ಕುತೂಹಲ ಕೆರಳಿಸಿದ ಕಿಚ್ಚ ಸುದೀಪ್, ಸಿಎಂ ಸಿದ್ದರಾಮಯ್ಯ ಭೇಟಿ
Recommended Video

ಬೆಂಗಳೂರು, ಏಪ್ರಿಲ್ 05: ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಅವರ ಕುಟುಂಬದೊಡನೆ ಊಟ ಮಾಡಿ ಹಲವು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದ್ದ ನಟ ಕಿಚ್ಚ ಸುದೀಪ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮತ್ತಷ್ಟು ಕುತೂಹಲ ಹುಟ್ಟಿಸಿದ್ದಾರೆ!
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಚುನಾವಣೆಯ ಹೊತ್ತಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ನಿವಾಸ ಕಾವೇರಿಯಲ್ಲಿ ಖುದ್ದಾಗಿ ಕಿಚ್ಚ ಸುದೀಪ್ ಭೇಟಿ ಮಾಡಿದ್ದು ಏಕೆ? ಕಿಚ್ಚ ಕಾಂಗ್ರೆಸ್ ಸೇರ್ತಾರಾ? ಅಥವಾ ಸ್ವತಃ ಮುಖ್ಯಮಂತ್ರಿಗಳೇ ಸುದೀಪ್ ಅವರನ್ನು ಆಹ್ವಾನಿಸಿದ್ದರಾ? ಕಾಂಗ್ರೆಸ್ ಪರ ಸುದೀಪ್ ಪ್ರಚಾರ ಮಾಡುತ್ತಾರಾ...? ಈ ಯಾವ ಪ್ರಶ್ನೆಗಳಿಗೂ ಉತ್ತರವಿಲ್ಲ.
ಕಿಚ್ಚ ಸುದೀಪ್ ಸಿಎಂ ಸಿದ್ಧರಾಮಯ್ಯ ಅವರನ್ನು ಬೇಟಿ ಮಾಡಿದ್ದು ಯಾಕೆ?

ಕೆಲವು ಮೂಲಗಳ ಪ್ರಕಾರ ಕಿಚ್ಚ ಸುದೀಪ್ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಕೇವಲ ಏಪ್ರಿಲ್ 7 ರಿಂದ ಆರಂಭವಾಗಲಿರುವ KCC (ಕನ್ನಡ ಚಲನಚಿತ್ರ ಕಪ್)ಪಂದ್ಯದ ಉದ್ಘಾಟನಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸುವುದಕ್ಕೆ. ಆದರೆ ಕರ್ನಾಟಕದಲ್ಲಿ ಮೇ.12 ರಂದು (ಮೇ.15 ಫಲಿತಾಂಶ) ಚುನಾವಣೆ ನಡೆಯಲಿರುವುದರಿಂದ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಸಮಾರಂಭದಲ್ಲಿ ಭಾಗವಿಸುವುದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏಪ್ರಿಲ್ 02 ರಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರನ್ನು ಸಹ ಸುದೀಪ್ ಭೇಟಿಯಾಗಿದ್ದರು. ಸುಮಾರು ಎರಡು ಗಂಟೆಗಳಲ ಕಾಲ ಎಚ್ಡಿಕೆ ಕುಟುಂಬದೊಡನೆ ಕಿಚ್ಚ ಮಾತುಕತೆ ನಡೆಸಿದ್ದು ರಾಜಕೀಯ ವಲಯದಲ್ಲಿ ಗುಸು ಗುಸು ಸೃಷ್ಟಿಸಿತ್ತು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications