ವಿಧಾನ ಪರಿಷತ್ ಚುನಾವಣೆ : ಕಟೀಲ್ಗೆ ಕೈ ತಪ್ಪಿದ ಬಿಜೆಪಿ ಟಿಕೆಟ್- ಅಚ್ಚರಿ ಅಭ್ಯರ್ಥಿ ಘೋಷಿಸಿದ ಬಿಜೆಪಿ ಹೈಕಮಾಂಡ್
ಬೆಂಗಳೂರು, ಅಕ್ಟೋಬರ್ 01: ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್‌ನ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅಕ್ಟೋಬರ್ 21 ಕ್ಕೆ ಚುನಾವಣಾ ದಿನಾಂಕ ನಿಗದಿಯಾದ ಬೆನ್ನಲ್ಲೇ ಟಿಕೆಟ್‌ಗಾಗಿ ಬಿಜೆಪಿ ಪಾಳಯದಲ್ಲಿ ಭಾರೀ ಪೈಪೋಟಿ ಶುರುವಾಗಿದೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆಯ ಒಂದು ಸ್ಥಾನಕ್ಕೆ ಹಲವು ನಾಯಕರು ಆಕಾಂಕ್ಷಿಗಳಿದ್ದು, ನಳಿನ್‌ಕುಮಾರ್ ಕಟೀಲ್, ಉದಯಕುಮಾರ್ ಶೆಟ್ಟಿ, ಪ್ರಮೋದ್ ಮಧ್ವರಾಜ್, ಕೆ.ಸುರೇಶ್ ಕುಮಾರ್ ಮತ್ತು ಸತೀಶ್ ಕಂಪಲ ಅವರ ಹೆಸರುಗಳು ಮುನ್ನೆಲೆಗೆ ಬಂದಿತ್ತು. ನಳಿನ್ ಕುಮಾರ್ ಕಟೀಲ್ ಅವರಿಗೆ ಬಹುತೇಕ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಲಿದೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ, ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಕಟೀಲ್ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಅಚ್ಚರಿ ಅಭ್ಯರ್ಥಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆಗೆ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತವಾಗಿ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ ನಳಿನ್ ಕುಮಾರ್‌ಕಟೀಲ್ ಅವರಿಗೆ ಹಿನ್ನಡೆಯಾಗಿದೆ.
ಅಭಿನಂದನೆ ಸಲ್ಲಿಸಿದ ಬಿ ವೈ ವಿಜಯೇಂದ್ರ
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆಗೆ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರು ಅಭಿನಂದನೆ ತಿಳಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿ ಸಾಮಾಜಿಕ ನ್ಯಾಯಕ್ಕೆ ನಿರಂತರ ಒತ್ತುಕೊಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಅತಿ ಹಿಂದುಳಿದ ಸಮಾಜಕ್ಕೆ ಸೇರಿದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಪಕ್ಷದ ವರಿಷ್ಠರು ಸಾಮಾಜಿಕ ನ್ಯಾಯ ಹಾಗೂ ಅವಕಾಶ ವಂಚಿತ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕೊಡುವ ಬದ್ಧತೆ ತೋರಿದ್ದಾರೆ ಇದಕ್ಕಾಗಿ ಪಕ್ಷದ ವರಿಷ್ಠರಾದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು, ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಜೆ ಪಿ ನಡ್ಡಾ ಅವರು ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಸೇರಿದಂತೆ ಪಕ್ಷದ ವರಿಷ್ಠರಿಗೆ ನಾನು ಕೃತಜ್ಞತಾಪೂರ್ವಕವಾಗಿ ಅಭಿನಂದಿಸುತ್ತೇನೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆಗೆ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅಭಿನಂದನೆಗಳು.
— Vijayendra Yediyurappa (@BYVijayendra) October 1, 2024
ಭಾರತೀಯ ಜನತಾ ಪಾರ್ಟಿ ಸಾಮಾಜಿಕ ನ್ಯಾಯಕ್ಕೆ ನಿರಂತರ ಒತ್ತುಕೊಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಅತಿ ಹಿಂದುಳಿದ ಸಮಾಜಕ್ಕೆ ಸೇರಿದ… pic.twitter.com/hMlmUvFBRL
ಕಿಶೋರ್ ಕುಮಾರ್ ಪುತ್ತೂರು ಅವರು ಇದುವರೆಗೂ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೋಟ ಶ್ರೀನಿವಾಸ್ ಪೂಜಾರಿ ಅವರ ಮಾದರಿಯಲ್ಲಿಯೇ ವಿಧಾನ ಪರಿಷತ್ತಿಗೆ ಚುನಾಯಿತರಾಗಿ ಪಕ್ಷದ ಸಿದ್ಧಾಂತ ಹಾಗೂ ಜನಪರ ಕಾಳಜಿಯ ದನಿಯಾಗಲಿ ಎಂದು ಹಾರೈಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ.












Click it and Unblock the Notifications