ಭಾರೀ ಕುತೂಹಲ ಹುಟ್ಟಿಸಿರುವ ಕುಮಾರಸ್ವಾಮಿ, ಕಿಚ್ಚ ಸುದೀಪ್ ಭೇಟಿ!

ಬೆಂಗಳೂರು, ಏಪ್ರಿಲ್ 02 : ಕಿಚ್ಚ ಸುದೀಪ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದರು. ಸುಮಾರು ಎರಡು ಗಂಟೆಗಳ ಕಾಲ ಸುದೀಪ್, ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಈ ಭೇಟಿ ರಾಜಕೀಯ ಮತ್ತು ಸಿನಿಮಾ ರಂಗದಲ್ಲಿ ಭಾರೀ ಕುತೂಹಲ ಹುಟ್ಟುಹಾಕಿದೆ.

ಸೋಮವಾರ ಕಿಚ್ಚ ಸುದೀಪ್ ಜೆ.ಪಿ.ನಗರದಲ್ಲಿನ ಎಚ್.ಡಿ.ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದರು. ಬೆಳಗ್ಗೆ ಕುಮಾರಸ್ವಾಮಿ ಅವರ ಮನೆಗೆ ಭೇಟಿ ನೀಡಿದ್ದ ಕಿಚ್ಚ ಸುದೀಪ್ ಕುಮಾರಸ್ವಾಮಿ ಕುಟುಂಬ ಸದಸ್ಯರ ಜೊತೆ ಉಪಹಾರ ಸೇವಿಸಿದರು.

ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರ್ ಕುಮಾರಸ್ವಾಮಿ, ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉಪಹಾರದ ಬಳಿಕ ಎರಡು ಗಂಟೆಗಳ ಕಾಲ ಸುದೀಪ್ ಕುಮಾರಸ್ವಾಮಿ ಅವರ ಜೊತೆ ಚರ್ಚೆ ನಡೆಸಿದರು.

Kiccha Sudeep meets HD Kumaraswamy

ಕಿಚ್ಚ ಸುದೀಪ್ ಅವರು ಪ್ರಸಕ್ತ ರಾಜಕೀಯ ವಿದ್ಯಮಾನ, 2018ರ ವಿಧಾನಸಭೆ ಚುನಾವಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಕುಮಾರಸ್ವಾಮಿ ಅವರ ಜೊತೆ ಮಾತುಕತೆ ನಡೆಸಿದರು. ಸುದೀಪ್ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರವನ್ನು ನಡೆಸುವ ಸಾಧ್ಯತೆ ಇದೆ.

Kiccha Sudeep meets HD Kumaraswamy

ಕೆಲವು ದಿನಗಳ ಹಿಂದೆ ನೆಲಮಂಗಲ ಭಾಗದ ಜೆಡಿಎಸ್ ನಾಯಕರು ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿದ್ದರು. ಬೆಂಗಳುರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು ಕೆಲವು ದಿನಗಳ ಹಿಂದೆ ಸುದೀಪ್ ಭೇಟಿ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+