Government Employees: ಸರ್ಕಾರಿ ನೌಕರರು ಈ ಬಟ್ಟೆ ಧರಿಸುವುದು ಕಡ್ಡಾಯ: ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಕರ್ನಾಟಕ ಸರ್ಕಾರಿ ನೌಕರರಿಗೆ ಖಾದಿ ಪಟ್ಟೆ ಬಳಕೆ ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ-ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಭೆ ಆಯೋಜಿಸಲಾಗಿತ್ತು.

Khadi clothes is mandatory for Karnataka government employees order from state government

ಸರ್ಕಾರಿ ನೌಕರರು ಖಾದಿ ಉಡುಪು ಧರಿಸುವ ಸಂಬಂಧ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಾದ ಡಾ. ಶ್ರೀಮತಿ ಶಾಲಿನಿ ರಜನೀಶ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಖಾದಿ ಬಟ್ಟೆ ಧರಿಸುವ ಕುರಿತು ಚರ್ಚೆ ನಡೆಸಿದ್ದು, ಈ ಸಭೆಯಲ್ಲಿ ಮಹತ್ವ ನಿರ್ಧಾರ ಕೈಗೊಳ್ಳಲಾಗಿದೆ. ಇನ್ಮುಂದೆ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ಇಂದಿನ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಯೋಜನೆ ಏಪ್ರಿಲ್ 24ರಿಂದ ಜಾರಿಗೆ ಬರಲಿದೆ. ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು

* ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವುದು.

*ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು.

* ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ, ನೌಕರರಿಗೆ ಶೇ. 5% ಹೆಚ್ಚುವರಿ ರಿಯಾಯಿತಿ ನೀಡುವುದು.

* ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು.

* ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು.

* ಎಂಎಸ್​ಐಎಲ್​ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು "ಸರ್ಕಾರಿ ನೌಕರರ ಕ್ಯಾಂಟೀನ್" ಪ್ರಾರಂಭಿಸಲು 2026-27ನೇ ಸಾಲಿನ ಆಯ-ವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡುವುದು.

* ಕೆಎಸ್​ಐಸಿ ಸಂಸ್ಥೆಯು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಖರೀದಿಸುವ ರೇಷ್ಮೆ ಸೀರೆ ಮತ್ತು ರೇಷ್ಮೆ ವಸ್ತ್ರಗಳಿಗೆ ಹೆಚ್ಚುವರಿ ಶೇ.5% ವಿಶೇಷ ರಿಯಾಯಿತಿ ನೀಡುತ್ತಿರುವ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರಿಗೂ ಹೆಚ್ಚುವರಿ ಶೇ. 5% ವಿಶೇಷ ರಿಯಾಯಿತಿ ನೀಡುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+