 2013ರ ತನಕ ಸ್ಪೀಕರ್ ಆಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಆಯ್ಕೆ ಮಾಡಲಾಗುತ್ತದೆ.

English summary
Virajpet BJP MLA K.G.Bopaiah all set to elect as Karnataka assembly speaker. Post vacant after K.R.Ramesh Kumar resignation on July 29, 2019. K.G.Bopaiah served as speaker in 2009 to 2013.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X