ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ: ಮಹತ್ವದ ಮಾಹಿತಿ ಕೊಟ್ಟ ಕೆ ಎಚ್ ಮುನಿಯಪ್ಪ
ಬೆಳಗಾವಿ, ಡಿಸೆಂಬರ್ 08: ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದರು.
ಇಂದು ಬೆಳಗಾವಿಯಸುವರ್ಣಸೌಧದದ ವಿಧಾನ ಪರಿಷತ್ ನಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆಹಾರ ಸಚಿವರಾದ ಕೆ ಎಚ್ ಮುನಿಯಪ್ಪ ಅವರು ಉತ್ತರಿಸಿ, ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂದಿಸಿದಂತೆ ಒಟ್ಟು 29603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ಹೇಳಿದರು.

ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ ಕರ್ತ್ಯವ್ಯದಿಂದ ಬಿಡುಗಡೆಗೊಳಿಸಲಾಗಿದೆ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆ.ಎಫ್.ಸಿ.ಎಸ್.ಸಿ. ಗೋದಾಮು ಅಮಾನತ್ತುಗೊಳಿಸಲಾಗಿರುತ್ತದೆ. ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯನಿರ್ವಹಕ ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ.
ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ ಎಂದು ಪರಿಷತ್ ನಲ್ಲಿ ತಿಳಿಸಿದ ಸಚಿವ ಮುನಿಯಪ್ಪ ಅವರು ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ ಎಂದರು.
ಪ್ರತಿ ಮಾಹೆ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿ ಆಹಾರ ಅದಾಲತ್ಗಳನ್ನು ನಡೆಸಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ಆಹಾರ ಜಾಗೃತ ದಳ ರಚಿಸಿ ಅಕ್ರಮಗಳ ಬಗ್ಗೆ ನಿಯಮಾನುಸಾರ ಕ್ರಮವಹಿಸಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದರು.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
LPG Good News: ಬೆಂಗಳೂರು ಹೋಟೆಲ್ಗಳಿಗೆ 17,5000 ಸಿಲಿಂಡರ್ ವಿತರಣೆ: ಕೆಎಚ್ ಮುನಿಯಪ್ಪ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications