ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಲಾರ, ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ಬೇಡಿಕೆಗಳು

|
Google Oneindia Kannada News

ಕೋಲಾರ, ಮಾ. 26 : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಅಭಿವೃದ್ಧಿಗಾಗಿ ಅನುದಾನವನ್ನು ಒದಗಿಸುವಂತೆ ಸಂಸದರಾದ ವೀರಪ್ಪ ಮೊಯ್ಲಿ ಮತ್ತು ಕೆ.ಎಚ್.ಮುನಿಯಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಕೋಲಾರ ಸಂಸದ ಕೆ.ಎಚ್.ಮುನಿಯಪ್ಪ ಮತ್ತು ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

KH Muniyappa, Veerappa Moily

ಸಂಸದರು ಸಲ್ಲಿಸಿದ ಬೇಡಿಕೆಗಳು

* ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಒಂದು ವಿಶ್ವವಿದ್ಯಾಲಯದ ಅವಶ್ಯಕತೆ ಇದೆ. ಆದ್ದರಿಂದ ವಿವಿ ಸ್ಥಾಪಿಸಲು ಅನುಮತಿ ನೀಡಿ, ಅಗತ್ಯ ಅನುದಾನವನ್ನು ಮೀಸಲಿಡಬೇಕು. [ಎತ್ತಿನಹೊಳೆ ಯೋಜನೆಗೆ ಶಂಕು ಸ್ಥಾಪನೆ]

* ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ನೂತನ ವೈದ್ಯಕೀಯ ಕಾಲೇಜು ಸ್ಥಾಪಿಸುವ ಯೋಜನೆ ಇದ್ದು, ಇದು ಶ್ಲಾಘನೀಯವಾಗಿದೆ. ಕಾಲೇಜು ನಿರ್ಮಾಣಕ್ಕೆ 10 ಕೋಟಿ ಅನುದಾನ ನೀಡಬೇಕು.

* ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನೀರಿನ ಕೊರತೆ ಇದೆ. ಜಿಲ್ಲೆಯ ಕೆರೆಗಳಲ್ಲಿ ಅತಿಯಾದ ಹೂಳು ತುಂಬಿದೆ. ಕೆರೆಗಳ ಹೂಳು ತೆಗೆದು ಅಭಿವೃದ್ಧಿ ಮಾಡಲು 100 ಕೋಟಿ ಹಣವನ್ನು ಬಿಡುಗಡೆ ಮಾಡಬೇಕು.

* ಎರಡು ಜಿಲ್ಲೆಗಳಿಗೆ ನೀರಿನ ಸೌಲಭ್ಯ ಒದಗಿಸುವ ಯೋಜನೆಯಾದ ಎತ್ತಿನಹೊಳೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಗಿದೆ.

* ಚಿಕ್ಕಬಳ್ಳಾಪುರ-ಪ್ರಶಾಂತಿನಿಲಯಂ, ಚಿಕ್ಕಬಳ್ಳಾಪುರ-ಗೌರಿಬಿದನೂರು, ಶ್ರೀನಿವಾಸಪುರ-ಮದನಪಲ್ಲಿ ಸೇರಿದಂತೆ ಎರಡೂ ಜಿಲ್ಲೆಗಳ ರೈಲ್ವೆ ಯೋಜನೆಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

English summary
Kolar MP K.H. Muniyappa and Chikkballapur MP M. Veerappa Moily met Karnataka Chief Minister Siddaramaiah and requested fund for development of districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X