ನಂದಿನಿ ಹಾಲು, ಮೊಸರು, ತುಪ್ಪ ಸೇಫ್: ಅಪಪ್ರಚಾರ ಮಾಡಿದ್ರೆ ಕಠಿಣ ಕ್ರಮ: ಕೆಎಂಎಫ್ ಎಚ್ಚರಿಕೆ
ಇತ್ತೀಚೆಗೆ ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಕರ್ನಾಟಕ ಹಾಲು ಮಹಾಮಂಡಳಿಯ (KMF) ಜನಪ್ರಿಯ 'ನಂದಿನಿ' ಉತ್ಪನ್ನಗಳ ಗುಣಮಟ್ಟದ ಬಗ್ಗೆ ಸುಳ್ಳು ವದಂತಿಗಳು ಹರಿದಾಡುತ್ತಿವೆ. ಕೆಲವು ಕಿಡಿಗೇಡಿಗಳು ನಂದಿನಿ ಉತ್ಪನ್ನಗಳು ಕಳಪೆಯಾಗಿವೆ, ಅವುಗಳ ಸೇವನೆಯು ಆರೋಗ್ಯಕ್ಕೆ ಯೋಗ್ಯವಲ್ಲ ಮತ್ತು ಸುರಕ್ಷಿತವಲ್ಲ ಎಂದು ಬಿಂಬಿಸುವ ವಿಡಿಯೋ ಹಾಗೂ ಪೋಸ್ಟ್‌ಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಕುರಿತು ಎಚ್ಚೆತ್ತುಕೊಂಡಿರುವ ಕೆಎಂಎಫ್ ಇದೀಗ ಅಧಿಕೃತ ಸಾರ್ವಜನಿಕ ಪ್ರಕಟಣೆಯೊಂದನ್ನು ಹೊರಡಿಸಿದ್ದು, ರಾಜ್ಯದ ಜನತೆಗೆ ಹಾಗೂ ಗ್ರಾಹಕರಿಗೆ ಅಭಯ ನೀಡಿದೆ.
ತಮ್ಮ ಬಾಲ್ಯದಿಂದಲೂ ನಂದಿನಿ ಬ್ರ್ಯಾಂಡ್ ಮೇಲೆ ಅಪಾರ ನಂಬಿಕೆ ಇಟ್ಟು ಬೆಳೆದಿರುವ ಕೋಟ್ಯಂತರ ಗ್ರಾಹಕರಲ್ಲಿ ಇಂತಹ ದಿಕ್ಕುತಪ್ಪಿಸುವ ಸುಳ್ಳು ಸುದ್ದಿಗಳು ಅನಗತ್ಯ ಆತಂಕ ಹಾಗೂ ಗೊಂದಲವನ್ನು ಸೃಷ್ಟಿಸುತ್ತಿವೆ ಎಂಬುದನ್ನು ಒಕ್ಕೂಟ ಗಂಭೀರವಾಗಿ ಪರಿಗಣಿಸಿದೆ.

Hampi Case: ಪ್ರಕರಣ ನಡೆದು ಒಂದು ವರ್ಷದೊಳಗೆ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತಿರ್ಪು ನೀಡಿದ ಗಂಗಾವತಿ ಕೋರ್ಟ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಂಎಫ್, "ನಮ್ಮ ಸಂಸ್ಥೆಯು ಶಾಸನಬದ್ಧ ಸಂಸ್ಥೆಗಳು ಹಾಗೂ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ರೂಪಿಸಿರುವ ಅತ್ಯಂತ ಕಟ್ಟುನಿಟ್ಟಾದ, ಸುರಕ್ಷಿತ ಮತ್ತು ಅನುಮೋದಿತ ವಿಧಾನಗಳನ್ನು ಚಾಚೂತಪ್ಪದೆ ಪಾಲಿಸುತ್ತಿದೆ. ಪ್ರತಿಯೊಂದು ಹಂತದಲ್ಲೂ ಕಟ್ಟುನಿಟ್ಟಿನ ಗುಣಮಟ್ಟದ ತಪಾಸಣೆ ನಡೆಸಲಾಗುತ್ತದೆ. ಹೀಗಾಗಿ ನಮ್ಮ ಎಲ್ಲಾ ಹಾಲು ಮತ್ತು ಹಾಲಿನ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದಿಂದ ಕೂಡಿದ್ದು, ಸೇವನೆಗೆ ಸಂಪೂರ್ಣವಾಗಿ ಸುರಕ್ಷಿತವಾಗಿವೆ" ಎಂದು ಸ್ಪಷ್ಟಪಡಿಸಿದೆ.
ಯಾವುದೇ ಕಾರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಇಂತಹ ಆಧಾರರಹಿತ, ವೈಜ್ಞಾನಿಕ ಪುರಾವೆಗಳಿಲ್ಲದ ಹಾಗೂ ಸುಳ್ಳು ಆರೋಪಗಳಿಗೆ ಗ್ರಾಹಕರು ಕಿವಿಗೊಡಬಾರದು, ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಒಕ್ಕೂಟವು ಕಳಕಳಿಯ ಮನವಿ ಮಾಡಿದೆ. ದಶಕಗಳಿಂದ ಕನ್ನಡಿಗರ ಜೀವನಾಡಿಯಾಗಿರುವ ನಂದಿನಿ ಉತ್ಪನ್ನಗಳ ಶುದ್ಧತೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಅದು ಪುನರುಚ್ಚರಿಸಿದೆ.
ನಂದಿನಿ ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲ: ಡಿ.ಕೆ. ಸುರೇಶ್
ನಂದಿನಿ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ. ಸುರೇಶ್, "ನಂದಿನಿ ಬ್ರ್ಯಾಂಡ್ ತನ್ನ ಉನ್ನತ ಗುಣಮಟ್ಟಕ್ಕೆ ಹೆಸರಾಗಿದೆ. ನಮ್ಮ ಯಾವುದೇ ಉತ್ಪನ್ನಗಳಲ್ಲಿ ಕಲಬೆರಕೆ ಮಾಡುವ ಪ್ರಶ್ನೆಯೇ ಇಲ್ಲ. ಗ್ರಾಹಕರು ಮತ್ತು ರೈತರಿಗೆ ಅನ್ಯಾಯವಾಗುವಂತಹ ಯಾವುದೇ ಕೆಲಸವನ್ನು ನಾವು ಮಾಡುವುದಿಲ್ಲ," ಎಂದು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಆಧಾರರಹಿತ ಮತ್ತು ಸುಳ್ಳು ಪ್ರಚಾರಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಆಡಳಿತ ಮಂಡಳಿ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ನಂದಿನಿ ಸಂಸ್ಥೆಯು ಎಷ್ಟೇ ನಷ್ಟವಾದರೂ ಗುಣಮಟ್ಟದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿಲ್ಲ ಮತ್ತು ಮುಂದೆಯೂ ಆ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಕೆಲಸ ಮಾಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಕಾನೂನು ಕ್ರಮದ ಎಚ್ಚರಿಕೆ
ನಂದಿನಿ ಬ್ರ್ಯಾಂಡ್‌ನ ವರ್ಚಸ್ಸಿಗೆ ಉದ್ದೇಶಪೂರ್ವಕವಾಗಿ ಧಕ್ಕೆ ತರುವ ನಿಟ್ಟಿನಲ್ಲಿ ಮಾಡಲಾಗುತ್ತಿರುವ ಈ ಮಾನಹಾನಿಕರ ಹೇಳಿಕೆಗಳನ್ನು ಕೆಎಂಎಫ್ ಬಲವಾಗಿ ಖಂಡಿಸಿದೆ. ಕೇವಲ ಸ್ಪಷ್ಟನೆ ನೀಡುವುದಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣಗಳ ದುರ್ಬಳಕೆ ಮಾಡಿಕೊಂಡು ಇಂತಹ ದುಷ್ಕೃತ್ಯಗಳಲ್ಲಿ ತೊಡಗಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಕೆಎಂಎಫ್ ನಿರ್ಧರಿಸಿದೆ. ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ, ನಂದಿನಿ ಉತ್ಪನ್ನಗಳನ್ನು ಎಂದಿನಂತೆ ನಿರ್ಭಯವಾಗಿ ಬಳಸಬಹುದು ಎಂದು ಪ್ರಕಟಣೆಯಲ್ಲಿ ಭರವಸೆ ನೀಡಲಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications