ಚುನಾವಣಾ ಪ್ರಚಾರದ ಅಖಾಡಕ್ಕೆ ಕಿಚ್ಚ ಎಂಟ್ರಿ; ನನ್ನ ಜೊತೆಗೆ ಕಿಚ್ಚ ಸುದೀಪ್ ಬಿಜೆಪಿ ಪರವೂ ಪ್ರಚಾರ: ಸಿಎಂ ಬೊಮ್ಮಾಯಿ
ಬೆಂಗಳೂರು,ಏಪ್ರಿಲ್5 : ರಾಜ್ಯ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಈಗಾಗಲೇ ಚುನಾವಣಾ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಸಿನಿಮಾ ಸ್ಟಾರ್ ಗಳನ್ನು ಪಕ್ಷಗಳ ಪರವಾಗಿ ಸ್ಟಾರ್ ಪ್ರಚಾರರಾಗಿ ಕರೆತರಲು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದು, ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಪ್ರಚಾರ ನಡೆಸಲು ರಾಜಕೀಯ ಅಖಾಡಕ್ಕೆ ಕಿಚ್ಚ ಸುದೀಪ್ ಧುಮುಕಲು ಸಿದ್ದತೆ ನಡೆಸುತ್ತಿದ್ದಾರೆ.
ಈ ಕುರಿತು ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, . ನಿನ್ನೇ ಸುದ್ದಿ ಮಾಧ್ಯಮದಲ್ಲಿ ನಿರೀಕ್ಷೆ ಮಾಡಿದಂತೆ ಕನ್ನಡದ ನಟ ಕಿಚ್ಚ ಸುದೀಪ್ ಅವರು ಯಾವುದೇ ಪಕ್ಷಕ್ಕೆ ಸೇರದಿದ್ದರೂ ನನ್ನ ಜೊತೆಗೆ ಬಿಜೆಪಿ ಪರವೂ ಪ್ರಚಾರ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿನಿಮಾ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಖ್ಯಾತ ನಟ ಕಿಚ್ಚ ಸುದೀಪ್ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳನ್ನ ಹೊಂದಿದ್ದು, ಸುದೀಪ್ ಅವರು ರಾಜಕೀಯದಲ್ಲಿಲ್ಲ, ಚಲನಚಿತ್ರದಲ್ಲಿದ್ದಾರೆ. ಸುದೀಪ್ ಚಲನಚಿತ್ರ ರಂಗದಲ್ಲಿ ಒಳ್ಳೆಯ ಸಾಧನೆ ಮಾಡಿದ್ದಾರೆ. ನಮ್ಮ ಪಕ್ಷಕ್ಕೆ ಸೇರದೆ ಇದ್ದರೂ ನಿನ್ನ ಪ್ರಚಾರದ ಅಗತ್ಯವಿದೆ ಎಂದಿದ್ದೇನೆ. ಸುದೀಫ್ ನನ್ನ ಪರವಾಗಿ ಪ್ರಚಾರ ನಡೆಸುತ್ತಾರೆ ಎಂದು ಹೇಳಿದರು.
ಯಾವುದೇ ರಾಜಕೀಯ ಪಕ್ಷಕ್ಕೆ ಸೇರದೆ ನನಗೆ ಬೆಂಬಲ ಕೊಡುತ್ತಿದ್ದಾರೆ. ನನ್ನ ಜೊತೆಗೆ ನಮ್ಮ ಪಕ್ಷಕ್ಕೂ ಪ್ರಚಾರ ಮಾಡುತ್ತಾರೆ. ಇನ್ನೂ ನಟ ಸುದೀಪ್ ಹಾಗೂ ನಮ್ಮ ಸಂಬಂಧವನ್ನ ಗೌರವಿಸಿ. ನನಗೆ ಮೊದಲಿನಿಂದಲೂ ಸಂಬಂಧ ಇರುವುದರಿಂದ ನಾನು ಅವರ ಜೊತೆ ಮಾತನಾಡಿದ್ದೇನೆ. ನೀನು ನಮ್ಮ ಪಕ್ಷಕ್ಕೆ ಸೇರದಿದ್ದರೂ ನಿಮ್ಮ ಅವಶ್ಯಕತೆ ಇದೆ ಅಂತ ಹೇಳಿದ್ದೇನೆ. ಹೀಗಾಗಿ ಅವರು ನಿಮಗೋಸ್ಕರ ನಾನು ಇದ್ದೇನೆ, ನಿಮಗೆ ಮಾತ್ರ ನನ್ನ ಬೆಂಬಲ ಅಂತ ಹೇಳಿದ್ದಾರೆ. ಆದರೆ, ಅವರು ಪಕ್ಷದ ಪರವೂ ಪ್ರಚಾರ ಮಾಡುತ್ತಾರೆ ಎಂದು ಸ್ಪಷ್ಟ ಪಡಿಸಿದರು.

ಮನುಷ್ಯತ್ವ ಅನ್ನೋದು ಇದೆ, ಸಂಬಂಧಗಳು ಅನ್ನೋದು ಇವೆ. ನಿಮ್ಮ ಕಲ್ಪನೆಯಲ್ಲಿ ಕಮರ್ಷಿಯಲ್ನಲ್ಲಿ ನೋಡಬೇಡಿ. ನಾನು ಹೇಳಿದ ಕಡೆಯಲ್ಲಿ ನಟ ಸುದೀಪ್ ಪ್ರಚಾರವನ್ನ ನಡೆಸುತ್ತಾರೆ. ನನ್ನ ಮೇಲಿನ ಪ್ರೀತಿ ವಿಶ್ವಾಸದಿಂದ ಸುದೀಪ್ ಪ್ರಚಾರ ಮಾಡುತ್ತಾರೆ. ಇವರ ಪ್ರಚಾರದಿಂದ ನಮ್ಮ ಪಕ್ಷಕ್ಕೆ ದೊಡ್ಡ ಶಕ್ತಿ ಬರುತ್ತದೆ. ಸುದೀಪ್ ಅವರು ನನ್ನ ಪರವಾಗಿ ಇದ್ದಾರೆ. ನಾನು ಬಿಜೆಪಿಯೊಳಗೆ ಇದ್ದೇನೆ, ನಾನು ಯಾರಿಗೆ ಹೇಳುತ್ತೇನೋ ಅವರ ಪರ ಸುದೀಪ್ ಪ್ರಚಾರ ಮಾಡುತ್ತಾರೆ. ಇನ್ನೂ ನಟ ಸುದೀಪ್ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ರೂಪರೇಷೆ ಸಿದ್ಧಪಡಿಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಸುದೀಪ್ ಅವರು ಜನಪ್ರಿಯ ನಟರಾಗಿರುವುದರಿಂದ ಅವರ ಪ್ರಚಾರವನ್ನು ಸೂಕ್ತವಾಗಿ ಆಯೋಜಿಸಲಾಗುವುದು. ಅವರ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು. ಸುದೀಪ್ ಅವರಿಗೆ ದೇಶದ ಹಾಗೂ ಕರ್ನಾಟಕದ ಬಗ್ಗೆ ಅವರದ್ದೇ ಆದ ವಿಚಾರಧಾರೆಗಳಿವೆ. ಅವುಗಳನ್ನು ಮುಂದೆ ಪ್ರಚಾರದಲ್ಲಿ ತಿಳಿಸುತ್ತಾರೆ.
ನಮ್ಮ ವೈಯಕ್ತಿಕ ಸಂಬಂಧದಿಂದ ನಿರ್ಣಯ ತೆಗೆದುಕೊಂಡಿದ್ದಾರೆ. ನಾನು ಸೂಚಿಸುವಲ್ಲಿ ಪ್ರಚಾರ ಮಾಡುತ್ತಾರೆ. ಬಿಜೆಪಿ ಪರವಾಗಿಯೂ ಅವರು ಪ್ರಚಾರ ಮಾಡುವುದರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದ ಅವರು ಅವರ ತಂದೆತಾಯಿಗಳಿಗೂ ಕೃತಜ್ಞತೆಗಳನ್ನು ತಿಳಿಸಿದರು. ಅವರ ಸಮಯ, ಗೌರವವನ್ನು ಗಮನದಲ್ಲಿಟ್ಟುಕೊಂಡು ಸುದೀಪ್ ಅವರು ಪ್ರಚಾರಕ್ಕೆ ನಿಂತಿರುವುದು ಕರ್ನಾಟಕದಲ್ಲಿ ವಿದ್ಯುತ್ ಸಂಚಲನವಾದಂತಾಗಿದೆ. ವಿಶೇಷವಾಗಿ ಯುವಕರು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸುತ್ತಿದ್ದಾರೆ. ಅವರ ಬೆಂಬಲವನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದರು.
ಇನ್ನೂ ಪತ್ರಿಕಾಗೋಷ್ಠಿ ಯಲ್ಲಿ ಸಚಿವರಾದ ಆರ್. ಅಶೋಕ್, ಡಾ. ಸುಧಾಕರ್, ಮುನಿರತ್ನ ಹಾಜರಿದ್ದರು.












Click it and Unblock the Notifications